ರಾಜ್ಯದಲ್ಲಿ ಕೋವಿಡ್ ಸ್ಥಿತಿ ಬಗ್ಗೆ ಸಿಎಂ ಹೇಳಿದ್ದೇನು?

Public TV
1 Min Read
CM BITE

ಹುಬ್ಬಳ್ಳಿ: ಕೋವಿಡ್ ಬಗ್ಗೆ ಕೇಂದ್ರ ಸರ್ಕಾರ ಈಗಾಗಲೇ ಜಾಗೃತಿ ಸೂಚನೆ ಕೊಟ್ಟಿದ್ದು, ಇಡೀ ರಾಷ್ಟçದಲ್ಲಿ ಕೋವಿಡ್ ಹೆಚ್ಚಳವಾಗಿರುವ ಪರಿಸ್ಥಿತಿಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

basavaraj bommai

ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 8-10 ದಿನಗಳಿಂದ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈಗಾಗಲೇ ಕೇರಳ, ಮಹಾರಾಷ್ಟ್ರದಲ್ಲಿ ಹೆಚ್ಚಾಗಿದೆ. ಆದ್ದರಿಂದ ಕೋವಿಡ್ ಬಗ್ಗೆ ಕೇಂದ್ರ ಸರ್ಕಾರ ಈಗಾಗಲೇ ಜಾಗೃತಿ ಸೂಚನೆ ಕೊಟ್ಟಿದೆ. ಕೋವಿಡ್ ತಜ್ಞರಿಂದಲೂ ಸೂಚನೆ ಸಿಕ್ಕಿದೆ. ಕೋವಿಡ್ 2ನೇ ಅಲೆ ಬಂದಾಗ ತುಂಬಾ ಗಂಭೀರವಾಗಿತ್ತು. ಆದರೀಗ ಒಮಿಕ್ರಾನ್ ಯಾವ ರೀತಿಯಲ್ಲಿದೆ ಅನ್ನೋದನ್ನು ಪರಿಶೀಲಿಸಬೇಕಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸರ್ಕಾರಿ ಉದ್ಯೋಗದ ಆಮೀಷವೊಡ್ಡಿ ಮಹಿಳೆಯಿಂದ ವಂಚನೆ

BASAVARJ BOMMAI

ಇದೇ ವೇಳೆ ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಇ-ಮೇಲ್ ಅನ್ನು ದುಬೈ, ಸೌದಿ ಅರೇಬಿಯಾದಿಂದಲೂ ಮೇಲ್ ಮಾಡುವ ಸಾಧ್ಯತೆಗಳಿವೆ. ಈ ಬಗ್ಗೆ ಕೇಂದ್ರ ಸರ್ಕಾರದ ಸಹಕಾರದಿಂದ ಪತ್ತೆಹಚ್ಚುವ ಕಾರ್ಯ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ.

Share This Article