Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಂಗಾಳದಲ್ಲಿ ಬಿಜೆಪಿಗೆ ಗೆಲುವಿನ ಮುನ್ಸೂಚನೆ – ದೊಡ್ಡ ಚಿಂತೆಯ ವಿಷಯ ಎಂದ ಬಾಂಗ್ಲಾ ಸಂಸದ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಂಗಾಳದಲ್ಲಿ ಬಿಜೆಪಿಗೆ ಗೆಲುವಿನ ಮುನ್ಸೂಚನೆ – ದೊಡ್ಡ ಚಿಂತೆಯ ವಿಷಯ ಎಂದ ಬಾಂಗ್ಲಾ ಸಂಸದ

Latest

ಬಂಗಾಳದಲ್ಲಿ ಬಿಜೆಪಿಗೆ ಗೆಲುವಿನ ಮುನ್ಸೂಚನೆ – ದೊಡ್ಡ ಚಿಂತೆಯ ವಿಷಯ ಎಂದ ಬಾಂಗ್ಲಾ ಸಂಸದ

Public TV
Last updated: May 1, 2026 10:02 am
Public TV
Share
3 Min Read
West Bengal exit poll sparks alarm in Dhaka Bangladesh MP Akhter Hossen fears refugee crisis if BJP wins
SHARE

– ಮತ್ತೊಂದು ದೊಡ್ಡ ನಿರಾಶ್ರಿತರ ಬಿಕ್ಕಟ್ಟು ಸೃಷ್ಟಿ
– ನಮಗೆ ಬಂದಿರುವ ಎಚ್ಚರಿಕೆಯ ಗಂಟೆ

ಢಾಕಾ: ಪಶ್ಚಿಮ ಬಂಗಾಳದ ವಿಧಾನಸಭಾ(West Bengal Election) ಚುನಾವಣೋತ್ತರ ಸಮೀಕ್ಷೆಗಳು (Exit Polls) ಬಿಜೆಪಿಗೆ ಬಹುಮತದ ಮುನ್ಸೂಚನೆ ನೀಡುತ್ತಿರುವುದು ನೆರೆ ರಾಷ್ಟ್ರ ಬಾಂಗ್ಲಾದೇಶದಲ್ಲಿ ತಲ್ಲಣ ಸೃಷ್ಟಿಸಿದೆ. ಈ ಬೆಳವಣಿಗೆಯು ಬಾಂಗ್ಲಾದೇಶಕ್ಕೆ ದೊಡ್ಡ ಮಟ್ಟದ ಆರ್ಥಿಕ ಮತ್ತು ಸಾಮಾಜಿಕ ಸವಾಲನ್ನು ತಂದೊಡ್ಡಲಿದೆ ಎಂದು ಬಾಂಗ್ಲಾದ ನೂತನ ಸಂಸದ ಅಖ್ತರ್ ಹೊಸ್ಸೇನ್(Akhter Hossen) ಕಳವಳ ವ್ಯಕ್ತಪಡಿಸಿದ್ದಾರೆ.

ಬಾಂಗ್ಲಾದೇಶದ(Bangladesh) ಸಂಸತ್ ಅಧಿವೇಶನದಲ್ಲಿ ಮಾತನಾಡಿದ ಅವರು, ಈ ಎಕ್ಸಿಟ್ ಪೋಲ್ ಫಲಿತಾಂಶಗಳನ್ನು “ಬಾಂಗ್ಲಾದೇಶಕ್ಕೆ ಬಂದಿರುವ ಎಚ್ಚರಿಕೆಯ ಗಂಟೆ” ಎಂದು ಬಣ್ಣಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ(BJP) ಅಧಿಕಾರಕ್ಕೆ ಬಂದರೆ, ಅಲ್ಲಿ ನೆಲೆಸಿರುವ ಬಾಂಗ್ಲಾ ವಲಸಿಗರನ್ನು ಮರಳಿ ಕಳುಹಿಸುವ ಪ್ರಕ್ರಿಯೆ ಆರಂಭವಾಗಬಹುದು. ಇದು ಬಾಂಗ್ಲಾದೇಶದ ಮೇಲೆ ಮತ್ತೊಂದು ಭೀಕರ ನಿರಾಶ್ರಿತರ ಹೊರೆ ಹೇರಲಿದೆ ಎಂದು ಹೊಸ್ಸೇನ್ ಎಚ್ಚರಿಸಿದ್ದಾರೆ.

