ಬೆಂಗಳೂರು: ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಆಗಿರುವ ಹೆಚ್.ಡಿ.ಕುಮಾರಸ್ವಾಮಿ ಇಂದು ದೋಸ್ತಿ ಸರ್ಕಾರದ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದು, ಪರಿಷತ್ ಸದಸ್ಯೆ ಜಯಮಾಲಾ ಅವರು ನಿಭಾಯಿಸುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಒಟ್ಟು 5,725 ಕೋಟಿ ರೂ. ಹಣವನ್ನು ಮೀಸಲಿಟ್ಟಿದ್ದಾರೆ.
ಮಹಿಳಾ ಕಲ್ಯಾಣ ಇಲಾಖೆಗೆ ಸಿಕ್ಕಿದ್ದು ಏನು?
1. ಬಡತನ ರೇಖೆಗಿಂತ ಕೆಳಗಿರುವ ಗರ್ಭಿಣಿ ಮಹಿಳೆಯರಿಗೆ ಮಾಸಿಕ 6,000 ರೂ. ಗಳ ಭತ್ಯೆ ನೀಡುವ ಬಗ್ಗೆ ಕುಮಾರಸ್ವಾಮಿ ಘೋಷಿಸಿದ್ದರು. ಪ್ರಸ್ತುತ ರಾಜ್ಯ ಸರ್ಕಾರದ ‘ಮಾಥೃಪೂರ್ಣ’ ಮತ್ತು ಕೇಂದ್ರ ಸರ್ಕಾರದ ‘ಮಾತೃವಂದನಾ’ ಕಾರ್ಯಕ್ರಮಗಳಲ್ಲಿ ಹಲವು ಸೌಲಭ್ಯಗಳು ದೊರೆಯುತ್ತಿವೆ. ಈ ಸೌಲಭ್ಯಗಳ ಜೊತೆಗೆ ನಮ್ಮ ಸರ್ಕಾರವು “ಮುಖ್ಯಮಂತ್ರಿ ಮಾತೃಶ್ರೀ ಯೋಜನೆ”ಯನ್ನು ಹೊಸದಾಗಿ ರೂಪಿಸಿದೆ. ಈ ಹೊಸ ಯೋಜನೆಯಡಿ ಬಿಪಿಎಲ್ ಕುಟುಂಬದ ಗರ್ಭಿಣಿಯರಿಗೆ ಹೆರಿಗೆ ಪೂರ್ವದ 3 ತಿಂಗಳು ಹಾಗೂ ಬಾಣಂತಿಯರಿಗೆ ಹೆರಿಗೆ ನಂತರದ 3 ತಿಂಗಳ ಕಾಲ ಮಾಸಿಕ 1,000 ರೂ. ಗಳನ್ನು ಅವರ ಆಧಾರ್ ಲಿಂಕ್ಡ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುವುದು. ಈ ಮೊತ್ತವನ್ನು ಮುಂದಿನ 5 ವರ್ಷಗಳಲ್ಲಿ ಹಂತ ಹಂತವಾಗಿ ಹೆಚ್ಚಿಸಲಾಗುವುದು. ಈ ಯೋಜನೆಯು ತಾಯಿಯ ಮೊದಲ ಮಕ್ಕಳಿಗೆ ಅನ್ವಯವಾಗುತ್ತದೆ. ಈ ಯೋಜನೆಗೆ 350 ಕೋಡಿ ರೂ.ಗಳನ್ನು ಮೀಸಲಿಡಲಾಗಿದೆ. 2018ರ ನವೆಂಬರ್ 1ರಿಂದ ಈ ಯೋಜನೆ ಅನುಷ್ಠಾನಗೊಳ್ಳಲಿದೆ.
Advertisement
2. ‘ಆಧಾರ’ ಸ್ವಯಂ ಉದ್ಯೋಗ ಯೋಜನೆಯ ಘಟಕ ವೆಚ್ಚವನ್ನು ಈಗಿರುವ 35,000 ರೂ. ಗಳಿಂದ 1 ಲಕ್ಷ ರೂ. ಗಳಿಗೆ ಹೆಚ್ಚಿಸಿ, ಇದರಲ್ಲಿ ಶೇ. 50ರಷ್ಟು ಬ್ಯಾಂಕ್ ಸಾಲ ಮತ್ತು ಶೇ. 50 ರಷ್ಟು ಸಹಾಯಧನ ಒದಗಿಸಲು ಉದ್ದೇಶಿಸಲಾಗಿದೆ.
Advertisement
3. 2016ರ ವಿಕಲಚೇತನ ವ್ಯಕ್ತಿಗಳ ಹಕ್ಕುಗಳ ಕಾಯ್ದೆಯು ಎಲ್ಲಾ 21 ವಿಧದ ವಿಕಲಚೇತನ ವ್ಯಕ್ತಿಗಳ ಸಮೀಕ್ಷೆಯನ್ನು ಕೈಗೊಳ್ಳಲು 5 ಕೋಟಿ ರೂ. ಅನುದಾನ ಒದಗಿಸಲಾಗಿದೆ.
Advertisement
4. ಪ್ರಸುತ್ತ ಜಿಲ್ಲೆಗೊಂದರಂತೆ ಇರುವ ವೃದ್ಧಾಶ್ರಮವನ್ನು ರಾಜ್ಯದ ಎಲ್ಲಾ ಉಪವಿಭಾಗಗಳಲ್ಲಿ ತಲಾ ಒಂದರಂತೆ ವಿಸ್ತರಿಸಿ ಪ್ರಾರಂಭಿಸಲಾಗುವುದು.
