ರಾಯಚೂರು: ಬಿಸಿಲನಾಡು ರಾಯಚೂರು (Raichuru) ಜಿಲ್ಲೆಯ ಜನ ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಭಾರೀ ನಿರೀಕ್ಷೆಗಳನ್ನು ಹೊಂದಿದ್ದರು. ನಿರೀಕ್ಷೆಯಂತೆ ಒಂದಷ್ಟು ಖುಷಿ ವಿಚಾರಗಳಿದ್ದರೆ, ಉಳಿದಿದ್ದೆಲ್ಲಾ ಹಳೆಯ ಘೋಷಣೆಗಳು ಪುನರಾವರ್ತನೆಯಾಗಿವೆ.ಇದನ್ನೂ ಓದಿ: ಅಪ್ರಾಪ್ತನಿಗೆ ಬೈಕ್ ಕೊಟ್ಟಿದ್ದಕ್ಕೆ ಮಾಲೀಕನಿಗೆ 26 ಸಾವಿರ ರೂ. ದಂಡ
ಬಜೆಟ್ ಘೋಷಣೆಗಳೇನು?
ನಗರದ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉನ್ನತ ಮಟ್ಟದ ಕ್ಯಾನ್ಸರ್ ಚಿಕಿತ್ಸೆ ದೊರಕಿಸುವ ನಿಟ್ಟಿನಲ್ಲಿ ಕಿದ್ವಾಯಿ ಫೆರಿಫೆರಲ್ ಚಿಕಿತ್ಸಾ ಕೇಂದ್ರದ ಸ್ಥಾಪನೆ ಹಾಗೂ ಇದಕ್ಕೆ ಬಜೆಟ್‌ನಲ್ಲಿ 50 ಕೋಟಿ ರೂ. ಅನುದಾನ ಮೀಸಲಿಡುವುದಾಗಿ ಘೋಷಿಸಲಾಗಿದೆ.
ಕೆಕೆಆರ್‌ಡಿಬಿ ಅನುದಾನದ ಅಡಿಯಲ್ಲಿ ರಾಯಚೂರು ಹಾಗೂ ಸಿಂಧನೂರಿನಲ್ಲಿ ಜಿಟಿಟಿಸಿ ಕಾಲೇಜು ಸ್ಥಾಪನೆಗೆ ಕ್ರಮ ತೆಗೆದುಕೊಳ್ಳುವುದು.
ರಾಯಚೂರು ನಗರಸಭೆಯನ್ನು, ಮಹಾನಗರ ಪಾಲಿಕೆಗಳನ್ನಾಗಿ ಮೇಲ್ದರ್ಜೇಗೇರಿಸಲಾಗಿದ್ದು, ಅಭಿವೃದ್ದಿಗೆ ಅನುದಾನ ನೀಡುವ ಘೋಷಣೆ ಮಾಡಲಾಗಿದೆ.
219 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ರಾಯಚೂರು ವಿಮಾನ ನಿಲ್ದಾಣದ ಕಟ್ಟಡ ಕಾಮಗಾರಿಗಳನ್ನು ಕೈಗೊಳ್ಳಲು 53 ಕೋಟಿ ರೂ. ಬಜೆಟ್‌ನಲ್ಲಿ ನೀಡಲಾಗಿದೆ.
1,696 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗಿರುವ ರಾಯಚೂರು – ಸಿಂಧನೂರು 20 ಕಿ.ಮೀ ರಸ್ತೆ ಕಾಮಗಾರಿಯನ್ನು ಪ್ರಸ್ತುತ ವರ್ಷದಲ್ಲಿ ಮುಗಿಸುವ ಘೋಷಣೆ ಮಾಡಲಾಗಿದೆ. ರಾಯಚೂರು ನಗರದ ಸುತ್ತ ರಿಂಗ್ ರೋಡ್ ನಿರ್ಮಾಣ ಬಗ್ಗೆ ಘೋಷಿಸಲಾಗಿದೆ.
ತುಂಗಭದ್ರಾ ಎಡದಂಡೆಕಾಲುವೆ ಕೊನೆ ಭಾಗಕ್ಕೆ ನೀರು ಒದಗಿಸಲು ನವಲಿ ಜಲಾಶಯ ನಿರ್ಮಾಣ ಮಾಡುವ ಬಗ್ಗೆ ಬಜೆಟ್‌ನಲ್ಲಿ ಘೋಷಿಸಲಾಗಿದೆ.ಇದನ್ನೂ ಓದಿ: ಜನವರಿ, ಫೆಬ್ರವರಿ ತಿಂಗಳ ಗೃಹಲಕ್ಷ್ಮಿ ಹಣ ಸದ್ಯದಲ್ಲೇ ಕ್ಲಿಯರ್: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್