Bangladeshi MP Akhter Hossen says exit polls showing BJP victory in West Bengal is a big worry for Bangladesh.

He says if BJP wins, illegal Bangladeshis will be thrown back to Bangladesh creating crisis for them.

Now understand why Bangladeshis love TMC pic.twitter.com/m1x21HF7Mq

— Frontalforce 🇮🇳 (@FrontalForce) April 30, 2026

ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ರಾಷ್ಟ್ರೀಯ ನಾಗರಿಕರ ನೋಂದಣಿ (NRC) ಜಾರಿಗೊಳಿಸಿದರೆ ಮತ್ತು ಅಕ್ರಮ ವಲಸಿಗರ ವಿರುದ್ಧ ಕಠಿಣ ಕ್ರಮ ಕೈಗೊಂಡರೆ ದೊಡ್ಡ ಸಂಖ್ಯೆಯಲ್ಲಿ ಜನರು ಗಡಿ ದಾಟಿ ಬಾಂಗ್ಲಾಕ್ಕೆ ನುಗ್ಗುವ ಸಾಧ್ಯತೆಯಿದೆ. ಈಗಾಗಲೇ ಲಕ್ಷಾಂತರ ರೋಹಿಂಗ್ಯಾ ನಿರಾಶ್ರಿತರಿಗೆ ಆಶ್ರಯ ನೀಡಿ ಹೈರಾಣಾಗಿರುವ ಬಾಂಗ್ಲಾದೇಶಕ್ಕೆ, ಈಗ ಭಾರತದಿಂದಲೂ ಜನರು ವಾಪಸ್ ಬಂದರೆ ಅದನ್ನು ನಿಭಾಯಿಸುವುದು ಅಸಾಧ್ಯದ ಮಾತು ಎಂಬ ಅಭಿಪ್ರಾಯನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕೋಲ್ಕತ್ತಾದಲ್ಲಿ ತಡರಾತ್ರಿ ಮಮತಾ ಹೈಡ್ರಾಮಾ – ಸ್ಟ್ರಾಂಗ್ ರೂಮ್‌ ತೆರೆದಿಲ್ಲ ಎಂದ ಆಯೋಗ

ಭಾರತದ ಗಡಿ ರಾಜ್ಯವೊಂದರಲ್ಲಿ ನಡೆಯುವ ರಾಜಕೀಯ ಬದಲಾವಣೆಗಳು ಬಾಂಗ್ಲಾದೇಶದ ಆಂತರಿಕ ಭದ್ರತೆ ಮತ್ತು ಗಡಿ ನಿರ್ವಹಣೆಯ ಮೇಲೆ ನೇರ ಪರಿಣಾಮ ಬೀರಲಿವೆ ಎಂದು ಅಖ್ತರ್ ಹೊಸ್ಸೇನ್ ಸಂಸತ್ತಿನಲ್ಲಿ ತಿಳಿಸಿದ್ದಾರೆ.

ಭಾರತದಲ್ಲಿನ ಬಿಜೆಪಿ ನಾಯಕರು ಅಕ್ರಮ ವಲಸಿಗರನ್ನು ಗುರಿಯಾಗಿಸಿಕೊಂಡು ನೀಡಿರುವ ಹೇಳಿಕೆಗಳು ಬಾಂಗ್ಲಾದೇಶದ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪಶ್ಚಿಮ ಬಂಗಾಳದ ಗಡಿ ಭಾಗಗಳಲ್ಲಿನ ಜನಸಂಖ್ಯಾ ಬದಲಾವಣೆಯ ಬಗ್ಗೆ ಬಿಜೆಪಿ ದಶಕಗಳಿಂದ ಧ್ವನಿ ಎತ್ತುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ, ಚುನಾವಣಾ ಫಲಿತಾಂಶವು ಒಂದು ವೇಳೆ ಸಮೀಕ್ಷೆಗಳಂತೆಯೇ ಬಂದರೆ, ಅದು ದಕ್ಷಿಣ ಏಷ್ಯಾದ ಭೌಗೋಳಿಕ ರಾಜಕೀಯದ ಮೇಲೆ ಭಾರಿ ಪರಿಣಾಮ ಬೀರುವುದು ಖಚಿತ ಎಂದೇ ವಿಶ್ಲೇಷಿಸಲಾಗುತ್ತದೆ.

