ಕೋಲ್ಕತ್ತಾ: ದೆಹಲಿಯ ನಿರ್ಭಯಾ ಪ್ರಕರಣವನ್ನೇ ಹೋಲುವ ಭಯಾನಕ ಘಟನೆಯೊಂದು ಇದೀಗ ಪಶ್ಚಿಮ ಬಂಗಾಳದಲ್ಲಿ ನಡೆದಿರುವ ಬಗ್ಗೆ ತಡವಾಗಿ ಬೆಳಕಿಗೆ ಬಂದಿದೆ. 28 ವರ್ಷದ ಬುಡಕಟ್ಟು ಜನಾಂಗದ ಮಹಿಳೆಯೊಬ್ಬರ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ್ದಲ್ಲದೇ, ಬಳಿಕ ಆಕೆಯ ಗುಪ್ತಾಂಗಕ್ಕೆ ರಾಡೊಂದನ್ನು ತೂರಿದ್ದಾರೆ. ಸಂತ್ರಸ್ಥೆ ಮಾನಸಿಕ ಅಸ್ವಸ್ಥೆ ಎಂಬುದಾಗಿ ವರದಿಯಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ 45 ವರ್ಷದ ರಾಂಪ್ರಬೆಶ್ ಶರ್ಮಾ ಹಾಗೂ 50 ವರ್ಷದ ಅಂಧಾರು ಬರ್ಮನ್ ಎಂಬ ಇಬ್ಬರನ್ನು ಬಂಧಿಸಲಾಗಿದೆ. ಅಲ್ಲದೇ ಘಟನೆ ಕುರಿತಂತೆ ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಡಿಜಿ ಅನೂಜ್ ಶರ್ಮಾ ತಿಳಿಸಿದ್ದಾರೆ.
Advertisement
Advertisement
ಏನಿದು ಘಟನೆ?: ಫೆಬ್ರವರಿ 18 ರಂದು ಪಶ್ಚಿಮ ಬಂಗಾಳದ ದಿನಜಪೋರ್ ಜಿಲ್ಲೆಯ ಕುಶ್ಮುಂಡಿ ಪ್ರದೇಶದಲ್ಲಿ ಸಂತ್ರಸ್ತೆ ಉತ್ಸವವೊಂದಕ್ಕೆ ತೆರಳಿ ವಾಪಾಸ್ಸಾಗುತ್ತಿದ್ದ ಸಂದರ್ಭದಲ್ಲಿ ಕಾಮುಕರು ಈ ಕೃತ್ಯ ಎಸಗಿದ್ದಾರೆ. ಘಟನೆಯ ಬಳಿಕ ಚಿಂತಾನಜನಕ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಸ್ಥಳೀಯರು ರಾಯ್ಗಂಜ್ ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿಂದ ಮಲ್ಡಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಸದ್ಯ ಆಸ್ಪತ್ರೆಯಲ್ಲಿ ಮಹಿಳೆ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಘಟನೆ ಬಳಿಕ ಮಹಿಳೆ ನೆಲದಲ್ಲಿ ಒದ್ದಾಡುತ್ತಿರುವುದನ್ನು ಕಂಡು ಸ್ಥಳೀಯರು ಕೂಡಲೇ ನಮಗೆ ಮಾಹಿತಿ ರವಾನಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Advertisement
ಆಸ್ಪತ್ರೆಗೆ ದಾಖಲಾಗುವ ವೇಳೆ ಮಹಿಳೆಯ ಸ್ಥಿತಿ ಚಿಂತಾಜನಕವಾಗಿತ್ತು. ಇಲ್ಲಿಯವರೆಗೆ ಅವರನ್ನು ಸಿಸಿಯು(ಕ್ರಿಟಿಕಲ್ ಕೇರ್ ಯುನಿಟ್) ನಲ್ಲಿ ಇಡಲಾಗಿತ್ತು. ಸದ್ಯ ಅವರ ಆರೋಗ್ಯ ಸುಧಾರಿಸುತ್ತಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂಬುದಾಗಿ ಆಸ್ಪತ್ರೆಯ ಮೂಲಗಳು ತಿಳಿಸಿವೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಂಗಳವಾರ ಆಸ್ಪತ್ರೆಗೆ ಭೇಟಿ ನೀಡಿ, ಸಂತ್ರಸ್ತೆಯ ಆರೋಗ್ಯ ವಿಚಾರಿಸಿದ್ದಾರೆ.
Advertisement
ಮಹಿಳೆ ಅನಾಥೆ: ಸಂತ್ರಸ್ತೆ 10 ವರ್ಷಗಳ ಹಿಂದೆ ತನ್ನ ಹೆತ್ತವರನ್ನು ಕಳೆದುಕೊಂಡಿದ್ದು, ಒಬ್ಬರೇ ಜೀವನ ನಡೆಸುತ್ತಿದ್ದರು. ಅಲ್ಲದೇ ಕಳೆದ ಕೆಲ ವರ್ಷಗಳ ಹಿಂದೆ ಮದುವೆ ಕೂಡ ಆಗಿದ್ದು, ಈಕೆ ಮಾನಸಿಕ ಅಸ್ವಸ್ಥೆ ಎಂದು ತಿಳಿದ ಬಳಿಕ ಪತಿ ವಿಚ್ಚೇಧನ ನೀಡಿದ್ದಾನೆ. ಹೀಗಾಗಿ ಮಹಿಳೆ ಒಬ್ಬರೇ ಜೀವಿಸುತ್ತಿದ್ದು, ಇವರಿಗೆ ನೆರೆಹೊರೆಯವರು ಆಹಾರ ಕೊಡುತ್ತಿದ್ದರು.
ತನಿಖೆಗೆ ಬಿಜೆಪಿ ಒತ್ತಾಯ: ಜಿಲ್ಲೆಯಲ್ಲಿ ಇಂತಹ ಘಟನೆಗಳು ನಡೆಯುವುದು ಇದೇ ಮೊದಲಲ್ಲ. ಇಂತಹ ಅನೇಕ ಘಟನೆಗಳು ನಡೆಯುತ್ತಲೇ ಇರುತ್ತವೆ. ಆದ್ರೆ ಪೊಲೀಸರು ಇಂತಹ ಪ್ರಕರಣಗಳನ್ನು ಪೊಲೀಸರು ಕಡೆಗಣಿಸುತ್ತಿದ್ದಾರೆ. ಹೀಗಾಗಿ ಈ ಪ್ರಕರಣವನ್ನು ಪೊಲೀಸರು ತಳ್ಳಿ ಹಾಕುವ ಮೊದಲು ಸ್ಪಷ್ಟವಾಗಿ ತನಿಖೆ ನಡೆಸಿ ಮಹಿಳೆಗೆ ನ್ಯಾಯ ದೊರಕಿಸಿಕೊಡುವಂತೆ ಅಲ್ಲಿನ ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.