ಬೆಂಗಳೂರು: ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗ ಜೆಡಿಎಸ್‌ಗೆ ಬಿಗ್ ಶಾಕ್ ತಗುಲಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಕಾರಣಕ್ಕೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಂಸತ್ ಸದಸ್ಯತ್ವವನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಆದ್ದರಿಂದ ಪ್ರಜ್ವಲ್ ರೇವಣ್ಣ ಅವರ ಮುಂದಿನ ನಡೆ ಏನು ಎಂಬುದು ಕುತೂಹಲ ಕೆರಳಿಸಿದೆ. ಪ್ರಜ್ವಲ್ ರೇವಣ್ಣ ಅವರಿಗೆ ಒಂದು ತಿಂಗಳು ಕಾಲವಕಾಶವಿದ್ದು, ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಬಹುದಾಗಿದೆ. ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ನಿಂದ ತಡೆ ತರಬಹುದು. ಒಂದು ವೇಳೆ ತಡೆಯಾಜ್ಞೆ ನೀಡದಿದ್ದರೆ ಆಯ್ಕೆ ಅಸಿಂಧು ಆಗಲಿದೆ. ಇದನ್ನೂ ಓದಿ: Exclusive: ಅನರ್ಹಗೊಂಡ ಬಳಿಕ ಫಸ್ಟ್ ರಿಯಾಕ್ಷನ್ – ಇದೆಲ್ಲ ದೇವರ ಪರೀಕ್ಷೆ ಎಂದ ಪ್ರಜ್ವಲ್ ರೇವಣ್ಣ
ಪ್ರಜ್ವಲ್ ಮೇಲಿನ ಆರೋಪಗಳೇನು?
ನೆಲಮಂಗಲ ಬಳಿಯ 265 ಎಕರೆ ಜಮೀನು ಘೋಷಣೆ ಮಾಡಿಲ್ಲ. ಬೇನಾಮಿ ಆಸ್ತಿ ಹೊಂದಿದ್ದಾರೆ, ಆದಾಯ ಮುಚ್ಚಿಟ್ಟಿದ್ದಾರೆ. ಚುನಾವಣೆಯಲ್ಲಿ ಗೆಲ್ಲಲು ಅಕ್ರಮ ಮತದಾನ ಮಾಡಿಸಿದ್ದಾರೆ. ಬೂತ್‌ನಲ್ಲಿ ಕುಳಿತು ಮತ ಹಾಕಿಸಿದ್ದಾರೆ ಎಂದು ಆರೋಪಿಸಿ ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿಯನ್ನು ಸುದೀರ್ಘ 4 ವರ್ಷ ವಿಚಾರಣೆ ನಡೆಸಿದ ಹೈಕೋರ್ಟ್ ಈಗ ತೀರ್ಪು ನೀಡಿದೆ. ಈ ಬಗ್ಗೆ ಶಾಸಕ ಎ ಎಂಜು ಮತ್ತು ದೇವರಾಜೇಗೌಡ ಸಂತಸ ವ್ಯಕ್ತಪಡಿಸಿದ್ದಾರೆ. ಯಾರು ಸುಳ್ಳು ಮಾಹಿತಿ ಕೊಡಬಾರದು ಎಂದಿದ್ದಾರೆ. ಕಾನೂನಿಗೆ ತಲೆಬಾಗೋದಾಗಿ ಪ್ರಜ್ವಲ್ ರೇವಣ್ಣ ಮತ್ತು ಶಾಸಕ ಹೆಚ್.ಡಿ ರೇವಣ್ಣ ಅಭಿಪ್ರಾಯಪಟ್ಟಿದ್ದಾರೆ. ಇದೀಗ ಅನರ್ಹ ಸಂಸದ ಪ್ರಜ್ವಲ್ ರೇವಣ್ಣ ಮುಂದಿನ ಕಾನೂನು ಹೋರಾಟಕ್ಕೆ ಆಣಿಯಾಗ್ತಿದ್ದಾರೆ.
ಲೋಕಸಮರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಪರಾಜಿತರಾಗಿದ್ದ ಹಾಲಿ ಜೆಡಿಎಸ್ ಶಾಸಕ ಎ ಮಂಜು ಮತ್ತು ದೇವರಾಜೇಗೌಡ ಅರ್ಜಿಯನ್ನ ನ್ಯಾ.ನಟರಾಜನ್ ಪೀಠ ಭಾಗಶಃ ಪುರಸ್ಕರಿಸಿದೆ. ಮೇಲ್ಮನವಿಗೆ ತಿಂಗಳ ಸಮಯ ನೀಡಿದೆ. ಇನ್ನು ಪ್ರಜ್ವಲ್ ಚುನಾವಣಾ ಅಕ್ರಮದಲ್ಲಿ ಭಾಗಿಯಾಗಿರುವ ಕಾರಣ ತನ್ನನ್ನು ವಿಜೇತರನ್ನಾಗಿ ಘೋಷಿಸಬೇಕು ಎಂಬ ಎ.ಮಂಜು ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಇದನ್ನೂ ಓದಿ: ಹೆಚ್.ಡಿ. ರೇವಣ್ಣ ಕುಟುಂಬವನ್ನ ರಾಜಕೀಯದಿಂದ ಶಾಶ್ವತವಾಗಿ ತೆಗೆಯುವುದೇ ನನ್ನ ಗುರಿ: ದೂರುದಾರ ದೇವರಾಜೇಗೌಡ
ಅಲ್ಲದೇ, ಚುನಾವಣಾ ಅಕ್ರಮದಲ್ಲಿ ಭಾಗಿಯಾದ ಆರೋಪದ ಮೇಲೆ ಹೆಚ್.ಡಿ ರೇವಣ್ಣ, ಎಂಎಲ್‌ಸಿ ಸೂರಜ್ ರೇವಣ್ಣ, ದೂರುದಾರ ಎ ಮಂಜುಗೆ ನೋಟಿಸ್ ಜಾರಿ ಮಾಡಿದೆ. ಪ್ರಜ್ವಲ್ ರೇವಣ್ಣ ಚುನಾವಣಾ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ.
Web Stories