ಮಾಸ್ಕೋ: ಪಾಶ್ಚಿಮಾತ್ಯ ರಾಷ್ಟ್ರಗಳು ಭಾರತ (India) ಮತ್ತು ಚೀನಾವನ್ನು (China) ಪರಸ್ಪರ ಎತ್ತಿಕಟ್ಟುತ್ತಿವೆ ಎಂದು ರಷ್ಯಾದ (Russia) ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ (Sergey Lavrov ಹೇಳಿದ್ದಾರೆ.
ಪಾಶ್ಚಿಮಾತ್ಯ ರಾಷ್ಟ್ರಗಳು ಚೀನಾ, ಭಾರತದ ಮೇಲೆ ಕಣ್ಣಿಟ್ಟಿದೆ. ಆಸಿಯಾನ್ ಭಾಗದಲ್ಲಿ ಪ್ರಮುಖ ಪಾತ್ರ ವಹಿಸಲು ಪಾಶ್ಚಿಮಾತ್ಯ ರಾಷ್ಟ್ರಗಳು ಈ ರೀತಿ ಮಾಡುತ್ತಿವೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಬಿಎಸ್‌ಎಫ್ ಯೋಧನಿಗೆ 20 ದಿನವೂ ಇನ್ನಿಲ್ಲದ ಟಾರ್ಚರ್ ನೀಡಿದ್ದ ಪಾಕ್
ಆಸಿಯಾನ್ ಪಾತ್ರವನ್ನು ದುರ್ಬಲಗೊಳಿಸಲು ಪಶ್ಚಿಮ ಪ್ರಯತ್ನಿಸುತ್ತಿದೆ. ಹೀಗಾಗಿ ಯುರೇಷಿಯಾದಲ್ಲಿ ಸಾಮೂಹಿಕ ಭದ್ರತಾ ವ್ಯವಸ್ಥೆಗಾಗಿ ಕಾಲ ಕೂಡಿ ಬಂದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಆಫ್ರಿಕಾದಲ್ಲಿ ಉಪ-ಪ್ರಾದೇಶಿಕ ಸ್ವರೂಪಗಳ ಜೊತೆಗೆ ಆಫ್ರಿಕನ್ ಒಕ್ಕೂಟ ಸ್ಥಾಪನೆಯಾಗಿದೆ. ಲ್ಯಾಟಿನ್ ಅಮೆರಿಕ ಮತ್ತು ಕೆರಿಬಿಯನ್‌ನಲ್ಲಿ ಲ್ಯಾಟಿನ್ ಅಮೆರಿಕನ್ ಮತ್ತು ಕೆರಿಬಿಯನ್ ರಾಜ್ಯಗಳ ಸಮುದಾಯ (CELAC) ರಚನೆಯಾಗಿದೆ. ಆದರೆ ಇಲ್ಲಿಯವರೆಗೆ ಯುರೇಷಿಯಾದಲ್ಲಿ ಇದುವರೆಗೂ ಅಂತಹ ಯಾವುದೇ ಸಾಮೂಹಿಕ ಸಂಘಟನೆ ರಚನೆಯಾಗಿಲ್ಲ ಎಂದು ತಿಳಿಸಿದರು.