ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠದಲ್ಲಿ (Udupi Sri Krishna Matha) ಲಕ್ಷ ಕಂಠ ಭಗವದ್ಗೀತೆ ಪಠಣ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಮಿಸುತ್ತಿದ್ದಾರೆ. ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಬಂದಿಳಿಯುವ ನಮೋ, ಉಡುಪಿಗೆ ಸೇನಾ ಹೆಲಿಕಾಪ್ಟರ್ ನಲ್ಲಿ ಆಗಮಿಸಲಿದ್ದಾರೆ.
3 ಹೆಲಿಕಾಪ್ಟರ್‌ಗಳು ಏಕಕಾಲಕ್ಕೆ ಆಗಮಿಸುವುದರಿಂದ 60 ಲಕ್ಷ ರೂಪಾಯಿ ವೆಚ್ಚದಲ್ಲಿ ಹೊಸ ಹೆಲಿಪ್ಯಾಡನ್ನ ಆದಿಉಡುಪಿಯಲ್ಲಿ ನಿರ್ಮಾಣ ಮಾಡಲಾಗಿದೆ. ಆವರಣದೊಳಗೆ ಹೊರಗೆ ವಿಶಾಲ ರಸ್ತೆ ನಿರ್ಮಿಸಲಾಗಿದೆ.

ರಥ ಬೀದಿಯಲ್ಲಿ ಮೋದಿ ಕಾರ್ಯಕ್ರಮ ಏನು?
ಇಲ್ಲಿನ ಉಡುಪಿ ಶ್ರೀ ಕೃಷ್ಣ ಮಠಕ್ಕೆ ರಥಬೀದಿ ಮೂಲಕ ಶುಕ್ರವಾರ ಆಗಮಿಸುವ ಪ್ರಧಾನಿ ಮೋದಿ ಮೊದಲು ಕನಕನ ಕಿಂಡಿಯ ಮೂಲಕ ಶ್ರೀ ಕೃಷ್ಣ ದೇವರ ದರ್ಶನ ಪಡೆಯಲಿದ್ದಾರೆ. ಸುವರ್ಣ ಕನಕನ ಕಿಂಡಿ ಉದ್ಘಾಟಿಸಿ ಕನಕದಾಸರ ಗುಡಿ ದರ್ಶನ ಮಾಡಲಿದ್ದಾರೆ. ಮಠದೊಳಗೆ ಬಂದು ಮಧ್ವ ಸರೋವರದಲ್ಲಿ ತೀರ್ಥ ಪ್ರೋಕ್ಷಣೆಗೈದು ಶ್ರೀಕೃಷ್ಣನ ದರ್ಶನ ಮಾಡುತ್ತಾರೆ. ಚಿನ್ನದ ತೀರ್ಥ ಮಂಟಪ ಉದ್ಘಾಟಿಸಿ, ಅಷ್ಟಮಠಾಧೀಶರನ್ನ ಭೇಟಿ ಮಾಡಿ ಪ್ರಸಾದ ಸ್ವೀಕರಿಸಲಿದ್ದಾರೆ. ಜೊತೆಗೆ ಗೀತಾ ಮಂದಿರಕ್ಕೂ ಭೇಟಿ ಕೊಡುತ್ತಾರೆ.

