ತಮಿಳಿನ ಖ್ಯಾತ ನಟ ಕಮಲ್ ಹಾಸನ್ ಪುತ್ರಿ, ನಟಿ ಶ್ರುತಿ ಹಾಸನ್ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರಂತೆ. ಈ ಕುರಿತು ಅವರೇ ಸ್ವತಃ ಇನ್ಸ್ಟಾದಲ್ಲಿ ಬರೆದುಕೊಂಡು ಪೋಸ್ಟ್ ಮಾಡಿದ್ದಾರೆ. ಹಲವು ತಿಂಗಳುಗಳಿಂದ ಆ ಸಮಸ್ಯೆಯಿಂದ ಅವರು ಬಳಲುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಅಲ್ಲದೇ, ಅದಕ್ಕೆ ಟ್ರೀಟ್ ಮೆಂಟ್ ತಗೆದುಕೊಳ್ಳುವುದರ ಜೊತೆಗೆ ನಿತ್ಯ ವ್ಯಾಯಾಮ ಮಾಡುತ್ತಿರುವುದಾಗಿಯೂ ಅವರು ಹೇಳಿಕೊಂಡಿದ್ದಾರೆ.
ಈಗಾಗಲೇ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಶ್ರುತಿ ಹಾಸನ್, ಒಳ್ಳೆಯ ಗಾಯಕಿ ಕೂಡ. ಈಗ ಪ್ರಭಾಸ್ ಜೊತೆ ಸಲಾರ್ ಸಿನಿಮಾದ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದಾರೆ. ಈ ನಡುವೆಯೇ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ವಿಚಾರವನ್ನೂ ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ತಾವು ಪಿಸಿಓಡಿಯಿಂದ ಬಳಲುತ್ತಿರುವುದಾಗಿ ಹೇಳಿದ್ದಾರೆ. ಅದರಿಂದ ಆಚೆ ಬರುವುದಕ್ಕೆ ಸಾಕಷ್ಟು ಶ್ರಮ ಪಡುತ್ತಿರುವುದಾಗಿಯೂ ಹೇಳಿದ್ದಾರೆ. ಇದನ್ನೂ ಓದಿ:`ರಾ ರಾ ರಕ್ಕಮ್ಮ’ ನಂತರ ನಾಳೆ ಮತ್ತೊಂದು ಸಾಂಗ್ ರಿಲೀಸ್: ವಿಕ್ರಾಂತ್ ರೋಣ
ನಾನು ಎಂಡೊಮೆಟ್ರಿಯೋಸಿಸ್ ನೊಂದಿಗೆ ಹಾರ್ಮೋನ್ ಸಮಸ್ಯೆಗಳನ್ನು ಎದುರಿಸುತ್ತಿರುವೆ. ಇದೊಂದು ನೈಸರ್ಗಿಕ ಕ್ರಿಯೆ ಎಂದು ನನಗೆ ಗೊತ್ತಿದ್ದರೂ, ಅದರೊಂದಿಗೆ ಹೋರಾಟ ಮಾಡಲೇಬೇಕಿದೆ. ಶೂಟಿಂಗ್ ನಡುವೆಯೂ ನಿತ್ಯ ವ್ಯಾಯಾಮ ಮಾಡುತ್ತೇನೆ. ಸರಿಯಾದ ಊಟ ಮತ್ತು ವೇಳೆಗೆ ಸರಿಯಾಗಿ ನಿದ್ದೆ ಮಾಡಬೇಕಿದೆ. ಸದಾ ಸಂತೋಷದಿಂದ ಇರುವುದೇ ಇದಕ್ಕೆ ಪರಿಹಾರ ಎಂದು ಹಲವರು ಸೂಚಿಸಿದ್ದಾರೆ. ಹಾಗಾಗಿ ನಾನು ಸದಾ ಲವಲವಿಕೆಯಿಂದ ಇರುವೆ ಎಂದು ಹೇಳಿಕೊಂಡಿದ್ದಾರೆ ಶ್ರುತಿ ಹಾಸನ್.