ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬಜೆಟ್ ನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಒಟ್ಟಾರೆಯಾಗಿ 237 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದಾರೆ.
ಹೊಸ ಯೋಜನೆಗಳು:
ಬಾಲಕಿಯರಿಗೆ ಪ್ರತ್ಯೇಕ ವಸತಿ ನಿಲಯಗಳ ವ್ಯವಸ್ಥೆ ಕಲ್ಪಿಸುವುದು ಅತ್ಯಗತ್ಯವಾಗಿರುವುದರಿಂದ, ಕಳೆದ 4 ವರ್ಷಗಳಲ್ಲಿ ಮಹಿಳಾ ಕ್ರೀಡಾಪಟುಗಳಿಗಾಗಿ ಪ್ರತ್ಯೇಕ ಕ್ರೀಡಾ ವಸತಿ ನಿಲಯಗಳನ್ನು ನಿರ್ಮಿಸಲು ಮಂಜೂರಾತಿ ನೀಡಲಾಗಿದೆ. ಅಷ್ಟೇ ಅಲ್ಲದೇ, 2018-19ನೇ ಸಾಲಿನಲ್ಲಿ ರಾಜ್ಯದ 5 ಜಿಲ್ಲೆಗಳಲ್ಲಿ ಎಲ್ಲಾ ರೀತಿಯ ಸೌಲಭ್ಯಗಳನ್ನು ಒಳಗೊಂಡ ಸುಸಜ್ಜಿತ ಪ್ರತ್ಯೇಕ ಮಹಿಳಾ ವಸತಿ ನಿಲಯಗಳ ಪ್ರಾರಂಭ.
Advertisement
Advertisement
`ನಾಡಹಬ್ಬ ದಸರಾ’ ಅಂಗವಾಗಿ ಮೈಸೂರಿನಲ್ಲಿ ಪ್ರತಿ ವರ್ಷ ಆಯೋಜಿಸುವ ರಾಜ್ಯ ದಸರಾ ಕ್ರೀಡಾಕೂಟವನ್ನು, ರಾಷ್ಟ್ರೀಯ ಕ್ರೀಡಾಕೂಟದಂತೆ ವಿವಿಧ ಹಂತಗಳಲ್ಲಿ ಆಯೋಜಿಸಲು ಮತ್ತು ರಾಜ್ಯ ಮಟ್ಟದ ಕ್ರೀಡಾಕೂಟವನ್ನು `ದಸರಾ-ಸಿ.ಎಂ. ಕಪ್’ ಆಗಿ ನಾಡಹಬ್ಬ ದಸರಾ ಸಂದರ್ಭದಲ್ಲಿ ಮೈಸೂರಿನಲ್ಲಿ ಆಯೋಜಿಸಲು 7 ಕೋಟಿ ರೂ.ಗಳ ಅನುದಾನ.
Advertisement
ಯುವಜನರಿಗೆ ಶಿಕ್ಷಣ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿ ಒದಗಿಸಲು ವರ್ಷದ 365 ದಿನವೂ ಕಾರ್ಯನಿರ್ವಹಿಸುವ `ಯುವ ಸಹಾಯವಾಣಿ’ ಆರಂಭ.
Advertisement
ರಾಜ್ಯದಲ್ಲಿ ಕ್ರೀಡಾ ಶಿಕ್ಷಣ, ಕ್ರೀಡಾ ಕ್ಷೇತ್ರದಲ್ಲಿ ಪರಿಣಿತ ಮಾನವ ಸಂಪನ್ಮೂಲದ ಅಭಿವೃದ್ಧಿ ಹಾಗೂ ಸಂಶೋಧನೆಗೆ ಉತ್ತೇಜನ ನೀಡುವ ದೃಷ್ಟಿಯಿಂದ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ `ಕರ್ನಾಟಕ ಕ್ರೀಡಾ ವಿಶ್ವವಿದ್ಯಾಲಯ’ ದ ಸ್ಥಾಪನೆ.
ಬೆಂಗಳೂರು ಮಹಾನಗರ ವಿಶ್ವದ ಪ್ರಮುಖ ನಗರಗಳಲ್ಲಿ ಒಂದಾಗಿ ಗುರುತಿಸಿಕೊಂಡಿದ್ದು, ವಿಶ್ವ ದರ್ಜೆಯ ಕ್ರೀಡಾ ಸೌಲಭ್ಯಗಳನ್ನು ಹೊಂದುವುದು ಅಗತ್ಯ. ಆದುದರಿಂದ ದೇವನಹಳ್ಳಿ, ಹೆಚ್.ಎಸ್.ಆರ್. ಬಡಾವಣೆ, ತಾವರೆಕೆರೆ ಹಾಗೂ ವರ್ತೂರುಗಳಲ್ಲಿ ಆಧುನಿಕ ಕ್ರೀಡಾ ಸೌಲಭ್ಯಗಳನ್ನು 20 ಕೋಟಿ ರೂ. ಗಳ ವೆಚ್ಚದಲ್ಲಿ ಸೃಜಿಸಲಾಗುವುದು.
ಗ್ರಾಮೀಣ ಮಣ್ಣಿನ ಕುಸ್ತಿ ಕ್ರೀಡೆಗೆ ಉತ್ತೇಜನ ನೀಡುವ ದೃಷ್ಟಿಯಿಂದ ಜಾಗತಿಕ ಮಟ್ಟದ ವಾರ್ಷಿಕ `ಕರ್ನಾಟಕ ಕುಸ್ತಿ ಹಬ್ಬ’ ದ ಆಯೋಜನೆ. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹೊರಾಂಗಣ ಜಿಮ್ ಸೌಕರ್ಯ ಕಲ್ಪನೆ.