ಕೋಲ್ಕತ್ತಾ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮೇ 30ರಂದು ನಡೆಯಲಿರುವ ನರೇಂದ್ರ ಮೋದಿ ಅವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಹಾಜರಾಗುತ್ತೇನೆ ಎಂದು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಕೋಲ್ಕತ್ತಾದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಮೋದಿಯವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಮಾತನಾಡಿದ್ದೇನೆ. ಇದು ಪ್ರಮಾಣವಚನ ಕಾರ್ಯಕ್ರಮವಾಗಿದ್ದರಿಂದ ಹಾಜರಾಗಲು ಯೋಚಿಸಿದ್ದೇನೆ ಎಂದು ಸ್ಪಷ್ಟನೆ ನೀಡಿದರು.
Advertisement
West Bengal CM Mamata Banerjee on PM Modi's oath taking ceremony: I have spoken to other Chief Ministers also. Since it is a ceremonial program we thought of attending it.Yes I will go pic.twitter.com/qbgIomrvCL
— ANI (@ANI) May 28, 2019
Advertisement
ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಆದರೆ ಈಗ ರಾಜಕೀಯ ವೈರತ್ವ ಮರೆತು ಪ್ರಮಾಣವಚನ ಕಾರ್ಯಕ್ರಮಕ್ಕೆ ಆಮಂತ್ರಣ ನೀಡಿದ್ದಾರೆ.
Advertisement
ಸಿಎಂ ಕುಮಾರಸ್ವಾಮಿ ಅವರಿಗೂ ಇಂದು ಆಮಂತ್ರಣ ತಲುಪಿದೆ. ಆದರೆ ಕಾರ್ಯಕ್ರಮಕ್ಕೆ ಹಾಜರಾಗುವ ಕುರಿತು ಜೆಡಿಎಸ್ ವರಿಷ್ಠ, ತಂದೆ ಎಚ್.ಡಿ.ದೇವೇಗೌಡರ ಜೊತೆಗೆ ಸಿಎಂ ಚರ್ಚೆ ಮಾಡಲಿದ್ದಾರೆ. ಹೀಗಾಗಿ ನಾಳೆ ನಿರ್ಧಾರ ತಿಳಿಸಲಿದ್ದಾರೆ ಎಂದು ಪಕ್ಷದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
Advertisement
ಬಿಜೆಪಿಯು 2014ರ ಲೋಕಸಭಾ ಚುನಾವಣೆ ವೇಳೆ ಪಶ್ಚಿಮ ಬಂಗಾಳದ 42 ಕ್ಷೇತ್ರಗಳ ಪೈಕಿ ಕೇವಲ 2 ಕ್ಷೇತ್ರಗಳಲ್ಲಿ ಜಯ ಗಳಿಸಿತ್ತು. ಆದರೆ ಈ ಬಾರಿ ಪಶ್ಚಿಮ ಬಂಗಾಳ ಹಾಗೂ ಉತ್ತರ ಪ್ರದೇಶದ ಮೇಲೆ ಹೆಚ್ಚು ಗಮನ ಕೇಂದ್ರಿಕರಿಸಿತ್ತು. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೀದಿ ನಾಡಿನಲ್ಲಿ 17 ಬೃಹತ್ ಸಮಾವೇಶ ಕೈಗೊಂಡಿದ್ದರು. ಎಲ್ಲ ಪ್ರಯತ್ನಗಳ ಮೂಲಕ ಬಿಜೆಪಿಯು 18 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. 2014ರಲ್ಲಿ 34 ಕ್ಷೇತ್ರಗಳಲ್ಲಿ ಜಯ ಕಂಡಿದ್ದ ಟಿಎಂಸಿ ಈ ಬಾರಿ 22 ಸ್ಥಾನಕ್ಕೆ ಕುಸಿದಿದೆ.
ಲೋಕಸಭಾ ಚುನಾವಣೆ ಬಳಿಕ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ ಸರ್ಕಾರ ಬೀಳಿಸಲು ಆಪರೇಷನ್ ಕಮಲ ಭಾರೀ ಸದ್ದು ಮಾಡುತ್ತಿದೆ. ಈ ಮೂಲಕ ಟಿಎಂಸಿಯ ಇಬ್ಬರು ಶಾಸಕರು ಹಾಗೂ 50 ಜನ ಕೌನ್ಸಿಲರ್ ಗಳು ಇಂದು ಬಿಜೆಪಿ ಸೇರ್ಪಡೆಯಾಗಿದ್ದಾರೆ.
TMC MLAs Subhranshu Roy, Tusharkanti Bhattacharjee and CPM MLA Devendra Roy joined BJP today in Delhi. Subhranshu is the son of BJP leader Mukul Roy and had been suspended by TMC recently. https://t.co/ajgprN4Ept
— ANI (@ANI) May 28, 2019