2019 ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 28 ಕ್ಷೇತ್ರಗಳ ಪೈಕಿ 25 ರಲ್ಲಿ ಜಯಭೇರಿ ಬಾರಿಸಿತ್ತು. ಆಗ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿದ್ದರೂ, ಎರಡೂ ಪಕ್ಷಗಳು ತಲಾ ಒಂದೊಂದು ಸ್ಥಾನಕ್ಕಷ್ಟೇ ತೃಪ್ತಿ ಪಟ್ಟುಕೊಂಡಿದ್ದವು. ಇನ್ನು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್ ಗೆಲುವು ದಾಖಲಿಸಿದ್ದರು. ಹಾಗಾದರೆ ಯಾವ ಕ್ಷೇತ್ರದಲ್ಲಿ ಯಾರ‍್ಯಾರು ಗೆದ್ದಿದ್ದರು, ಯಾರು ಸೋತಿದ್ದರು ಎಂಬ ವಿವರ ಇಲ್ಲಿದೆ.
ಬೆಳಗಾವಿ:
2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಸುರೇಶ್ ಅಂಗಡಿ 7,61,991 ಮತಗಳನ್ನು ಪಡೆದು, 3,91,304 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್ ಸಾಧುನವರ್ 3,70,687 ಮತಗಳನ್ನು ಪಡೆದು ಪರಾಭವಗೊಂಡಿದ್ದರು.
Advertisement
Advertisement
ಬಳ್ಳಾರಿ:
ಬಿಜೆಪಿಯಿಂದ ಸ್ಪರ್ಧಿಸಿದ್ದ ವೈ. ದೇವೇಂದ್ರಪ್ಪ 6,16,338 ಮತಗಳನ್ನು ಪಡೆದು, 55,707 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್ ಉಗ್ರಪ್ಪ 5,60,681 ಮತಗಳನ್ನು ಪಡೆದು ಸೋಲುಕಂಡಿದ್ದರು.
Advertisement
Advertisement
ಬಾಗಲಕೋಟೆ:
ಬಿಜೆಪಿಯಿಂದ ಸ್ಪರ್ಧಿಸಿದ್ದ ಪಿ.ಸಿ ಗದ್ದಿಗೌಡರ್ 1,68,638 ಮತಗಳನ್ನು ಪಡೆದು, 1,68,187 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ವೀಣಾ ಕಾಶಪ್ಪನವರ್ 4,96,451 ಮತಗಳನ್ನು ಪಡೆದು ಸೋಲುಕಂಡಿದ್ದರು.
ಬೀದರ್:
ಬಿಜೆಪಿಯಿಂದ ಸ್ಪರ್ಧಿಸಿದ್ದ ಭಗವಂತ್ ಖೂಬಾ 5,85,471 ಮತಗಳನ್ನು ಪಡೆದು, 1,16,834 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ಈಶ್ವರ್ ಖಂಡ್ರೆ 4,68,637 ಮತಗಳನ್ನು ಪಡೆದು ಸೋಲುಕಂಡಿದ್ದರು.
ಬೆಂಗಳೂರು ಕೇಂದ್ರ:
ಬಿಜೆಪಿಯಿಂದ ಸ್ಪರ್ಧಿಸಿದ್ದ ಪಿ.ಸಿ ಮೋಹನ್ 6,02,853 ಮತಗಳನ್ನು ಪಡೆದು, 70,968 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ 5,31,885 ಮತಗಳನ್ನು ಪಡೆದು ಸೋಲುಕಂಡಿದ್ದರು.
ಬೆಂಗಳೂರು ಉತ್ತರ:
ಬಿಜೆಪಿಯಿಂದ ಸ್ಪರ್ಧಿಸಿದ್ದ ಸದಾನಂದಗೌಡ 8,24,500 ಮತಗಳನ್ನು ಪಡೆದು, 1,47,518 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣ ಭೈರೇಗೌಡ 6,76,982 ಮತಗಳನ್ನು ಪಡೆದು ಸೋಲುಕಂಡಿದ್ದರು.
