ಹಾಸನ: ಹತ್ತು ವರ್ಷ ಹಾಸನ ಜಿಲ್ಲೆಗೆ ಎರಡು ಪಕ್ಷಗಳ ಕೊಡುಗೆ ಏನು? ