CricketLatestLeading NewsMain PostSports

ಭಾರತ-ಜಿಂಬಾಬ್ವೆ ಪಂದ್ಯ ಮಳೆಯಿಂದ ರದ್ದಾದರೆ ಯಾರಿಗೆ ಅವಕಾಶ? – ಸೆಮಿಸ್ ಲೆಕ್ಕಾಚಾರ ಹೀಗಿದೆ

ಸಿಡ್ನಿ: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ (T20 World Cup) ರೋಚಕ ಹಂತಕ್ಕೆ ತಲುಪಿದೆ. ಸೂಪರ್ 12 ಹಂತದಿಂದ ಸೆಮಿಫೈನಲ್‍ಗೇರಲು (Semi-Final) ಎಲ್ಲಾ ತಂಡಗಳು ಹರಸಾಹಸ ಪಡುತ್ತಿದೆ. ಈ ನಡುವೆ ಮಳೆಯಿಂದಾಗಿ (Rain) ಪಂದ್ಯದ ಫಲಿತಾಂಶದ ಮೇಲೆ ಪರಿಣಾಮ ಬಿದ್ದಿದೆ.

ಇದೀಗ ಗ್ರೂಪ್ 2 ರಿಂದ ಸೆಮಿಫೈನಲ್‍ಗೇರುವ ತಂಡಗಳ ಲೆಕ್ಕಾಚಾರ ಕುತೂಹಲ ಮೂಡಿಸಿದೆ. ಭಾರತ (India), ದಕ್ಷಿಣ ಆಫ್ರಿಕಾ (South Africa), ಪಾಕಿಸ್ತಾನ (Pakistan), ಬಾಂಗ್ಲಾದೇಶ (Bangladesh) ತಂಡಗಳ ನಡುವೆ ಸೆಮಿಸ್ ರೇಸ್ ಆರಂಭಗೊಂಡಿದೆ. ಇದೀಗ ಅಂಕಪಟ್ಟಿಯಲ್ಲಿ 6 ಪಾಯಿಂಟ್‍ಗಳೊಂದಿಗೆ ನಂಬರ್ 1 ಸ್ಥಾನದಲ್ಲಿ ಭಾರತವಿದೆ. ನಂಬರ್ 2ರಲ್ಲಿ  ದಕ್ಷಿಣ ಆಫ್ರಿಕಾ, ನಂಬರ್ 3ರಲ್ಲಿ ಪಾಕಿಸ್ತಾನವಿದೆ. 4ರಲ್ಲಿ ಬಾಂಗ್ಲಾದೇಶವಿದೆ. ನಾಲ್ಕು ತಂಡಗಳಿಗೂ ಒಂದೊಂದು ಪಂದ್ಯ ಬಾಕಿ ಇದೆ. ಇದನ್ನೂ ಓದಿ: ಖೇಲ್ ರತ್ನ ಪ್ರಶಸ್ತಿಗೆ ಟೇಬಲ್ ಟೆನಿಸ್ ಆಟಗಾರ ಶರತ್ ಕಮಲ್ ಹೆಸರು ಶಿಫಾರಸು

ಈ ಪೈಕಿ ಭಾರತ ತನ್ನ ಕೊನೆಯ ಪಂದ್ಯವನ್ನು ಜಿಂಬಾಬ್ವೆ ವಿರುದ್ಧ ಆಡಲಿದೆ. ಈ ಪಂದ್ಯಕ್ಕೆ ಮಳೆ ಕಾಟ ಕೊಡುವ ಸಾಧ್ಯತೆ ಹೆಚ್ಚಿದೆ. ಒಂದು ವೇಳೆ ಮಳೆ ಬಂದು ಪಂದ್ಯ ರದ್ದಾದರೆ ಎರಡೂ ತಂಡಗಳಿಗೂ ತಲಾ ಒಂದೊಂದು ಅಂಕವನ್ನು ಹಂಚಿಕೆ ಮಾಡಲಾಗುತ್ತದೆ. ಹೀಗಾದಲ್ಲಿ ಭಾರತ ತಂಡ 7 ಅಂಕಗಳೊಂದಿಗೆ ಸೆಮಿಫೈನಲ್‍ಗೆ ಭಾರತ ಲಗ್ಗೆ ಇಟ್ಟರೂ, ಅಂಕಪಟ್ಟಿಯಲ್ಲಿ ನಂಬರ್ 1 ಸ್ಥಾನ ಉಳಿಸಿಕೊಳ್ಳಲು ಕಷ್ಟವಿದೆ. ಎಲ್ಲಾದರೂ ಜಿಂಬಾಬ್ವೆ ವಿರುದ್ಧ ಭಾರತ ಗೆದ್ದರೆ, 8 ಅಂಕಗಳೊಂದಿಗೆ ನಂಬರ್ 1 ಸ್ಥಾನದಲ್ಲಿ ಉಳಿಯಲಿದೆ.

ಇತ್ತ ಭಾರತದ ಪಂದ್ಯ ಮಳೆಯಿಂದ ರದ್ದಾದರೆ, ದಕ್ಷಿಣ ಆಫ್ರಿಕಾ ತಂಡ ನೆದರ್‌ಲ್ಯಾಂಡ್‌ ವಿರುದ್ಧ ಗೆದ್ದರೆ, ರನ್‍ರೇಟ್ ಆಧಾರದಲ್ಲಿ ದಕ್ಷಿಣ ಆಫ್ರಿಕಾ ನಂಬರ್ 1 ಸ್ಥಾನಕ್ಕೆ ಏರಬಹುದಾದ ಸಾಧ್ಯತೆ ಇದೆ. ದಕ್ಷಿಣ ಆಫ್ರಿಕಾ ಮತ್ತು ನೆದರ್‌ಲ್ಯಾಂಡ್‌ ಪಂದ್ಯ ಮಳೆಯಿಂದ ರದ್ದಾದರೆ ಆಗ ಪಾಕಿಸ್ತಾನ ಮತ್ತು ಬಾಂಗ್ಲಾದೇಶಕ್ಕೆ ಅವಕಾಶವಿದೆ. ಅದರಲ್ಲೂ ಪಾಕಿಸ್ತಾನಕ್ಕೆ ಹೆಚ್ಚಿನ ಅವಕಾಶವಿದೆ. ಆದರೆ ರನ್‍ರೇಟ್ ಉತ್ತಮ ಪಡಿಸಿಕೊಳ್ಳುವ ಅನಿವಾರ್ಯತೆ ಇದೆ. ಇತ್ತ ಬಾಂಗ್ಲಾ ರನ್‍ರೇಟ್ -1.276 ಇರುವುದರಿಂದ ಅವಕಾಶ ಕಡಿಮೆ ಇದೆ. ಪಾಕ್ ಮತ್ತು ಬಾಂಗ್ಲಾ ಪಂದ್ಯ ಮಳೆಯಿಂದ ರದ್ದಾದರೆ, ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಸುಲಭವಾಗಿ ಸೆಮಿಫೈನಲ್‍ಗೇರಲಿದೆ. ಇದನ್ನೂ ಓದಿ: ಭಾರತವನ್ನ ಸೋಲಿಸಿದ್ರೆ ಜಿಂಬಾಬ್ವೆ ಹುಡುಗನನ್ನ ಮದ್ವೆ ಆಗ್ತೀನಿ – ಪಾಕ್ ನಟಿ ಬಂಪರ್ ಆಫರ್

ಗ್ರೂಪ್-2ರಲ್ಲಿ ಮೊದಲ ಸ್ಥಾನ ಪಡೆದ ತಂಡ ಗ್ರೂಪ್-1 ರಲ್ಲಿ 2ನೇ ಸ್ಥಾನ ಪಡೆದ ತಂಡದೊಂದಿಗೆ ಸೆಮಿಫೈನಲ್ ಪಂದ್ಯವಾಡಲಿದೆ. ಗ್ರೂಪ್-2ರಲ್ಲಿ 2ನೇ ಸ್ಥಾನ ಪಡೆದ ತಂಡ ಗ್ರೂಪ್-1ರಲ್ಲಿ ಮೊದಲ ಸ್ಥಾನ ಪಡೆದ ತಂಡದೊಂದಿಗೆ ಸೆಮಿಫೈನಲ್ ಆಡಲಿದೆ.

Live Tv

Leave a Reply

Your email address will not be published. Required fields are marked *

Back to top button