ಕೋಲ್ಕತ್ತಾ: ಹಲವು ದಿನಗಳಿಂದ ತಲೆ ಮರೆಸಿಕೊಂಡಿದ್ದ ತೃಣಮೂಲ ಕಾಂಗ್ರೆಸ್ ನಾಯಕ ಜಹಾಂಗೀರ್ ಖಾನ್ (Jahangir Khan) ಅವರನ್ನ ಇಂದು ಮುಂಜಾನೆ ರಾಜ್ಯ ಪೊಲೀಸ್ ವಿಶೇಷ ಕಾರ್ಯಪಡೆ (STF) ಬಂಧಿಸಿದೆ.
ಹಲವು ದಿನಗಳಿಂದ ತಲೆ ಮರೆಸಿಕೊಂಡಿದ್ದ ಆತನನ್ನ ನೇಪಾಳ ಗಡಿಯಲ್ಲಿ (Nepal Border) ಎಸ್‌ಟಿಎಫ್ ತಂಡ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ದೀದಿ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ – 8 ಶಾಸಕರು, 6 ಸಂಸದರಷ್ಟೇ ಸಭೆಗೆ ಹಾಜರ್

ಪೊಲೀಸರ ಪ್ರಕಾರ, ಪಶ್ಚಿಮ ಬಂಗಾಳದ (West Bengal) ದಕ್ಷಿಣ-24 ಪರಗಣ ಜಿಲ್ಲೆಯ ಫಾಲ್ಟಾ ಪೊಲೀಸ್ ಠಾಣೆಯಲ್ಲಿ ಖಾನ್ ವಿರುದ್ಧ 7 ಎಫ್‌ಐಆರ್‌ಗಳು ದಾಖಲಾಗಿವೆ. ಪೊಲೀಸರ ತೀವ್ರ ಕಾರ್ಯಾಚರಣೆಯ ಹೊರತಾಗಿಯೂ ಆತ ತಲೆ ಮರೆಸಿಕೊಂಡು ತಿರುಗುತ್ತಿದ್ದ.
ಗುಪ್ತಚರ ಮಾಹಿತಿಗಳ ಆಧಾರದ ಮೇಲೆ ಖಾನ್ ಚಲನವಲನಗಳ ಬಗ್ಗೆ ತೀವ್ರ ನಿಗಾ ಇಟ್ಟಿದ್ದ ಎಸ್‌ಟಿಎಫ್, ಇಂದು ಮುಂಜಾನೆ ನೇಪಾಳ ಗಡಿಯಲ್ಲಿ ಬಂಧಿಸಿದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಹಠಾತ್ ಬಿರುಗಾಳಿ ಸಹಿತ ಮಳೆ – ದೆಹಲಿ ಏರ್‌ಪೋರ್ಟ್‌ನಲ್ಲಿ 3 ಏರ್ ಇಂಡಿಯಾ ವಿಮಾನಗಳು ಜಖಂ
