ಕೋಲ್ಕತ್ತಾ: ಪಶ್ಚಿಮ ಬಂಗಾಳದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ (DGP) ವಿವೇಕ್ ಸಹಾಯ್ ಅವರನ್ನು ನೇಮಕ ಮಾಡಲಾಗಿದೆ.
ಡಿಜಿಪಿ ಹುದ್ದೆಯಿಂದ IPS ರಾಜೀವ್ ಕುಮಾರ್ (Rajeev Kumar) ಅವರನ್ನು ವಜಾಗೊಳಿಸಿದ ನಂತರ ವಿವೇಕ್ ಸಹಾಯ್ (Vivek Sahay) ಅವರಿಗೆ ರಾಜ್ಯ ಪೊಲೀಸ್ ಮುಖ್ಯಸ್ಥರ ಜವಾಬ್ದಾರಿಯನ್ನು ನೀಡಲಾಗಿದೆ. ಮುಂದಿನ ಆದೇಶದವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ವಿವೇಕ್ ಸಹಾಯ್ ಅವರನ್ನು ರಾಜ್ಯಪಾಲರು ನೇಮಕ ಮಾಡಿದ್ದಾರೆ. ಸಾರ್ವಜನಿಕ ಸೇವೆಯ ಹಿತದೃಷ್ಟಿಯಿಂದ ಈ ನೇಮಕ ಮಾಡಲಾಗಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ನೋಟಿಸ್‌ನಲ್ಲಿ ಬರೆದಿದ್ದಾರೆ.
Advertisement
Advertisement
ವಿವೇಕ್ ಸಹಾಯ್ ಯಾರು?: ವಿವೇಕ್ ಸಹಾಯ್ ಅವರು ಪಶ್ಚಿಮ ಬಂಗಾಳ ಕೇಡರ್‌ನ 1988 ಬ್ಯಾಚ್‌ನ ಐಪಿಎಸ್ ಅಧಿಕಾರಿ. ಅವರು ಈ ಹಿಂದೆ ಡೈರೆಕ್ಟರ್ ಜನರಲ್ (ಡಿಜಿ), ಪ್ರಾವಿಶನಿಂಗ್ ಮತ್ತು ಗೃಹರಕ್ಷಕರ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಸಹಾಯ್ ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಭದ್ರತೆಯ ಉಸ್ತುವಾರಿಯನ್ನು ಸಹ ವಹಿಸಿದ್ದರು. ಆದರೆ 2021 ರ ಮಾರ್ಚ್ ನಲ್ಲಿ ಸಿಎಂ ಮೇಲಿನ ದಾಳಿಯ ನಂತರ ಅವರನ್ನು ಚುನಾವಣಾ ಆಯೋಗವು ಅಮಾನತುಗೊಳಿಸಿತು. ನಂತರ ಅವರನ್ನು ಭದ್ರತಾ ನಿರ್ದೇಶಕ ಹುದ್ದೆಗೆ ಭಡ್ತಿ ನೀಡಲಾಯಿತು. ಇದನ್ನೂ ಓದಿ: ಆರು ರಾಜ್ಯಗಳ ಗೃಹ ಕಾರ್ಯದರ್ಶಿಗಳ ಪದಚ್ಯುತಿಗೊಳಿಸಿ ಚುನಾವಣಾ ಆಯೋಗ ಆದೇಶ!
Advertisement
Advertisement
6 ರಾಜ್ಯಗಳ ಗೃಹ ಕಾರ್ಯದರ್ಶಿಗಳ ಪದಚ್ಯುತಿ: 2024ರ ಲೋಕಸಭಾ ಚುನಾವಣೆಗೆ (Lok Sabha Elections) ದಿನಾಂಕ ಘೋಷಣೆ ಮಾಡಿದ ಬೆನ್ನಲ್ಲೇ ಚುನಾವಣಾ ಆಯೋಗ 6 ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು (Home Secretaries) ಪದಚ್ಯುತಗೊಳಿಸಿ ಆದೇಶ ಹೊರಡಿಸಿದೆ. ಪಶ್ಚಿಮ ಬಂಗಾಳ ಡಿಜಿಪಿ ರಾಜೀವ್ ಕುಮಾರ್, ಗುಜರಾತ್, ಉತ್ತರ ಪ್ರದೇಶ, ಜಾರ್ಖಂಡ್, ಹಿಮಾಚಲ ಪ್ರದೇಶ, ಬಿಹಾರ ಹಾಗೂ ಉತ್ತರಾಖಂಡ ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ಚುನಾವಣಾ ಆಯೋಗವು ಪದಚ್ಯುತಿಗೊಳಿಸಿದೆ. ಅಷ್ಟೇ ಅಲ್ಲ, ಹಿಮಾಚಲ ಪ್ರದೇಶ ಹಾಗೂ ಮಿಜೋರಾಂನ ಸಾಮಾನ್ಯ ಆಡಳಿತ ಇಲಾಖೆಯ ಕಾರ್ಯದರ್ಶಿಗಳನ್ನು ಕೂಡ ವಜಾಗೊಳಿಸಿದೆ.