ಬೆಂಗಳೂರು: ಪಕ್ಷಕ್ಕಾಗಿ ದುಡಿದ ಎಲ್ಲಾ ಶಾಸಕರು, ಕಾರ್ಯಕರ್ತರಿಗೂ ಅಧಿಕಾರ ಸಿಗಲಿ ಎಂದು ನಿಗಮ ಮಂಡಳಿಗಳಿಗೆ ಎರಡು ವರ್ಷ ಅವಧಿಯ ಸೂತ್ರವನ್ನು ಹೈಕಮಾಂಡ್ ಮಾಡಿದೆ ಅಂತ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.
ನಿಗಮ ಮಂಡಳಿ (Corporation Board) ಅಧಿಕಾರವಧಿಯನ್ನು ಎರಡು ವರ್ಷ ಮೀಸಲಿಗೆ ಕೆಲ ಶಾಸಕರ ವಿರೋಧ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪಕ್ಷದ ಎಲ್ಲರಿಗೂ ಅವಕಾಶ ದೊರೆಯಬೇಕು. ಇತರರಿಗೂ ಅಧಿಕಾರ ಹಂಚಬೇಕು. ಆದ ಕಾರಣ 2 ವರ್ಷ ಮಾತ್ರ ಅಧಿಕಾರವಧಿ ಎಂದು ಹೇಳಿದ್ದೇವೆ ಎಂದರು. ಇದನ್ನೂ ಓದಿ: ಸದ್ದಿಲ್ಲದೇ ಮೊದಲ ಹಂತದ ಶೂಟಿಂಗ್ ಮುಗಿಸಿದ ದರ್ಶನ್ ನಟನೆಯ ಡೆವಿಲ್
Advertisement
Advertisement
ಹೈಕಮಾಂಡ್ ಕೊಟ್ಟಿರುವ ಸೂತ್ರವನ್ನು ನಾವು ಜಾರಿಗೆ ತಂದಿದ್ದೇವೆ. ಇಲ್ಲಿ ಸಿದ್ದರಾಮಯ್ಯ (Siddaramaiah) ಅವರದ್ದು ಏನೂ ಇಲ್ಲ, ನನ್ನದೂ ಏನೂ ಇಲ್ಲ. ಪಕ್ಷ ಅಧಿಕಾರಕ್ಕೆ ಬರಲು ಸಾಕಷ್ಟು ಕಾರ್ಯಕರ್ತರು ದುಡಿದಿದ್ದಾರೆ. ಆದ ಕಾರಣ ಎಲ್ಲರಿಗೂ ಅವಕಾಶ ನೀಡಬೇಕು. ಈ ನಿಟ್ಟಿನಲ್ಲಿ ಹೈಕಮಾಂಡ್ (Congress High Command) ಹೇಳಿದ ಹಾಗೆ ಎರಡು ವರ್ಷಕ್ಕೆ ಅಧಿಕಾರ ಸೀಮಿತ ಮಾಡಿದ್ದೇವೆ ಅಂತ ಸಮರ್ಥನೆ ನೀಡಿದರು. ಇದನ್ನೂ ಓದಿ: Breaking: ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ – ಮೈತ್ರಿ ಸರ್ಕಾರ ಪತನ
Advertisement
Advertisement
ಬಿಜೆಪಿ 543 ಕ್ಷೇತ್ರಗಳಲ್ಲೂ ಗೆಲ್ಲಲಿ:
ಇದೇ ವೇಳೆ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ ಎನ್ನುವ ಬಿಜೆಪಿ ನಾಯಕರ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕರ್ನಾಟಕದಲ್ಲಿ 224 ಸ್ಥಾನಗಳನ್ನೂ ಗೆಲ್ಲುತ್ತೇವೆ ಎಂದು ಬಿಜೆಪಿ ಹೇಳುತ್ತಿತ್ತು. ಆದರೆ ಏನಾಯಿತು? 136 ಸ್ಥಾನ ನಮಗೆ ಬಂತು. 28 ಕ್ಷೇತ್ರ ಮಾತ್ರವಲ್ಲ ಬಿಜೆಪಿಯವರು ಲೋಕಸಭೆಯ 543 ಸ್ಥಾನಗಳನ್ನೂ ಗೆಲ್ಲಲಿ, ಬೇಡ ಎಂದವರು ಯಾರು? ಎಂದು ಕುಟುಕಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ನಾವು 136-140 ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದ್ದೆವು. ಅವರು 224 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳುತ್ತಿದ್ದರು. ಆನಂತರ ಏನಾಯಿತು? ಅಂತ ವಿಧಾನಸಭೆ ಸೋಲನ್ನ ಬಿಜೆಪಿಗೆ ನೆನಪು ಮಾಡಿದ್ದಾರೆ.