ಬೆಂಗಳೂರು ಗ್ರಾಮಾಂತರ:
ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಡಿ.ಕೆ ಸುರೇಶ್ 8,78,258 ಮತಗಳನ್ನು ಪಡೆದು, 2,06,870 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಬಿಜೆಪಿಯಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಅಶ್ವಥ್ ನಾರಾಯಣಗೌಡ 6,71,388 ಮತಗಳನ್ನ ಪಡೆದು ಸೋಲನುಭವಿಸಿದ್ದರು.
ಬೆಂಗಳೂರು ದಕ್ಷಿಣ:
ಬಿಜೆಪಿಯಿಂದ ಸ್ಪರ್ಧಿಸಿದ್ದ ತೇಜಸ್ವಿ ಸೂರ್ಯ 7,39,229 ಮತಗಳನ್ನು ಪಡೆದು, 3,31,192 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಅಖಾಡಕ್ಕಿಳಿದಿದ್ದ ಪ್ರತಿಸ್ಪರ್ಧಿ ಬಿ.ಕೆ ಹರಿಪ್ರಸಾದ್ 6,08,037 ಮತಗಳನ್ನು ಪಡೆದು ಸೋಲುಕಂಡಿದ್ದರು.
ಚಾಮರಾಜನಗರ:
ಬಿಜೆಪಿಯಿಂದ ಸ್ಪರ್ಧಿಸಿದ್ದ ವಿ. ಶ್ರೀನಿವಾಸ್ ಪ್ರಸಾದ್ 5,68,537 ಮತಗಳನ್ನು ಪಡೆದು, 1,817 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಆರ್. ಧ್ರುವನಾರಾಯಣ 5,66,720 ಮತಗಳನ್ನು ಪಡೆದು ಸೋಲುಕಂಡಿದ್ದರು.
ಚಿಕ್ಕಬಳ್ಳಾಪುರ:
ಬಿಜೆಪಿಯಿಂದ ಸ್ಪರ್ಧಿಸಿದ್ದ ಬಿ.ಎನ್ ಬಚ್ಚೇಗೌಡ 7,45,912 ಮತಗಳನ್ನು ಪಡೆದು, 1,82,110 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಎಂ. ವೀರಪ್ಪ ಮೊಯ್ಲಿ 5,63,802 ಮತಗಳನ್ನು ಪಡೆದು ಸೋಲುಕಂಡಿದ್ದರು.
ಉಡುಪಿ-ಚಿಕ್ಕಮಗಳೂರು:
ಬಿಜೆಪಿಯಿಂದ ಸ್ಪರ್ಧಿಸಿದ್ದ ಶೋಭಾ ಕರಂದ್ಲಾಜೆ 7,18,916 ಮತಗಳನ್ನು ಪಡೆದು, 3,49,599 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಜೆಡಿಎಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಪ್ರಮೋದ್ ಮಧ್ವರಾಜ್ 3,69,317 ಮತಗಳನ್ನು ಪಡೆದು ಸೋಲುಕಂಡಿದ್ದರು.
ಚಿಕ್ಕೋಡಿ:
ಬಿಜೆಪಿಯಿಂದ ಸ್ಪರ್ಧಿಸಿದ್ದ ಅಣ್ಣಾ ಸಾಹೇಬ್ ಜೊಲ್ಲೆ 6,45,017 ಮತಗಳನ್ನು ಪಡೆದು, 1,18,887 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಪ್ರಕಾಶ್ ಹುಕ್ಕೇರಿ 5,26,140 ಮತಗಳನ್ನು ಪಡೆದು ಸೋಲುಕಂಡಿದ್ದರು.
ಚಿತ್ರದುರ್ಗ:
ಬಿಜೆಪಿಯಿಂದ ಸ್ಪರ್ಧಿಸಿದ್ದ ಎ.ನಾರಾಯಣಸ್ವಾಮಿ 6,26,195 ಮತಗಳನ್ನು ಪಡೆದು, 80,178 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಬಿ.ಎನ್ ಚಂದ್ರಪ್ಪ 5,46,017 ಮತಗಳನ್ನು ಪಡೆದು ಸೋಲುಕಂಡಿದ್ದರು.
