ಕಾಲಿವುಡ್ ನಟ ವಿಜಯ್ ದಳಪತಿ (Vijay Thalapathy) ಅವರು ಸಾಕಷ್ಟು ಸಮಯದಿಂದ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆ ಎಂಬ ಸುದ್ದಿ ಹಬ್ಬಿತ್ತು. ಈಗ ‘ತಮಿಳಿಗ ವೆಟ್ರಿ ಕಳಗಂ’ (TVK) ಎಂಬ ಪಕ್ಷ ಸ್ಥಾಪಿಸಿ ವಿಜಯ್ ರಾಜಕೀಯ (Politics) ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇದೀಗ ಈ ಹಿಂದೆ ಅವರು ನೀಡಿರುವ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.
ನೀವು ನಿಜ ಜೀವನದಲ್ಲಿ ಮುಖ್ಯಮಂತ್ರಿಯಾದರೆ ಏನಾಗುತ್ತದೆ ಎಂದು ಕೇಳಲಾಗಿತ್ತು. ಈ ಪ್ರಶ್ನೆ ವಿಜಯ್, ಸಿಎಂ ಆದರೆ ʻನಾನು ಎಂದಿಗೂ ನಟಿಸುವುದಿಲ್ಲ’ ಎಂದು ಉತ್ತರಿಸಿದ್ದರು. ರಾಜಕೀಯಕ್ಕೆ ವಿಜಯ್ ಎಂಟ್ರಿ ಕೊಟ್ಟಿರೋ ಬೆನ್ನಲ್ಲೇ ಸಿಎಂ ಸ್ಥಾನದ ಕುರಿತು ನೀಡಿದ್ದ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಇದನ್ನೂ ಓದಿ:ಇಂಡಿಯಾ ವಿಶ್ವಕಪ್ ಗೆದ್ದರೆ ಬೆತ್ತಲಾಗ್ತೀನಿ ಎಂದು ಚಾಲೆಂಜ್ ಹಾಕಿದ್ದ ಪೂನಂ
#தமிழகவெற்றிகழகம் #TVKVijay https://t.co/Szf7Kdnyvr
— Vijay (@actorvijay) February 2, 2024
ಸದ್ಯ ‘ತಮಿಳಿಗ ವೆಟ್ರಿ ಕಳಗಂ’ ಪಕ್ಷ ವಿಜಯ್ ಸ್ಥಾಪಿಸಿರುವುದಕ್ಕೆ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಅವರ ಮುಂದಿನ ನಡೆಗಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ.
ಕಳೆದ ನವೆಂಬರ್‌ನಲ್ಲಿ ತ್ರಿಷಾ ಜೊತೆಗಿನ ವಿಜಯ್ ದಳಪತಿ ಸಿನಿಮಾ ರಿಲೀಸ್ ಆದ್ಮೇಲೆ ಹೊಸ ಚಿತ್ರಗಳನ್ನು ವಿಜಯ್ ಒಪ್ಪಿಕೊಂಡಿದ್ದಾರೆ. ವಿಜಯ್ ಹೊಸ ಪಕ್ಷದ ಕೆಲಸದ ಜೊತೆಗೆ ಸಿನಿಮಾ ಮಾಡುವ ಹುಮ್ಮಸಿನಲ್ಲಿದ್ದಾರೆ.