– ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮಸೀದಿಯಲ್ಲಿ ಘೋಷಣೆ
ನವದೆಹಲಿ: ಪಾಕ್ (Pakistan) ಉಗ್ರರ ವಿರುದ್ಧ ಭಾರತದ (India) ಸೇನೆ ನಡೆಸಿದ ಆಪರೇಷನ್ ಸಿಂಧೂರ (Operation Sindoor) ಕಾರ್ಯಾಚರಣೆಯಿಂದ ಬೆದರಿ ಹೋಗಿದೆ. ರಾತ್ರೋ ರಾತ್ರಿ ನಡೆದ ಉಗ್ರರ ತಾಣಗಳಾಗಿದ್ದ ಮಸೀದಿಗಳು ಧ್ವಂಸವಾಗಿವೆ. ಧ್ವಂಸವಾದ ಮಸೀದಿ ಬಳಿ ಸೂರ್ಯೋದಯದ ನಂತರ ನೂರಾರು ಜನ ಜಮಾಯಿಸಿದರು. ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರೆದಿವೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ.
#WATCH | First reaction from Pakistan, Muridke as eyewitness account of India’s #OperationSindoor against terror targets inside Pakistan.
A local says, “At around 12:45 in the night, one drone came first, followed by three other drones, and they attacked the mosques…everything… pic.twitter.com/EJ68G8U0nF
— ANI (@ANI) May 7, 2025
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (ಪಿಒಕೆ) ಕೆಲವು ಭಾಗಗಳಲ್ಲಿ ಈ ದಾಳಿ ನಡೆದಿದೆ. ದಾಳಿಯಾಗುತ್ತಿದ್ದಂತೆ ಮಸೀದಿಯ ಮೈಕ್‌ಗಳಲ್ಲಿ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಘೋಷಿಸಿದ್ದಾರೆ. ಈ ಸೂಚನೆಗಳನ್ನು ನೀಡುತ್ತಿದ್ದಂತೆ ಮುಜಫರಾಬಾದ್ ನಿವಾಸಿಗಳು ತಮ್ಮ ಮನೆಗಳನ್ನು ಬಿಟ್ಟು ಸುತ್ತಮುತ್ತಲಿನ ಗುಡ್ಡಗಳಿಗೆ ಓಡಿದ್ದಾರೆ. ಇದನ್ನೂ ಓದಿ: ರಾಜಕಾರಣಿಗಳು ಹೇಗೆ ಬದಲಾಗುತ್ತಾರೆ ಎಂಬುದಕ್ಕೆ ಸಿಎಂ ಸಿಂಧೂರವೇ ಸಾಕ್ಷಿ: ಪ್ರತಾಪ್ ಸಿಂಹ ಲೇವಡಿ
ಮುಹಮ್ಮದ್ ಶೈರ್ ಮಿರ್ ಎಂಬವರು ಈ ಬಗ್ಗೆ ಪ್ರತಿಕ್ರಿಯಿಸಿ, ದಾಳಿಯಾಗುತ್ತಿದ್ದಂತೆ ನಾವು ಮನೆಯಿಂದ ಹೊರಗೆ ಬಂದೆವು. ಈ ವೇಳೆ ಮತ್ತೊಂದು ಸ್ಫೋಟ ಸಂಭವಿಸಿತು. ನಾವೆಲ್ಲರು ನಮ್ಮ ಮಕ್ಕಳನ್ನು ಕರೆದುಕೊಂಡು ಬೆಟ್ಟದ ಮೇಲೆ ಆಶ್ರಯ ಪಡೆದುಕೊಂಡೆವು ಎಂದು ಹೇಳಿದ್ದಾರೆ.
ಭಾರತದ ಪ್ರಬಲ ದಾಳಿಯ ಬಳಿಕ ಮುಜಫರಾಬಾದ್‌ನಲ್ಲಿ, ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿವೆ. ಸಣ್ಣ ಪುಟ್ಟ ವ್ಯವಹಾರಗಳು ನಡೆಯುತ್ತಿವೆ, ಶಾಲೆಗಳನ್ನು ಮುಚ್ಚಲಾಗಿದ್ದು, ವಿದ್ಯಾರ್ಥಿಗಳ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ದಾಳಿಯಿಂದ ಕೆಲವು ಸ್ಥಳೀಯರು ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.
ಮುಜಫರಾಬಾದ್‌ನಲ್ಲಿ ದಾಳಿಯಲ್ಲಿ ಮೃತಪಟ್ಟ ವ್ಯಕ್ತಿಗೆ ಜನರು ಅಂತ್ಯಕ್ರಿಯೆಯ ಪ್ರಾರ್ಥನೆ ಸಲ್ಲಿಸುತ್ತಿರುವುದು
ದಾಳಿಯ ಬಗ್ಗೆ ಪಿಓಕೆಯ ನಿವಾಸಿಯೊಬ್ಬರು ಪ್ರತಿಕ್ರಿಯಿಸಿ, ರಾತ್ರಿ 12:45ರ ಸಮಯ ಆಗಿತ್ತು. ಈ ವೇಳೆ, ನಾವು ಮಲಗಿದ್ದೆವು. ಮೊದಲು, ಒಂದು ಡ್ರೋನ್ ಬಂತು. ಅದರ ನಂತರ ಇನ್ನೂ ಮೂರು ಡ್ರೋನ್ ಬಂದವು. ಡ್ರೋನ್ ದಾಳಿಯು ಆಡಳಿತ ಕಚೇರಿ ಮತ್ತು ಮಸೀದಿಯ ಛಾವಣಿಯನ್ನು ಧ್ವಂಸ ಮಾಡಿದವು. ಒಬ್ಬ ಅಧಿಕಾರಿ ಮಸೀದಿಯ ಛಾವಣಿಯ ಮೇಲೆ ಕುಳಿತಿದ್ದರು, ಅವರು ಹತ್ಯೆಗೀಡಾದರು ಎಂದು ತಿಳಿಸಿದ್ದಾರೆ.