Advertisement
5. ರಾಷ್ಟ್ರೀಯ ಅಂಗವಿಕಲರ ಹಣಕಾಸು ಅಭಿವೃದ್ಧಿ ನಿಗಮದಿಂದ ವಿಕಲಚೇತನರಿಗೆ ನೀಡಿರುವ ಸಾಲ ಮತ್ತು 2014 ರಿಂದ ಸುಸ್ತಿಯಾಗಿರುವ ಬಡ್ಡಿ ಮೊತ್ತವನ್ನು ಮನ್ನಾ ಮಾಡಲು 4 ಕೋಟಿ ರೂ. ಗಳ ಅನುದಾನ ಮೀಸಲು.
6. ಬುದ್ಧಿ ಮಾಂದ್ಯತೆ, ಸ್ವಲೀನತೆ, ಮೆದುಳಿನ ಪಾಶ್ರ್ವವಾಯು, ಬಹುವಿಧ ಅಂಗವಿಕಲತೆ ಸೇರಿದಂತೆ ವಿಕಲಚೇತನರ ಪಾಲನೆ ಹಾಗೂ ನಿರ್ವಹಣೆಯ ಬಗ್ಗೆ ಪಾಲಕರಿಗೆ, ವೃತ್ತಿಪರರಿಗೆ ತರಬೇತಿ, ಫಿಸಿಯೋಥೆರಪಿ ಹಾಗೂ ಪುನರ್ವಸತಿ ತರಬೇತಿ ಕೋರ್ಸುಗಳನ್ನು ನಡೆಸುವುದು, ಸ್ಪರ್ಶ ಸಂವೇದಿ ಉದ್ಯಾನ ನಿರ್ಮಾಣ ಇತ್ಯಾದಿ ಉದ್ದೇಶಗಳಿಗಾಗಿ 20 ಎಕರೆ ಜಾಗದಲ್ಲಿ ಸರ್ಕಾರ ಹಾಗೂ ಖಾಸಗಿ ಸಂಸ್ಥೆಗಳ ಪಾಲುದಾರಿಕೆಯಲ್ಲಿ ವಿಕಲಚೇತನರ ಕ್ಯಾಂಪಸ್ ಪ್ರಾರಂಭ.
7. ಬೆಂಗಳೂರಿನ ಇಂದಿರಾನಗರದಲ್ಲಿರುವ ಸರ್ಕಾರಿ ಕಿವುಡು ಮಕ್ಕಳ ಶಾಲೆಯ ಕಟ್ಟಡದಲ್ಲಿ ವಿಶೇಷ ಶಿಕ್ಷಕರ ಶಿಕ್ಷಣಕ್ಕಾಗಿ ತರಬೇತಿ ಕೇಂದ್ರವನ್ನು/ ವಿಶೇಷ ಬಿ.ಇಡಿ ಕಾಲೇಜನ್ನು ಸರ್ಕಾರ ಮತ್ತು ಖಾಸಗಿ ಸಂಸ್ಥೆಗಳ ಪಾಲುದಾರಿಕೆಯಲ್ಲಿ ಆರಂಭಿಸಲು ಉದ್ದೇಶಿಸಲಾಗಿದೆ.
8. ಉನ್ನತ ವ್ಯಾಸಂಗಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ನೀಡುತ್ತಿರುವ ವಿದ್ಯಾರ್ಥಿ ವೇತನದಿಂತೆ, ಪಿ.ಹೆಚ್.ಡಿ ಮಾಡುತ್ತಿರುವ ಹಾಗೂ ವಿದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಆಧ್ಯಯನ ಕೈಗೊಳ್ಳುವ ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಸಲುವಾಗಿ 1 ಕೋಟಿ ರೂ. ಒದಗಿಸಲಾಗುವುದು.
9. ಲೈಂಗಿಕ ಕಾರ್ಯಕರ್ತೆಯರ ಸ್ಥಿತಿಗತಿಗಳ ಬಗ್ಗೆ ಡಾ. ಜಯಮಾಲ ಅವರ ಅಧ್ಯಕ್ಷತೆಯ ಸಮಿತಿ ಸಲ್ಲಿಸಿದ ವರದಿಯ ಪ್ರಮುಖ ಶಿಫಾರಸ್ಸುಗಳನ್ನು ಆಧರಿಸಿ ಲೈಂಗಿಕ ಕಾರ್ಯಕರ್ತೆಯರ ಜೀವನಕ್ಕೆ ಭದ್ರತೆ ಒದಗಿಸಲು ನಾವು ಬದ್ಧರಾಗಿದ್ದೇವೆ. ಇದಕ್ಕಾಗಿ ವಿವಿಧ ಅಭಿವೃದ್ಧಿ ಇಲಾಖೆಗಳ ಸಹಭಾಗಿತ್ವದಲ್ಲಿ ವಸತಿ, ಕೌಶಲ್ಯಾಭಿವೃದ್ಧ, ಸ್ವಯಂ-ಉದ್ಯೋಗ, ಮಾಸಾಶನ, ಆರೋಗ್ಯ ಸೇವೆ, ಆಹಾರ ಭದ್ರತೆ ಹಾಗೂ ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ರೂಪಿಸಲಾಗುವುದು.