ಬೆಂಗಳೂರು: ಹೊಸ ವರ್ಷವನ್ನು (New Year) ಇಡೀ ದೇಶವೇ ಸಂಭ್ರಮಿಸುತ್ತಿದೆ. ಅದರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಂತೂ (Bengaluru) ನ್ಯೂ ಇಯರ್‌ಗೆ ಗ್ರ್ಯಾಂಡ್ ವೆಲ್‍ಕಂ ಸಿಕ್ಕಿದೆ. ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದ ಮೈಸೂರು ಅರಮನೆಯಲ್ಲಿ ಪಟಾಕಿ ಸಿಡಿಸಿ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಲಾಯಿತು.
ಕೊರೊನಾದಿಂದಾಗಿ ಕಳೆದೆರಡು ವರ್ಷಗಳಿಂದ ಡಲ್ ಹೊಡೆದಿದ್ದ ಹೊಸ ವರ್ಷಾಚರಣೆ ಈ ಬಾರಿ ಗ್ರ್ಯಾಂಡ್ ಆಗಿ ಜರುಗಿದೆ. ಬೆಂಗಳೂರಿನ ಎಂಜಿ ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್‍ನಲ್ಲಂತೂ ಜನಸಾಗರವೇ ಸೇರಿದೆ. ಹಾಡು, ಕುಣಿತ, ಡ್ಯಾನ್ಸ್, ಮಸ್ತಿ ಮಾಡಿ, ಪಟಾಕಿ ಸಿಡಿಸಿ ಹೊಸ ವರ್ಷವನ್ನು ಬರಮಾಡಿಕೊಂಡರು. ಬಾರ್, ಪಬ್, ಕ್ಲಬ್‍ಗಳಲ್ಲಿ ಸೇರಿದ್ದ ಪಾರ್ಟಿ ಪ್ರಿಯರು ಸಖತ್ ಎಂಜಾಯ್ ಮಾಡಿದರು.
Advertisement
Advertisement
ಬೆಂಗಳೂರಿನ ಮುಖ್ಯ ರಸ್ತೆಗಳು ದೀಪಾಲಂಕಾರದಿಂದ ಮಿಂಚುತ್ತಿದೆ. ಕೆಲವರು ಕುಟುಂಬಸ್ಥರೊಂದಿಗೆ ಮನೆಯಲ್ಲಿ ಹೊಸ ವರ್ಷವನ್ನು ಸಂಭ್ರಮಿಸಿದರು. ಪ್ರೇಮಿಗಳು ಕೈ ಕೈ ಹಿಡಿದು ನಗರದ ಮುಖ್ಯ ರಸ್ತೆಗಳಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು. ಒಂದೆರಡು ಕಡೆ ಸಣ್ಣಪುಟ್ಟ ಗಲಾಟೆಗಳು ಹೊರತುಪಡಿಸಿ, ಉಳಿದಂತೆ ಸಿಲಿಕಾನ್ ಸಿಟಿಯಲ್ಲಿ ನ್ಯೂ ಇಯರ್ ಸಂಭ್ರಮಾಚರಣೆ ಯಶಸ್ವಿಯಾಗಿ ನಡೆದಿದೆ. 8,500ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಭದ್ರತೆ ವಹಿಸಿದ್ದರು. ಗಾಂಜಾ ಮತ್ತಿನಲ್ಲಿ ಗಲಾಟೆ- ಕಿಡಿಗೇಡಿಗಳು ಪೊಲೀಸರ ವಶಕ್ಕೆ
Advertisement
Advertisement
ಬೆಂಗಳೂರು ಮಾತ್ರವಲ್ಲ ಜಿಲ್ಲೆಗಳಲ್ಲೂ ಹೊಸ ವರ್ಷದ ಸಂಭ್ರಮಾಚರಣೆ ಅದ್ಧೂರಿಯಾಗಿದೆ. ಕಡಲನಗರಿ ಮಂಗಳೂರಿನಲ್ಲಿ ಡಿಜೆ ಸಾಂಗ್‍ಗಳ ಜೊತೆಗೆ ಯಕ್ಷಗಾನದ ಹಾಡುಗಳಿಗೆ ನೃತ್ಯ ಮಾಡಿ ಹೊಸ ವರ್ಷವನ್ನು ಜನ ಸ್ವಾಗತಿಸುತ್ತಿದ್ದಾರೆ. ಇದನ್ನೂ ಓದಿ: ಚರ್ಚ್ ಸ್ಟ್ರೀಟ್‌ನಲ್ಲಿ ಮಾರಾಮಾರಿ – ಲವರ್ ಮುಟ್ಟಿದ್ದಕ್ಕೆ ಬಿತ್ತು ಗೂಸಾ