ಯಾರಿದು ಅಖ್ತರ್‌ ಹೊಸ್ಸೇನ್‌?
ಅಖ್ತರ್ ಹೊಸ್ಸೇನ್  ಅವರು ಬಾಂಗ್ಲಾದೇಶದ ಒಬ್ಬ ಯುವ ರಾಜಕಾರಣಿಯಾಗಿದ್ದು 2024ರ ಬಾಂಗ್ಲಾದೇಶದ ಕೋಟಾ ಸುಧಾರಣಾ ಚಳವಳಿ ಮತ್ತು ಜನಪ್ರಿಯ ದಂಗೆಯ ಸಮಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಎನ್‌ಸಿಪಿ ಪಕ್ಷದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಇವರು ರಂಗ್‌ಪುರ ಕ್ಷೇತ್ರದಿಂದ ಸಂಸತ್‌ಗೆ ಆಯ್ಕೆಯಾಗಿದ್ದಾರೆ.

ಶೇಖ್ ಹಸೀನಾ ಅವರ 15 ವರ್ಷಗಳ ಆಡಳಿತವನ್ನು ಅಂತ್ಯಗೊಳಿಸಿದ 2024ರ ಬೃಹತ್ ವಿದ್ಯಾರ್ಥಿ ದಂಗೆಯಲ್ಲಿ ಎನ್‌ಸಿಪಿ ಮತ್ತು ಅದರ ನಾಯಕರು ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದರು. ಸದ್ಯ ಬಾಂಗ್ಲಾದೇಶದಲ್ಲಿ ಜಮಾತ್-ಎ-ಇಸ್ಲಾಮಿ ನೇತೃತ್ವದ 11 ಪಕ್ಷಗಳ ಒಕ್ಕೂಟ ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತಿದೆ. ಈ ಒಕ್ಕೂಟದಲ್ಲಿ ಎನ್‌ಸಿಪಿ ಸ್ಥಾನ ಪಡೆದಿದೆ.

TAGGED:Akhter Hossenbangladeshbjpexit pollsಅಖ್ತರ್ ಹೊಸ್ಸೇನ್ಎನ್‌ಆರ್‌ಸಿಚುನಾವಣೋತ್ತರ ಸಮೀಕ್ಷೆಬಿಜೆಪಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Untitled 1 copy
Districts

ದಂತ ಕಳೆದುಕೊಂಡ ಬಳಿಕ ಮತ್ತೆ ಕ್ಯಾಪ್ಟನ್‌ ಜೊತೆ ಕಾಳಗಕ್ಕೆ ಸಜ್ಜಾದ ಭೀಮಾ

Public TV
By Public TV
34 minutes ago
vlcsnap 2026 05 01 08h09m37s328
Districts

ಅಕಾಲಿಕ ಮಳೆಗೆ ಎಕರೆಗಟ್ಟಲೆ ಬಾಳೆ ಬೆಳೆ ನಾಶ – ರೈತರ ಕಣ್ಣೀರು

Public TV
By Public TV
45 minutes ago
silver worth crores of rupees looted after breaking through wall of MB Jewellers shop in Dasarahalli bengaluru
Bengaluru City

ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂತರ ರೂ.ಮೌಲ್ಯದ ಬೆಳ್ಳಿ ಲೂಟಿ!

Public TV
By Public TV
1 hour ago
Commercial LPG Cylinder 19kg
Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂ. ಏರಿಕೆ

Public TV
By Public TV
2 hours ago
West Bengal Election mamata banerjee late night high drama election commission says strong room not open
Latest

ಕೋಲ್ಕತ್ತಾದಲ್ಲಿ ತಡರಾತ್ರಿ ಮಮತಾ ಹೈಡ್ರಾಮಾ – ಸ್ಟ್ರಾಂಗ್ ರೂಮ್‌ ತೆರೆದಿಲ್ಲ ಎಂದ ಆಯೋಗ

Public TV
By Public TV
2 hours ago
Love
Latest

ನಿನಗಾಗಿ ಕಾಯ್ದಿರಿಸಿದ ಹೃದಯವಿದು ಅಂತ ನೀನ್ಯಾಕೆ ಹೇಳ್ತಿಲ್ಲ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?