ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಮತ್ತೆ ಭಾರತ, ಚೀನಾ, ರಷ್ಯಾವನ್ನು ಕೆಣಕಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಶಾಂಘೈ ಸಹಕಾರ ಒಕ್ಕೂಟದಲ್ಲಿ (SCO) ಈ ಮೂರು ದೇಶಗಳ ನಾಯಕರು ಭಾಗಿಯಾಗಿದ್ದನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣದಲ್ಲಿ ಮೊದಲ ಭಾರಿಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಾವು ಭಾರತ (India) ಮತ್ತು ರಷ್ಯಾವನ್ನು (Russia) ಚೀನಾಗೆ (China) ಬಿಟ್ಟು ಕೊಟ್ಟಿದ್ದೇವೆ. ಎರಡು ದೇಶಗಳ ಭವಿಷ್ಯ ಉಜ್ವಲವಾಗಿರಲಿ ಎಂದು ಟ್ರಂಪ್ ತಮ್ಮ ಟ್ರೂಥ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಅಷ್ಟೇ ಅಲ್ಲದೇ ನರೇಂದ್ರ ಮೋದಿ, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ನಡೆದುಕೊಂಡು ಹೋಗುತ್ತಿರುವ ಫೋಟೋವನ್ನು ಅಪ್ಲೋಡ್ ಮಾಡಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ಜೊತೆಗಿನ ಟ್ರಂಪ್ ವೈಯಕ್ತಿಕ ಬಾಂಧವ್ಯ ಈಗ ಇಲ್ಲ: ಅಮೆರಿಕ ಮಾಜಿ ಅಧಿಕಾರಿ
ಟಿಯಾಂಜಿನ್‌ನಲ್ಲಿ ನಡೆದ ಶಾಂಗೈ ಸಹಕಾರ ಸಂಸ್ಥೆ (SCO) ಶೃಂಗಸಭೆಯಲ್ಲಿ ಮೂರು ದೇಶಗಳ ನಾಯಕರು ಒಟ್ಟಿಗೆ ಕಾಣಿಸಿಕೊಂಡ ಕೆಲವು ದಿನಗಳ ನಂತರ, ಡೊನಾಲ್ಡ್ ಟ್ರಂಪ್ ಶುಕ್ರವಾರ ಭಾರತ ಮತ್ತು ಅಮೆರಿಕ ನಡುವಿನ ಸಂಬಂಧ ಕುಸಿದಿದೆ ಎಂದು ಬಹಿರಂಗವಾಗಿಯೇ ಹೇಳಿದ್ದಾರೆ. ಇದನ್ನೂ ಓದಿ: ಚೀನಾದಲ್ಲಿ ಪುಟಿನ್ ಜೊತೆ ಒಂದೇ ಕಾರಿನಲ್ಲಿ ಮೋದಿ ಪ್ರಯಾಣ
ಚೀನಾದ ಕ್ಸಿ ಜಿನ್‌ಪಿಂಗ್ ಆಯೋಜಿಸಿದ್ದ ಶೃಂಗಸಭೆಯಲ್ಲಿ ಮೂವರು ನಾಯಕರ ಭೇಟಿ ವಿಶ್ವಕ್ಕೆ ಒಂದು ಸಂದೇಶವನ್ನು ಕಳುಹಿಸಿದೆ. ಟ್ರಂಪ್ ಸುಂಕ ಸಮರದ ವಿರುದ್ಧ ಹೋರಾಡಲು ಮೂವರು ನಾಯಕರು ಒಂದಾಗಿದ್ದಾರೆ ಎಂದು ಬಣ್ಣಿಸಲಾಗುತ್ತಿದೆ.
ಮೊದಲ ಅವಧಿ ಚುನಾವಣೆಯ ಸಂದರ್ಭದಲ್ಲಿ ರಷ್ಯಾ ಸಹಾಯದಿಂದ ಟ್ರಂಪ್ ಗೆದ್ದಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಎರಡನೇ ಬಾರಿ ಟ್ರಂಪ್ ಚುನಾವಣೆಗೆ ನಿಂತಾಗ ಅಮೆರಿಕದಲ್ಲಿ ಹೌಡಿ ಮೋಡಿ ಹೆಸರಿನಲ್ಲಿ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಮೋದಿ (Narendra Modi) ಟ್ರಂಪ್ ಪರ ಮಾತನಾಡಿದ್ದರು. ಆದರೆ ಟ್ರಂಪ್ ಎರಡನೇ ಅವಧಿಯಲ್ಲಿ ಭಾರೀ ತೆರಿಗೆ ವಿಧಿಸಿ ಪುಟಿನ್ ಮತ್ತು ಮೋದಿ ವಿರುದ್ಧವೇ ಮಾತನಾಡಿ ಸಂಬಂಧವನ್ನು ಹಾಳು ಮಾಡಿಕೊಂಡಿದ್ದಾರೆ.