-ಖಾನಾಪುರದ 13 ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸಂಪರ್ಕ ಸೇತುವೆ ಮುಳುಗಡೆ
-ಕೃಷ್ಣೆ, ಘಟಪ್ರಭಾ, ಮಲಪ್ರಭಾ ನದಿಗಳ ಒಳಹರಿವು ಹೆಚ್ಚಳ
ಬೆಳಗಾವಿ: ಪಶ್ಚಿಮ ಘಟ್ಟಗಳಲ್ಲಿ (Western Ghat) ಮಳೆ ಅಬ್ಬರಿಸುತ್ತಿದ್ದು, ಹೆಸ್ಕಾಂ ಅಧಿಕಾರಿಗಳ ಮನಸ್ಸೋ ಇಚ್ಛೆ ನಿರ್ಧಾರಕ್ಕೆ ಕಳೆದ 4 ದಿನಗಳಿಂದ 25 ಕಾಡಂಚಿನ ಗ್ರಾಮಗಳು ವಿದ್ಯುತ್ ಸಂಪರ್ಕವಿಲ್ಲದೇ ಕತ್ತಲಲ್ಲೇ ಕಾಲಕಳೆಯುತ್ತಿದ್ದಾರೆ.
ಬೆಳಗಾವಿ (Belagavi) ಜಿಲ್ಲೆಯ ಖಾನಾಪುರ (Khanapura) ತಾಲೂಕಿನ 25ಕ್ಕೂ ಅಧಿಕ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಗಾಳಿ ಹಾಗೂ ನಿರಂತರ ಮಳೆಯಾಗುತ್ತಿದ್ದು, ಈ ಸಂದರ್ಭದಲ್ಲಿ ಮರಗಳು ವಿದ್ಯುತ್ ಕಂಬಗಳ ಮೇಲೆ ಬಿದ್ದು ಅನಾಹುತ ಆಗಬಾರದು ಎಂಬ ನೆಪವೊಡ್ಡಿ ಹೆಸ್ಕಾಂ ಅಧಿಕಾರಿಗಳು ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಇದನ್ನೂ ಓದಿ: ಮುಂಬೈನಲ್ಲಿ ಮಳೆಯ ರೌದ್ರನರ್ತನ; ಒಟ್ಟು 10 ಸಾವು; ಇಂದು ಕೂಡ 43 ರೈಲು ಸಂಚಾರ ರದ್ದು
ಹೈಸ್ಕಾಂ ಅಧಿಕಾರಿಗಳ (HESCOM Officials) ಮನಸ್ಸೋ ಇಚ್ಛೆ ನಿರ್ಧಾರಕ್ಕೆ ಖಾನಾಪುರ ತಾಲೂಕಿನ ಹಬ್ಬಾನಟ್ಟಿ, ಆಮಗಾಂವ, ಕಾಲಮನಿ ಸೇರಿ 25 ಗ್ರಾಮಗಳ ನಿವಾಸಿಗಳು ಕತ್ತಲೆಯಲ್ಲಿ ಕಾಲ ಕಳೆಯುತ್ತಿದ್ದಾರೆ. ಕ್ಯಾಂಡಲ್ ಬೆಳಕಲ್ಲಿ ಮಕ್ಕಳು ಅಭ್ಯಾಸ ಮಾಡುತ್ತಿದ್ದರೆ, ಇತ್ತ ಕತ್ತಲೆಯಲ್ಲಿ ಅಡುಗೆ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ.

