ಮಮತಾಗೆ ಭರ್ಜರಿ ಜಯ – 2024ರಲ್ಲಿ ದೆಹಲಿಯಲ್ಲಿ ನಮ್ಮದೇ ಸರ್ಕಾರ ಎಂದ ಟಿಎಂಸಿ

By
1 Min Read

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಭವಾನಿಪುರ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 58 ಸಾವಿರಕ್ಕೂ ಅಧಿಕ ಮತಗಳಿಂದ ಜಯಗಳಿಸಿದ್ದಾರೆ.

ಇತ್ತೀಚಿನ ವರದಿಗಳು ಬಂದಾಗ ಮಮತಾ ಬ್ಯಾನರ್ಜಿ 84,709 ಮತಗಳನ್ನು ಪಡೆದಿದ್ದರೆ ಬಿಜೆಪಿಯಿಂದ ಸ್ಪರ್ಧಿಸಿದ್ದ ಪ್ರಿಯಾಂಕಾ ತಿಬ್ರೇವಾಲ್‌ 26,320, ಸಿಪಿಎಂನ ಶ್ರೀಜಿಬ್‌ ಬಿಸ್ವಾಸ್‌ 4,201 ಮತಗಳನ್ನು ಪಡೆದಿದ್ದಾರೆ. ಇದನ್ನೂ ಓದಿ: ಸಿಕ್ಕಿಂನಲ್ಲಿ ಮಿನರಲ್ ವಾಟರ್ ಬಾಟಲ್ ಬ್ಯಾನ್

ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿದ್ದ ಮಮತಾ ಸುವೇಂಧು ಅಧಿಕಾರಿಯ ವಿರುದ್ಧ ಸೋತಿದ್ದರು. ಮಂತ್ರಿಸ್ಥಾನವನ್ನು ಪಡೆದವರು 6 ತಿಂಗಳ ಒಳಗಡೆ ಚುನಾಯಿತರಾಗಬೇಕು. ಹೀಗಾಗಿ ಉಪಚುನಾವಣೆಯಲ್ಲಿ ಮಮತಾ ಸ್ಪರ್ಧಿಸಿ ಜಯಗಳಿಸಿದ್ದಾರೆ. ಇದನ್ನೂ ಓದಿ: ಡ್ರಗ್ಸ್ ಕೇಸ್- ಪ್ರಯಾಣಿಕರ ಸೋಗಿನಲ್ಲಿ ಟಿಕೆಟ್ ಬುಕ್, ಎನ್‍ಸಿಬಿ ರೋಚಕ ಕಾರ್ಯಾಚರಣೆ 

ಮಮತಾ ಬ್ಯಾನರ್ಜಿ ಜಯಗಳಿಸಿದ ಹಿನ್ನೆಲೆಯಲ್ಲಿ ಟಿಎಂಸಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ. ದೀದಿ ಜನರಿಗೆ ಕೆಲಸ ಮಾಡಿದ್ದು, ಈಗ ಮತ ನೀಡಿದ್ದಾರೆ. 2024ರಲ್ಲಿ ದೆಹಲಿಯಲ್ಲಿ ನಮ್ಮದೇ ಸರ್ಕಾರ ರಚನೆಯಾಗಲಿದೆ ಎಂದು ಮಮತಾ ಸಹೋದರ ಕಾರ್ತಿಕ್‌ ಹೇಳಿದ್ದಾರೆ. ಇದನ್ನೂ ಓದಿ: ನವೆಂಬರ್ ವೇಳೆಗೆ ಮಕ್ಕಳಿಗೆ ಲಸಿಕೆ ಸಾಧ್ಯತೆ: ಸುಧಾಕರ್

Share This Article
Exit mobile version