ಬೆಳಗಾವಿ: ಇಂದು ಸಿಎಂ ಸಿದ್ದರಾಮಯ್ಯನವರು (Siddaramaiah) ಮಂಡಿಸಿರುವ ಬಜೆಟ್ ನಲ್ಲಿ ಬೆಳಗಾವಿ ಜಿಲ್ಲೆಯ ನಿರೀಕ್ಷೆಗೆ ತಕ್ಕಂತೆ ಮಹತ್ವ ಸಿಕ್ಕಿಲ್ಲ.
ಅಥಣಿ-ಕೊಟ್ಟಲಗಿ-ಅಮ್ಮಾಜೇಶ್ವರಿ, ಶ್ರೀ ಚನ್ನವೃಷಭೇಂದ್ರ, ಮಹಾಲಕ್ಷ್ಮಿ, ಸತ್ತಿಗೇರಿ, ಮಾರ್ಕಂಡೇಯ, ಬೈಲಹೊಂಗಲ ವಿಧಾನಸಭಾ ಕ್ಷೇತ್ರದ ಹಳೆಯ ಏತ ನೀರಾವರಿ ಯೋಜನೆಗಳ ಪುನಶ್ಚೇತನ ಮಾಡುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಬೆಳಗಾವಿ ನಗರ ಪರಿಮಿತಿಯಲ್ಲಿ ವಾಹನ ದಟ್ಟಣೆ ಹಾಗೂ ಸಂಚಾರ ದಟ್ಟಣೆ ನಿವಾರಿಸಲು 450 ಕೋಟಿ ರೂ. ವೆಚ್ಚದಲ್ಲಿ 4.50 ಕಿ.ಮೀ. ಉದ್ದದ ಮೇಲ್ಸೇತುವೆ (Elevated Corridor) ನಿರ್ಮಾಣ ಕಾಮಗಾರಿಯನ್ನು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ನಿರ್ಮಾಣ. ಗೋಕಾಕ್ ಜಲಪಾತವನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿ. ಶ್ರೀ ಕ್ಷೇತ್ರ ರೇಣುಕಾ ಯಲ್ಲಮ್ಮನ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಸಂರಕ್ಷಿಸಿ ಅಭಿವೃದ್ಧಿಗೊಳಿಸಲು ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯನ್ನು ರಚಿಸಿ ಅಧಿಸೂಚನೆ ಹೊರಡಿಸಲಾಗಿದೆ.
ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನವು ಈ ವರ್ಷ ಶತಮಾನದ ಮೈಲಿಗಲ್ಲನ್ನು ಪೂರ್ಣಗೊಳಿಸುತ್ತಿದೆ. ಮಹಾತ್ಮಾ ಗಾಂಧೀಜಿಯವರು ಅಧ್ಯಕ್ಷತೆ ವಹಿಸಿದ್ದ ಏಕೈಕ ಅಧಿವೇಶನ ಇದಾಗಿದೆ. ಈ ಅಧಿವೇಶನದ ಕೊಡುಗೆಯನ್ನು ಸ್ಮರಿಸಲು 2 ಕೋಟಿ ರೂ. ವೆಚ್ಚದಲ್ಲಿ ಬೆಳಗಾವಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗುವುದು. ಅಲ್ಲದೇ ಮಹಾತ್ಮಾ ಗಾಂಧೀಜಿಯವರು ಕರ್ನಾಟಕದಲ್ಲಿ ಭೇಟಿ ನೀಡಿದ ಸ್ಥಳಗಳಲ್ಲಿ ಸ್ಮರಣಾರ್ಥ ಫಲಕಗಳನ್ನು ಅಳವಡಿಸುವ ಬಗ್ಗೆ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇದನ್ನೂ ಓದಿ: ಸಿಎಂಗೆ ಗೌರವ ಕೊಡುವುದು ನಮ್ಮ ಜವಾಬ್ದಾರಿ- ಅನಂತ್ ಕುಮಾರ್ ಹೆಗಡೆಗೆ ಹೈಕೋರ್ಟ್ ತರಾಟೆ