ರಾತ್ರೋ ರಾತ್ರಿ ಭಾರತ ನಡೆಸಿದ ʻಆಪರೇಷನ್ ಸಿಂಧೂರʼ ಪ್ರತೀಕಾರದ ದಾಳಿಯಲ್ಲಿ (Pahalgam Terrorist Attack) ನಿಷೇಧಿತ ಮೂರು ಉಗ್ರ ಸಂಘಟನೆಗಳಾದ ಜೈಶ್ ಎ ಮೊಹಮ್ಮದ್, ಲಷ್ಕರ್ ಎ ತೈಬಾ (LET) ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಉಗ್ರರ ಪ್ರಧಾನ ಕಚೇರಿಗಳು ಧ್ವಂಸವಾಗಿದೆ. ಪಾಕಿಸ್ತಾನ ಮತ್ತು ಪಾಕ್ ಅಕ್ರಮಿತ ಕಾಶ್ಮೀರದಲ್ಲಿರುವ 9 ಅಡಗುತಾಣಗಳ ಮೇಲೆ ಭಾರತೀಯ ವಾಯು ಸೇನೆ (IAF) ದಾಳಿ ನಡೆಸಿದೆ. ಭಾರತ ಧ್ವಂಸ ಮಾಡಿರುವ ಈ ಉಗ್ರರ (Terrorist) ನೆಲೆಗಳು ಮೋಸ್ಟ್ ಡೇಂಜರಸ್ ತಾಣಗಳು ಎಂದೇ ಗುರುತಿಸಿಕೊಂಡಿದ್ದು, ಇಡೀ ವಿಶ್ವಕ್ಕೆ ಕಂಟಕವಾಗಿದ್ದವು. ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಇಲ್ಲಿ ಅಡಗಿಸಿಡಲಾಗಿತ್ತು. ಜೊತೆಗೆ ವಿಶ್ವಾದ್ಯಂತ ವಿವಿಧೆಡೆಗೆ ಕಳುಹಿಸಲು ಇಲ್ಲಿ ತರಬೇತಿ ನೀಡಲಾಗುತ್ತಿತ್ತು ಅನ್ನೋ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ. ಅದಕ್ಕಾಗಿ ಭಾರತೀಯ ಸೇನೆಯು ನಾಗರಿಕರು ಮತ್ತು ಸೇನೆಯನ್ನ ಗುರಿಯಾಗಿಸದೇ ಕೇವಲ ಉಗ್ರರ ನೆಲೆಗಳನ್ನ ಗುರಿಯಾಗಿಸಿ ದಾಳಿ ನಡೆಸಿದೆ.
ಕಾರ್ಯಾಚರಣೆಯಲ್ಲಿ ನಿಷೇಧಿತ ಜೈಶ್ -ಎ-ಮೊಹಮ್ಮದ್ ಭಯೋತ್ಪಾದಕ ಗುಂಪುಗಳ ನೆಲೆಯಿರುವ ಬಹವಾಲ್‌ಪುರದಲ್ಲಿ ಮರ್ಕಜ್ ಸುಭಾನ್ ಅಲ್ಲಾ ಮಸೀದಿ, ತೆಹ್ರಾ ಕಲಾನ್‌ನಲ್ಲಿನ ಸರ್ಜಾಲ್, ಕೋಟಿಯ ಮರ್ಕಜ್ ಅಬ್ಬಾಸ್ ಮತ್ತು ಮುಜಫರಾಬಾದ್‌ನ ಸೈಯನ್ನಾ ಬಿಲಾಲ್ ಕ್ಯಾಂಪ್‌ಗಳ ಮೇಲೆ ಭಾರತ ದಾಳಿ ನಡೆಸಿದೆ. ಲಷ್ಕರ್ ಎ ತೈಬಾ ಉಗ್ರ ಸಂಘಟನೆಯ ಶಿಬಿರಗಳಿರುವ ಮುರ್ಡಿಕೆಯ ಮರ್ಕಝ್ ತೈಬಾ, ಬರ್ನಾಲಾದಲ್ಲಿ ಮರ್ಕಝ್ ಅತ್ತೆ ಹದಿತ್ ಮತ್ತು ಮುಜಫರಾಬಾದ್‌ನ ಶ್ವವಾಯಿ ನಲ್ಲಾ ಮೇಲೆ ದಾಳಿ ನಡೆದಿದೆ.
ಮಕಾಜ್ ರಹೀಲ್ ಶಾಹಿದ್ ಮತ್ತು ಸಿಯಾಲ್‌ಕೋಟ್‌ನ ಮೆಹಮೂನಾ ಜೋಯಾ ಪ್ರದೇಶಗಳಲ್ಲಿ ನಿಷೇಧಿತ ಹಿಜ್ಜುಲ್ ಮುಜಾಹಿದ್ದೀನ್‌ನ ಶಿಬಿರಗಳು ಮತ್ತು ತರಬೇತಿ ಕೇಂದ್ರಗಳಿದ್ದು, ಅವುಗಳನ್ನು ಧ್ವಂಸಗೊಳಿಸಲಾಗಿದೆ. ಇದನ್ನೂ ಓದಿ: ವಾಯುನೆಲೆ ನಿರ್ಬಂಧ – ಮೇ 10ರವರೆಗೆ 165ಕ್ಕೂ ಹೆಚ್ಚು ಇಂಡಿಗೋ ವಿಮಾನ ಬಂದ್