ಬ್ರಿಡ್ಜ್‌ಟೌನ್: ಇದೇ ಆಗಸ್ಟ್ 3 ರಿಂದ 13ರ ವರೆಗೆ ಟೀಂ ಇಂಡಿಯಾ (Team India) ವಿರುದ್ಧ ನಡೆಯಲಿರುವ 5 ಪಂದ್ಯಗಳ ಟಿ20 ಸರಣಿಗೆ ವೆಸ್ಟ್ ಇಂಡೀಸ್ ಬಲಿಷ್ಠ ತಂಡ ಪ್ರಕಟಿಸಿದ್ದು, ನಿಕೋಲಸ್ ಪೂರನ್ (Nicholas Pooran) ತಂಡಕ್ಕೆ ಕಂಬ್ಯಾಕ್ ಮಾಡಿದ್ದಾರೆ.
ಯುಎಸ್‌ನಲ್ಲಿ (USA) ಮೇಜರ್ ಕ್ರಿಕೆಟ್ ಲೀಗ್‌ನಲ್ಲಿ ಪಾಲ್ಗೊಂಡಿದ್ದ ಕಾರಣ ಏಕದಿನ ಕ್ರಿಕೆಟ್ ಟೂರ್ನಿಯಿಂದ ನಿಕೋಲಸ್ ಪೂರನ್ ಹೊರಗುಳಿದಿದ್ದರು. ಮುಂಬೈ ಇಂಡಿಯನ್ಸ್ ನ್ಯೂಯಾರ್ಕ್ ತಂಡದ ಪರ ಫೈನಲ್ ಪಂದ್ಯದಲ್ಲಿ ಬ್ಯಾಟಿಂಗ್ ಮಾಡಿದ್ದ ಪೂರನ್ ಸ್ಫೋಟಕ ಶತಕ ಸಿಡಿಸಿ ಚಾಂಪಿಯನ್ ಪಟ್ಟ ಗೆದ್ದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಟೀಂ ಇಂಡಿಯಾ ವಿರುದ್ಧ ನಡೆಯಲಿರುವ 5 ಪಂದ್ಯಗಳ ಟಿ20 ಸರಣಿಗೆ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ.
Advertisement
Advertisement
ರೋವ್ಮನ್ ಪೋವೆಲ್ (Rovman Powell) ತಂಡದ ನಾಯಕತ್ವ ವಹಿಸಿಕೊಂಡಿದ್ದು, ಕೈಲ್ ಮೇಯರ್ಸ್ ಉಪನಾಯಕನಾಗಿ ತಂಡವನ್ನ ಮುನ್ನಡೆಸಲಿದ್ದಾರೆ. ಶಿಮ್ರಾನ್ ಹೆಟ್ಮೇಯರ್, ಶಾಯ್ ಹೋಪ್, ಅಲ್ಝರಿ ಜೋಸೆಫ್, ಜೇಸನ್ ಹೋಲ್ಡರ್ ಮೊದಲಾದವರು ಬ್ಯಾಟಿಂಗ್ ಬಲ ತುಂಬುವ ನಿರೀಕ್ಷೆಯಲ್ಲಿದ್ದಾರೆ. 5 ಪಂದ್ಯಗಳ ಟಿ20 ಸರಣಿಯಲ್ಲಿ ಮೂರು ಪಂದ್ಯಗಳು ವೆಸ್ಟ್ ಇಂಡೀಸ್‌ನಲ್ಲಿ ನಡೆಯಲಿದ್ದು ಅಂತಿಮ ಎರಡು ಪಂದ್ಯಗಳು ಅಮೆರಿಕದಲ್ಲಿ ನಡೆಯಲಿದೆ. ಇದನ್ನೂ ಓದಿ: ಟೀಂ ಇಂಡಿಯಾಕ್ಕೆ ಭರ್ಜರಿ ಕಂಬ್ಯಾಕ್ – ಐರ್ಲೆಂಡ್ T20 ಸರಣಿಗೆ ಬುಮ್ರಾ ನಾಯಕ, ರಿಂಕು ಸಿಂಗ್‌ಗೆ ಚಾನ್ಸ್
Advertisement
Advertisement
ವೆಸ್ಟ್ ಇಂಡೀಸ್ ತಂಡ
ರೋವ್ಮನ್ ಪೊವೆಲ್ (ನಾಯಕ), ಕೈಲ್ ಮೇಯರ್ಸ್ (ಉಪ ನಾಯಕ), ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ಶಿಮ್ರೋನ್ ಹೆಟ್ಮೇರ್, ಜೇಸನ್ ಹೋಲ್ಡರ್, ಶೈಯ್ ಹೋಪ್, ಅಕಿಲ್ ಹೊಸೈನ್, ಅಲ್ಜಾರಿ ಜೋಸೆಫ್, ಬ್ರಾಂಡನ್ ಕಿಂಗ್, ಒಬೆಡ್ ಮೆಕಾಯ್, ನಿಕೋಲಸ್ ಪೂರನ್, ರೊಮಾರಿಯೋ ಶೆಫರ್ಡ್, ಓಡಿಯನ್ ಸ್ಮಿತ್, ಒಶಾನೆ ಥಾಮಸ್. ಇದನ್ನೂ ಓದಿ: 10 ಬೌಂಡರಿ, 13 ಸಿಕ್ಸರ್ – ನಿಕೋಲಸ್ ಪೂರನ್ ಸ್ಫೋಟಕ ಶತಕ; ವಿದೇಶದಲ್ಲೂ ಮುಂಬೈ ಚಾಂಪಿಯನ್
ಭಾರತ ಟಿ20 ತಂಡ
ಇಶಾನ್ ಕಿಶನ್, ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ(ನಾಯಕ), ಅಕ್ಷರ್ ಪಟೇಲ್, ಯಜುವೇಂದ್ರ ಚಾಹಲ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯಿ, ಅರ್ಷ್ದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.
ಯಾವ ದಿನ ಎಲ್ಲಿ ಪಂದ್ಯ:
ಮೊದಲ ಟಿ20 ಪಂದ್ಯ ಆಗಸ್ಟ್ 3, ಸ್ಥಳ: ಟ್ರಿನಿಡಾಡ್
2ನೇ ಟಿ20 ಪಂದ್ಯ ಆಗಸ್ಟ್ 6, ಸ್ಥಳ: ಗಯಾನಾ
3ನೇ ಟಿ20 ಪಂದ್ಯ ಆಗಸ್ಟ್ 8, ಸ್ಥಳ: ಗಯಾನಾ
4ನೇ ಟಿ20 ಪಂದ್ಯ ಆಗಸ್ಟ್ 12, ಸ್ಥಳ: ಫ್ಲೋರಿಡಾ
5ನೇ ಟಿ20 ಪಂದ್ಯ ಆಗಸ್ಟ್ 13, ಸ್ಥಳ: ಫ್ಲೋರಿಡಾ
Web Stories