ಕೃಷ್ಣೆ, ಘಟಪ್ರಭಾ, ಮಲಪ್ರಭಾ ನದಿಗಳ ಒಳಹರಿವು ಹೆಚ್ಚಳ:
ಇನ್ನೂ ಕರ್ನಾಟಕ, ಮಹಾರಾಷ್ಟ್ರ ಭಾಗದ ಪಶ್ಚಿಮ ಘಟ್ಟಗಳಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಕ್ಷಣಕ್ಷಣಕ್ಕೂ ಕೃಷ್ಣಾ, ಘಟಪ್ರಭಾ, ಮಲಪ್ರಭಾ ನದಿಗಳ ಒಳಹರಿವು ಹೆಚ್ಚಾಗುತ್ತಿದೆ. ಸದ್ಯ ಕೃಷ್ಣಾ ನದಿಯ ಒಳಹರಿವು 1 ಲಕ್ಷ ಗಡಿ ತಲುಪಿದ್ದು, ಚಿಕ್ಕೋಡಿ ತಾಲೂಕಿನ ಕಲ್ಲೋಳ ಬ್ಯಾರೇಜ್ ಬಳಿ 99 ಸಾವಿರ ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಇತ್ತ ಘಟಪ್ರಭಾ ನದಿಯ ಒಳಹರಿವು 22,000 ಕ್ಯೂಸೆಕ್‌ಗೆ ಏರಿಕೆಯಾಗಿದ್ದು, ಇನ್ನೂ ಮಲಪ್ರಭಾ ನದಿಯ ಒಳಹರಿವು 5 ಸಾವಿರ ಕ್ಯೂಸೆಕ್‌ಗೆ ಏರಿಕೆಯಾಗಿದೆ. ಇದನ್ನೂ ಓದಿ: ಕೊಡಗಿನಲ್ಲಿ ಬಿರುಸು ಪಡೆದ ಮಳೆ – ಜಲಾವೃತ ಸೇತುವೆಯಿಂದ ಗ್ರಾಮಕ್ಕೆ ಸಂಪರ್ಕ ಕಡಿತ
ಒಂದೇ ರಾತ್ರಿಯಲ್ಲಿ ಮೂರು ಪ್ರಮುಖ ನದಿಗಳ ಒಳಹರಿವು ಹೆಚ್ಚಳವಾಗಿದ್ದು, ಹಿಡಕಲ್ ಜಲಾಶಯ ಹಾಗೂ ನವೀಲ್ ತೀರ್ಥ ಜಲಾಶಯದಲ್ಲಿ ನೀರನ ಸಂಗ್ರಹ ಮಟ್ಟ ಏರಿಕೆಯಾಗಿದೆ. ಇನ್ನೂ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಜನರಿಗೆ ಎಚ್ಚರಿಕೆಯಿಂದಿರಲು ಜಿಲ್ಲಾಡಳಿತ ಸೂಚಿಸಿದೆ.

ಖಾನಾಪುರದ 13 ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸಂಪರ್ಕ ಸೇತುವೆ ಮುಳುಗಡೆ:
ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಬಿಟ್ಟೂ ಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಖಾನಾಪುರದ 13 ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸಂಪರ್ಕ ಸೇತುವೆ ಮುಳುಗಡೆಯಾಗಿದೆ. ಮಲಪ್ರಭಾ ನದಿ ಮೈದುಂಬಿ ಹರಿಯುತ್ತಿರುವುದರಿಂದ ಅದಕ್ಕೆ ಅಡ್ಡಲಾಗಿ ನಿರ್ಮಿಸಿದ್ದ ಹಾಲಾತ್ರಿ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಾಗಿದ್ದರಿಂದ ಸದ್ಯ ಬೆಳಗಾವಿ ಜಿಲ್ಲೆಯ ಖಾನಾಪುರ-ಹೆಮ್ಮಡಗಾ ಸೇರಿ 13 ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಇದನ್ನೂ ಓದಿ: ಹಾಸನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ – ಬೇಲೂರು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಖಾನಾಪುರದ ಕಾಡಂಚಿನಲ್ಲಿರುವ ಇರುವ ಹಾಲಾತ್ರಿ ಸೇತುವೆ ಮುಳುಗಡೆಯಾಗಿದ್ದು, ಮುಂಜಾಗೃತಾ ಕ್ರಮವಾಗಿ ಬ್ಯಾರಿಕೇಡ್ ಅಳವಡಿಕೆ ಮಾಡಿ ಆ ಮಾರ್ಗದಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದೆ. ಸ್ಥಳದಲ್ಲಿ ಖಾನಾಪುರ ಠಾಣೆಯ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಯಾವುದೇ ಅಹಿತರಕ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ.
