ಹೈದರಾಬಾದ್: ಹಿಜಬ್ ವಿವಾದದಲ್ಲಿ ಕರ್ನಾಟಕ ಸರ್ಕಾರದ ನಡೆಗೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Advertisement
ರಾಜ್ಯ ವಿಧಾನಸಭೆಯಲ್ಲಿ ಹಿಜಬ್ ವಿವಾದ ಕುರಿತು ಮಾತನಾಡಿದ ಅವರು, ಯಾರು ಏನು ಧರಿಸುತ್ತಾರೆ ಎಂಬುದಕ್ಕೂ ಸರ್ಕಾರಕ್ಕೂ ಏನು ಸಂಬಂಧ? ಹಿಜಬ್ ವಿವಾದ ಏಕೆ? ವಾತಾವರಣ ಬಿಗಡಾಯಿಸುವಂತೆ ಏಕೆ ಮಾಡುತ್ತಿದ್ದೀರಿ ಎಂದು ಕರ್ನಾಟಕ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮಹಿಳೆಯರು ಎಲ್ಲಿ, ಏನು ಬೇಕಾದರೂ ಧರಿಸಬಹುದು, ಆದರೆ…: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ
Advertisement
What does the government have to do with who wears what? Why the hijab controversy? Why are you charging up the atmosphere?: Telangana CM K Chandrashekar Rao in the State Assembly#HijabVerdict pic.twitter.com/HYjMKKQGKQ
— ANI (@ANI) March 15, 2022
Advertisement
ಇತ್ತೀಚಿನ ದಿನಗಳಲ್ಲಿ ಕೇಂದ್ರ ಬಿಜೆಪಿ ಆಡಳಿತದ ಬಗ್ಗೆ ತೆಲಂಗಾಣ ಸಿಎಂ ವ್ಯಾಪಕ ಟೀಕೆಯನ್ನು ವ್ಯಕ್ತಪಡಿಸಿದ್ದಾರೆ. ಅಂತೆಯೇ ಕರ್ನಾಟಕ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧವೂ ಹರಿಹಾಯ್ದಿದ್ದಾರೆ. ಹಿಜಬ್ ವಿವಾದದಲ್ಲಿ ಕರ್ನಾಟಕ ಸರ್ಕಾರದ ನಡೆಗೆ ಬೇಸರ ವ್ಯಕ್ತಪಡಿಸಿದ್ದಾರೆ.
Advertisement
ಶಿಕ್ಷಣ ಸಂಸ್ಥೆಯೊಂದರಲ್ಲಿ ಶುರುವಾರ ಹಿಜಬ್ ವಿವಾದ ಹೈಕೋರ್ಟ್ ಮೆಟ್ಟಿಲೇರಿತ್ತು. 11 ದಿನಗಳ ವಾದ-ಪ್ರತಿವಾದವನ್ನು ಆಲಿಸಿದ ಕರ್ನಾಟಕ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಿತು. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಬ್ ಧರಿಸುವಂತಿಲ್ಲ ಎಂದು ಕೋರ್ಟ್ ತೀರ್ಪು ನೀಡಿದೆ. ಕೋರ್ಟ್ ತೀರ್ಪಿನ ವಿಚಾರವಾಗಿ ಪರ-ವಿರೋಧದ ಚರ್ಚೆ ಹುಟ್ಟುಕೊಂಡಿದೆ. ಇದನ್ನೂ ಓದಿ: ಹಿಜಬ್ ವಿಚಾರವನ್ನ ಅನಗತ್ಯವಾಗಿ ವಿವಾದ ಮಾಡದೆ ಸ್ವಾಗತಿಸಬೇಕು: ಬಿಎಸ್‍ವೈ