ದಕ್ಷಿಣ ಕನ್ನಡ:
ಬಿಜೆಪಿಯಿಂದ ಸ್ಪರ್ಧಿಸಿದ್ದ ನಳಿನ್‌ಕುಮಾರ್ ಕಟೀಲ್ 7,74,285 ಮತಗಳನ್ನು ಪಡೆದು, 2,74,621 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಮಿಥುನ್ ರೈ 4,99,664 ಮತಗಳನ್ನು ಪಡೆದು ಸೋಲುಕಂಡಿದ್ದರು.
ದಾವಣಗೆರೆ:
ಬಿಜೆಪಿಯಿಂದ ಸ್ಪರ್ಧಿಸಿದ್ದ 6,52,996 ಮತಗಳನ್ನು ಪಡೆದು, 1,69,702 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಹೆಚ್.ಬಿ ಮಂಜಪ್ಪ 4,83,294 ಮತಗಳನ್ನು ಪಡೆದು ಸೋಲುಕಂಡಿದ್ದರು.
ಧಾರವಾಡ:
ಬಿಜೆಪಿಯಿಂದ ಸ್ಪರ್ಧಿಸಿದ್ದ ಪ್ರಹ್ಲಾದ್ ಜೋಶಿ 6,84,837 ಮತಗಳನ್ನು ಪಡೆದು, 2,05,072 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ವಿನಯ್ ಕುಲಕರ್ಣಿ 4,79,765 ಮತಗಳನ್ನು ಪಡೆದು ಸೋಲುಕಂಡಿದ್ದರು.
ಹಾಸನ:
ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಪ್ರಜ್ವಲ್ ರೇವಣ್ಣ 6,76,606 ಮತಗಳನ್ನು ಪಡೆದು, 1,41,324 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಎ.ಮಂಜು 5,35,282 ಮತಗಳನ್ನು ಪಡೆದು ಸೋಲುಕಂಡಿದ್ದರು.
ಹಾವೇರಿ:
ಬಿಜೆಪಿಯಿಂದ ಸ್ಪರ್ಧಿಸಿದ್ದ ಶಿವಕುಮಾರ್ ಉದಾಸಿ 6,83,660 ಮತಗಳನ್ನು ಪಡೆದು, 1,40,882 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ 1,40,882 ಮತಗಳನ್ನು ಪಡೆದು ಸೋಲುಕಂಡಿದ್ದರು.
ಕಲಬುರಗಿ:
ಬಿಜೆಪಿಯಿಂದ ಸ್ಪರ್ಧಿಸಿದ್ದ ಡಿ.ಉಮೇಶ್ ಜಾಧವ್ 6,20,192 ಮತಗಳನ್ನು ಪಡೆದು, 95,452 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಮಲ್ಲಿಕಾರ್ಜುನ ಖರ್ಗೆ 4,24,740 ಮತಗಳನ್ನು ಪಡೆದು ಸೋಲುಕಂಡಿದ್ದರು.
ಕೋಲಾರ:
ಬಿಜೆಪಿಯಿಂದ ಸ್ಪರ್ಧಿಸಿದ್ದ ಎಸ್. ಮುನಿಸ್ವಾಮಿ 7,09,165 ಮತಗಳನ್ನು ಪಡೆದು, 2,10,021 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಕೆ.ಹೆಚ್. ಮುನಿಯಪ್ಪ 6,99,144 ಮತಗಳನ್ನು ಪಡೆದು ಪರಾಭವಗೊಂಡಿದ್ದರು.
ಕೊಪ್ಪಳ:
ಬಿಜೆಪಿಯಿಂದ ಸ್ಪರ್ಧಿಸಿದ್ದ ಕರಡಿ ಸಂಗಣ್ಣ 5,86,783 ಮತಗಳನ್ನು ಪಡೆದು, 38,397 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಬಸವರಾಜ ಹಿಟ್ನಾಳ್ 5,48,386 ಮತಗಳನ್ನು ಪಡೆದು ಪರಾಭವಗೊಂಡಿದ್ದರು.
ಮಂಡ್ಯ:
ಪ್ರತಿಷ್ಠೆಯ ಕಣವಾಗಿದ್ದ ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಹಾಲಿ ಸಂಸದೆ ಸುಮಲತಾ ಅಂಬರೀಷ್ 7,03,660 ಮತಗಳನ್ನು ಪಡೆದು, 1,25,876 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನಿಖಿಲ್ ಕುಮಾರಸ್ವಾಮಿ 5,77,784 ಮತಗಳನ್ನು ಪಡೆದು ಸೋಲು ಕಂಡಿದ್ದರು.
ಮೈಸೂರು:
ಬಿಜೆಪಿಯಿಂದ ಸ್ಪರ್ಧಿಸಿದ್ದ ಪ್ರತಾಪ್ ಸಿಂಹ 6,88,974 ಮತಗಳನ್ನು ಪಡೆದು, 1,38,647 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಸಿ.ಹೆಚ್ ವಿಜಯ್ ಶಂಕರ್ 5,50,327 ಮತಗಳನ್ನು ಪಡೆದು ಪರಾಭವಗೊಂಡಿದ್ದರು.
ರಾಯಚೂರು:
ಬಿಜೆಪಿಯಿಂದ ಸ್ಪರ್ಧಿಸಿದ್ದ ಅಮರೇಶ್ವರ ನಾಯಕ 5,98,337 ಮತಗಳನ್ನು ಪಡೆದು, 1,17,716 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಬಿ.ವಿ ನಾಯಕ್ 4,80,621 ಮತಗಳನ್ನು ಪಡೆದು ಸೋಲನುಭವಿಸಿದ್ದರು.
ಶಿವಮೊಗ್ಗ:
ಬಿಜೆಪಿಯಿಂದ ಸ್ಪರ್ಧಿಸಿದ್ದ ಬಿ.ವೈ ರಾಘವೇಂದ್ರ 7,29,872 ಮತಗಳನ್ನು ಪಡೆದು, 5,06,512 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಮಧು ಬಂಗಾರಪ್ಪ 5,06,512 ಮತಗಳನ್ನು ಪಡೆದು ಸೋಲನುಭವಿಸಿದ್ದರು.
ತುಮಕೂರು:
ಬಿಜೆಪಿಯಿಂದ ಸ್ಪರ್ಧಿಸಿದ್ದ ಜಿ.ಎಸ್ ಬಸವರಾಜು 5,96,127 ಮತಗಳನ್ನು ಪಡೆದು, 13,339 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಹೆಚ್.ಡಿ ದೇವೇಗೌಡ 5,82,788 ಮತಗಳನ್ನು ಪಡೆದು ಸೋಲನುಭವಿಸಿದ್ದರು.
ಉತ್ತರ ಕನ್ನಡ:
ಬಿಜೆಪಿಯಿಂದ ಸ್ಪರ್ಧಿಸಿದ್ದ ಅನಂತ್‌ಕುಮಾರ್ ಹೆಗಡೆ 7,86,042 ಮತಗಳನ್ನು ಪಡೆದು, 4,79,649 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಆನಂದ್ ಟಸ್ನೋಟಿಕರ್ 3,06,393 5,82,788 ಮತಗಳನ್ನು ಪಡೆದು ಸೋಲನುಭವಿಸಿದ್ದರು.
ವಿಜಯಪುರ:
ಬಿಜೆಪಿಯಿಂದ ಸ್ಪರ್ಧಿಸಿದ್ದ ರಮೇಶ್ ಜಿಗಜಿಣಗಿ 6,35,867 ಮತಗಳನ್ನು ಪಡೆದು, 2,58,038 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಸುನಿತಾ ದೇವಾನಂದ್ ಚವ್ಹಾಣ್ 3,77,829 ಮತಗಳನ್ನು ಪಡೆದು ಸೋಲನುಭವಿಸಿದ್ದರು.