ಬೆಂಗಳೂರು: ಸಿದ್ದರಾಮಯ್ಯ ಮತ್ತೆ ಸಿಎಂ ಆಗ್ಬೇಕು ಅಂತ ಕಾಂಗ್ರೆಸ್‍ನ 60ಕ್ಕೂ ಹೆಚ್ಚು ಶಾಸಕರು ಬಯಸಿದ್ದಾರೆ ಅನ್ನೋ ಕಂಪ್ಲಿ ಶಾಸಕ ಜೆ ಎನ್ ಗಣೇಶ್ ಮಾತಿಗೆ ಸಮನ್ವಯ ಸಮಿತಿ ಮುಖ್ಯಸ್ಥರೂ ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಶಾಸಕರು ಅವರವರ ಅಭಿಪ್ರಾಯ ಹೇಳಿದ್ದಾರೆ. ಅದಕ್ಕೆ ನಾನೇನು ಮಾಡಲಿ. ಈಗ ಸಿಎಂ ಕುರ್ಚಿ ಖಾಲಿ ಇಲ್ಲ. ಸಿಎಂ ಆಗೋಕೆ ಕುರ್ಚಿ ಎಲ್ಲಿ ಖಾಲಿ ಇದೆ ಅಂತ ಪ್ರಶ್ನಿಸಿದ ಅವರು, ಮುಂದಿನ ಬಾರಿ ನೋಡೋಣ ಅಂತ ಉತ್ತರಿಸಿದ್ದಾರೆ.
Advertisement
ಡಿಸೆಂಬರ್ 22ರಂದು ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆ ಆಗಲಿದೆ. ಡಿಸೆಂಬರ್ 21ರಂದು ಬೆಳಗಾವಿ ಅಧಿವೇಶನ ಮುಗಿಯುತ್ತದೆ. ಅವತ್ತೇ ಸಂಜೆ ನಾವೆಲ್ಲ ದೆಹಲಿಗೆ ಹೋಗಿ ರಾಹುಲ್ ಗಾಂಧಿ ಜೊತೆ ಮಾತಾಡ್ತೇವೆ. ಯಾರೆಲ್ಲಾ ಮಂತ್ರಿ ಆಗ್ತಾರೆ ಅಂತ ಅವತ್ತೇ ಘೋಷಣೆ ಆಗುತ್ತೆ ಅಂತ ಸಿದ್ದರಾಮಯ್ಯ ಹೇಳಿದ್ದಾರೆ.
Advertisement
Advertisement
ತಮ್ಮ ಸರ್ಕಾರದ ಅವಧಿಯಲ್ಲಿ 35 ಸಾವಿರ ಕೋಟಿ ಹಗರಣ ಆಗಿದೆ ಅನ್ನೋ ಬಿಜೆಪಿ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಲ್ಲ. ನಮ್ಮಲ್ಲಿ ಯಾರೂ ಜೈಲಿಗೆ ಹೋಗಿಲ್ಲ. ನಾವು ಯಾವುದೇ ಅಕ್ರಮ ಮಾಡಿಲ್ಲ ಅಂತ ಪ್ರತಿ ಏಟು ನೀಡಿದ್ದಾರೆ.
Advertisement
ಕಂಪ್ಲಿ ಶಾಸಕ ಹೇಳಿದ್ದೇನು?:
ಕಂಪ್ಲಿ ಕ್ಷೇತ್ರದ ಶಾಸಕ ಜೆ ಎನ್ ಗಣೇಶ್ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಸಿದ್ದರಾಮಯ್ಯ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗಬೇಕು. ಸುಮಾರು 40-50 ಮಂದಿ ಶಾಸಕರು ಕೂಡ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಈ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಮಾಡಬೇಕು ಎಂಬುದು ಅನಿಸಿಕೆಯನ್ನು ಹೊಂದಿದ್ದಾರೆ ಅಂತ ಹೇಳಿದ್ದರು.
ಮುಂದೆ ಅಥವಾ ಇನ್ನೊಂದು ಚುನಾವಣೆಗೆ ಸಿಎಂ ಆಗೋದು ಬೇರೆ ವಿಚಾರವಾಗಿದೆ. ಆದ್ರೆ ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಹೀಗಾಗಿ ಅವರು ಮತ್ತೊಮ್ಮೆ ಸಿಎಂ ಆಗಬೇಕೆಂಬುದು ನಮ್ಮ ಕನಸಾಗಿದೆ. ಹಾಲಿ ಮುಖ್ಯಮಂತ್ರಿಗಳ ಅಧಿಕಾರದಲ್ಲಿ ಆಕ್ಷೇಪಣೆ ಇಲ್ಲ. ಇದು ನಮ್ಮ ವೈಯಕ್ತಿಕ ಅಭಿಪ್ರಾಯವಾಗಿದೆ. ಮುಂಬರುವ ದಿನಗಳಲ್ಲಿ ಮತ್ತೊಮ್ಮೆ ಸಂಘಟನೆ ಮಾಡಿ, ಸಿದ್ದರಾಮಯ್ಯ ಅವರನ್ನು ಮತ್ತೊಮ್ಮೆ ಮುಖ್ಯಮಂತ್ರಿ ಮಾಡುವ ಕನಸು ಇಟ್ಟುಕೊಂಡಿದ್ದೇವೆ ಎಂದಿದ್ದರು.
ಈ ಬಗ್ಗೆ ಯಾವುದೇ ಕಾರ್ಯತಂತ್ರಗಳನ್ನು ರೂಪಿಸಿಲ್ಲ ಅಂತ ಸ್ಪಷ್ಟಪಡಿಸಿದ ಅವರು, ಸದ್ಯ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವಿದ್ದು, ಮುಂಬರುವ ದಿನಗಳಲ್ಲಿ ಈ ಬಗ್ಗೆ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಬಳಿ ಚರ್ಚೆ ನಡೆಸಿ, ತೀರ್ಮಾನ ತೆಗೆದುಕೊಳ್ಳುತ್ತೇವೆ ಅಂತ ಹೇಳಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv