ಬೆಂಗಳೂರು: ರಾಜ್ಯ ಸರ್ಕಾರದ ಬಜೆಟ್‍ನಲ್ಲಿ ಸಣ್ಣ ನೀರಾವರಿ ಇಲಾಖೆಗೆ ಹಲವು ಕೊಡುಗೆಗಳನ್ನು ನೀಡಿದೆ.
ಹೇಮಾವತಿ ನದಿಯಿಂದ ಹಾಸನ ತಾಲೂಕಿನ ದುದ್ದ ಹಾಗೂ ಶಾಂತಿಗ್ರಾಮ ಹೋಬಳಿ ವ್ಯಾಪ್ತಿಯ 160 ಕೆರೆ ತುಂಬಿಸುವ ಯೋಜನೆಗೆ 70 ಕೋಟಿ ರೂ. ಘೋಷಿಸಿದೆ. ಈ ಮೂಲಕ ಕುಡಿಯುವ ನೀರು ಸಿಗುವಂತೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ.
Advertisement
ಅದೇ ರೀತಿ, ಮಂಡ್ಯ ಜಿಲ್ಲೆಯ ಲೋಕಪಾವನಿ ನದಿಯಿಂದ ದುದ್ದ ಹಾಗೂ ಇತರೆ ಕೆರೆಗಳಿಗೆ ನೀರು ತುಂಬಿಸಲು ಹಾಗೂ ಮಂಡ್ಯ ತಾಲೂಕಿನ ಗ್ರಾಮಗಳಿಗೆ ಕುಡಿಯುವ ನೀರು ಒದಗಿಸಲು 30 ಕೋಟಿ ರೂ.ಗಳ ಯೋಜನೆಯನ್ನು ಘೋಷಿಸಿದೆ.
Advertisement
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೊಡಿ, ನಾಗರಾಳ, ನೇಜ ಇತ್ಯಾದಿ ಗ್ರಾಮಗಳ 10225 ಹೆಕ್ಟೇರ್ ಜಮೀನಿಗೆ ಏತ ನೀರಾವರಿ ಯೋಜನೆಗಾಗಿ ಕೃಷ್ಣಾ ನದಿಯಿಂದ 100 ಕೋಟಿ ರೂ. ವೆಚ್ಚದಲ್ಲಿ ಏತ ನೀರಾವರಿ ಯೋಜನೆಯನ್ನು ಬಜೆಟ್ ನಲ್ಲಿ ಸಿಎಂ ಕುಮಾರಸ್ವಾಮಿಯವರು ಘೋಷಿಸಿದ್ದಾರೆ.