ಕೋಲ್ಕತ್ತಾ: ಭಾರತೀಯ ಸೇನೆಯ (Indian Army) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ (West Bengal) ಸೋಶಿಯಲ್ ಮೀಡಿಯಾ ಇನ್‌ಫ್ಲ್ಯೂಯೆನ್ಸರ್‌ನನ್ನು (Social Media Influencer) ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ನಾಡಿಯಾ ಜಿಲ್ಲೆಯ ಆರಂಗಟಾದ ಬಿಸ್ವಾಜಿತ್ ಬಿಸ್ವಾಸ್ ಎಂದು ಗುರುತಿಸಲಾಗಿದೆ. ಆರೋಪಿ ಭಾರತೀಯ ಸಶಸ್ತ್ರ ಪಡೆಗಳ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದ. ಆತನನ್ನು ಬಂಧಿಸಿ ಶನಿವಾರ ಮಧ್ಯಾಹ್ನ ನಾಡಿಯಾ ಜಿಲ್ಲೆಯ ಜಿಲ್ಲಾ ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿತ್ತು. ಈ ವೇಳೆ ಆರೋಪಿ ತನ್ನ ತಪ್ಪಿಗೆ ಕ್ಷಮೆಯಾಚಿಸಿದ್ದಾನೆ. ಇದನ್ನೂ ಓದಿ: ನನ್ನ ಹೃದಯ ಚೂರಾಗಿದೆ.. ನೋವು, ದುಃಖದಲ್ಲಿ ನರಳುತ್ತಿದ್ದೇನೆ: ಕಾಲ್ತುಳಿತ ದುರಂತಕ್ಕೆ ವಿಜಯ್ ಮೊದಲ ಪ್ರತಿಕ್ರಿಯೆ
ಬಿಸ್ವಾಸ್ ಆಗಾಗ ಫೇಸ್‌ಬುಕ್ ಲೈವ್‌ನಲ್ಲಿ ಬರುತ್ತಿದ್ದ. ಆಗೆಲ್ಲ ಸಶಸ್ತ್ರ ಪಡೆಗಳು ಮತ್ತು ಸಿಬ್ಬಂದಿಯನ್ನು ಅತ್ಯಂತ ಆಕ್ಷೇಪಾರ್ಹ ಮತ್ತು ಅವಹೇಳನಕಾರಿ ಭಾಷೆ ಬಳಸಿ ನಿಂದಿಸುತ್ತಿದ್ದ. ಈ ಬಗ್ಗೆ ಆತನ ನೆರೆಹೊರೆಯವರು ಹಾಗೂ ಸಾಮಾಜಿಕ ಮಾಧ್ಯಮದಲ್ಲಿದ್ದ ಕೆಲವು ಸ್ನೇಹಿತರು ಪೊಲೀಸರಿಗೆ ದೂರು ನೀಡಿದ್ದರು. ದೂರಿನಡಿ ಆತನನ್ನು ಬಂಧಿಸಲಾಗಿದೆ. ಆರೋಪಿ ಯಾವ ಉದ್ದೇಶಕ್ಕೆ ಈ ರೀತಿ ವರ್ತಿಸಿದ್ದಾನೆ ಎಂದು ಇನ್ನೂ ತಿಳಿದು ಬಂದಿಲ್ಲ.
ಆಪರೇಷನ್ ಸಿಂದೂರ್ ಸಮಯದಲ್ಲಿ ಸಹ ಪಶ್ಚಿಮ ಬಂಗಾಳದ ಕೆಲವು ಜನರು ಭಾರತೀಯ ಸೇನೆಯ ಬಗ್ಗೆ ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಮಾಡಿದ್ದರು. ಈ ಬಗ್ಗೆ ಪೊಲೀಸರು ತಕ್ಷಣವೇ ಅವರ ವಿರುದ್ಧ ಕ್ರಮ ಕೈಗೊಂಡಿದ್ದರು. ಇದನ್ನೂ ಓದಿ: Vijay Rally Stampede | ಸಾವಿನ ಸಂಖ್ಯೆ 39ಕ್ಕೆ ಏರಿಕೆ – 48 ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ
 


 
		 
		 
		 
		 
		
 
		 
		 
		 
		