ಅನುಮಾನಸ್ಪದವಾಗಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆ

Public TV
2 Min Read
BJP LOGO

ಕೋಲ್ಕತ್ತಾ: ಬಿಜೆಪಿ ಕಾರ್ಯಕರ್ತರೊಬ್ಬರು ನಿಗೂಢವಾಗಿ ಸಾವನ್ನಪ್ಪಿದ್ದು, ಉತ್ತರ ಕೋಲ್ಕತ್ತಾದ ಕಾಶಿಪುರ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ಮೃತದೇಹ ಪತ್ತೆಯಾಗಿದೆ.

ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಅರ್ಜುನ್ ಚೌರಾಸಿಯಾ ಅವರ ಮೃತದೇಹವು ಘೋಷ್ ಬಗಾನ್ ಪ್ರದೇಶದ ಕಟ್ಟಡವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಘಟನೆ ಕುರಿತು ಬಿಜೆಪಿಯು ಆಡಳಿತಾರೂಢ ಟಿಎಂಸಿ ವಿರುದ್ಧ ಕೊಲೆಗೈದಿದ್ದಾರೆ ಎಂದು ಆರೋಪಿಸಿದೆ. ಆದರೆ ಈ ಆರೋಪವನ್ನು ಟಿಎಂಸಿಯು ನಿರಾಕರಿಸಿದೆ.

tmc bjp

ಈ ಮಧ್ಯೆ ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ಶಾ ಇಂದು ಮಧ್ಯಾಹ್ನ ಚೌರಾಸಿಯಾ ನಿವಾಸಕ್ಕೆ ಭೇಟಿ ನೀಡಿದ್ದಾರೆ ಎಂದು ರಾಜ್ಯ ಬಿಜೆಪಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ. ಅವರು ಪಕ್ಷದ ದಕ್ಷ ಕಾರ್ಯಕರ್ತರಾಗಿದ್ದರು ಎಂದು ರಾಜ್ಯ ಬಿಜೆಪಿ ವಕ್ತಾರ ಸಾಮಿಕ್ ಭಟ್ಟಾಚಾರ್ಯ ಹೇಳಿದ್ದಾರೆ. ಈ ಸುದ್ದಿ ಕೇಳಿದ ನಂತರ ಅಮಿತ್ ಶಾ ಬೇಸರಗೊಂಡಿದ್ದಾರೆ. ಘಟನೆ ಹಿನ್ನೆಲೆ ಎನ್‍ಎಸ್‍ಸಿ ಬೋಸ್ ವಿಮಾನ ನಿಲ್ದಾಣದಲ್ಲಿ ಅವರ ಭವ್ಯ ಸ್ವಾಗತವನ್ನು ರದ್ದುಗೊಳಿಸಲು ಅವರು ನಮಗೆ ಹೇಳಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ. ಇದನ್ನೂ ಓದಿ: ರಾಯಚೂರಿನಲ್ಲಿ ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ ಪೊಲೀಸರ ಜಂಟಿ ಸಭೆ

AMITSHAH

ಶಾ ಅವರು ತಮ್ಮ ಎರಡು ದಿನಗಳ ಭೇಟಿಯ ಎರಡನೇ ಹಂತದಲ್ಲಿ ಉತ್ತರ ಬಂಗಾಳದಿಂದ ನಗರಕ್ಕೆ ಆಗಮಿಸಲಿದ್ದಾರೆ. ಬಿಜೆಪಿ ಆರೋಪವನ್ನು ತಳ್ಳಿಹಾಕಿದ ಟಿಎಂಸಿ ಸಂಸದ ಸಂತಾನು ಸೇನ್, ನಮ್ಮ ವಿರುದ್ಧದ ಆರೋಪಗಳು ಆಧಾರ ರಹಿತವಾಗಿವೆ. ಪೊಲೀಸರು ಈ ವಿಷಯವನ್ನು ತನಿಖೆ ಮಾಡಲಿ ಎಂದು ಹೇಳಿದ್ದಾರೆ.

Police Jeep

ಘಟನೆಯ ಕುರಿತು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚೌರಾಸಿಯಾ ಅವರ ಕುಟುಂಬದವರು ಅವರ ಸಾವಿನ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ. ಆದರೆ ಪೊಲೀಸರು ಸ್ಥಳದಿಂದ ಶವವನ್ನು ತೆಗೆದುಕೊಂಡು ಹೋಗಲು ಪ್ರಯತ್ನಿಸಿದಾಗ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದನ್ನೂ ಓದಿ: ಬಿಜೆಪಿ ನಾಯಕನನ್ನು ದೆಹಲಿ ಪೊಲೀಸರಿಗೆ ಮಾತ್ರ ಹಸ್ತಾಂತರಿಸುತ್ತೇವೆ: ಹರಿಯಾಣ ಗೃಹ ಸಚಿವ

ಘಟನಾ ಸ್ಥಳಕ್ಕೆ ದೌಡಾಯಿಸಿ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಮುಂದಾಗಿದ್ದಾರೆ. ಕೇಂದ್ರ ಗೃಹ ಸಚಿವರು ರಾಜ್ಯದಲ್ಲಿದ್ದಾಗ ಬಿಜೆಪಿ ಕಾರ್ಯಕರ್ತನನ್ನು ಹತ್ಯೆ ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ಸುಭಾಸ್ ಸರ್ಕಾರ್ ಹೇಳಿದ್ದಾರೆ.

CBI

ಶಾ ಅವರ ಭೇಟಿಯ ಸಂದರ್ಭದಲ್ಲಿ ಸಮಸ್ಯೆಯನ್ನು ಸೃಷ್ಟಿಸಲು ಕೇಸರಿ ಪಾಳಯದಲ್ಲಿನ ಆಂತರಿಕ ಕಲಹದಿಂದ ಇದು ಆತ್ಮಹತ್ಯೆಯೇ ಅಥವಾ ಕೊಲೆಯೇ ಎಂದು ಟಿಎಂಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕುನಾಲ್ ಘೋಷ್ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಕೇಸರಿ ಪಾಳಯದವರು ನಿರ್ಮಿಸಿರುವ ಚಿತ್ರಕಥೆ ಇದು ಎಂದರು. ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆಗಳ ಕುರಿತು ಶಾ ಗುರುವಾರ ಟಿಎಂಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *