ಕಾರವಾರ: ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ಅ. 23 ರಂದು ನಡೆಯಲಿದ್ದು, ಅಂದು ಮತದಾರ ನೌಕರರು ಪೂರ್ವಾನುಮತಿ ಪಡೆಯುವ ಷರತ್ತಿಗೊಳಪಟ್ಟು ವಿಶೇಷ ಸಾಂದರ್ಭಿಕ ರಜೆ ಪಡೆಯಬಹುದು.
ಅರ್ಹ ಪದವೀಧರ ಮತದಾರರು ಮಾತ್ರ ಮತ ಚಲಾಯಿಸಲು ಈ ಸವಲತ್ತು ಪಡೆಯಬಹುದು.
ಮತಕ್ಷೇತ್ರ ವ್ಯಾಪ್ತಿಯ ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅರ್ಹ ಪದವೀಧರರಿಗೆ ಮಾತ್ರ ಇದು ಅನ್ವಯವಾಗಲಿದೆ ಎಂದು ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಕೆ.ಎಮ್.ಜಾನಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
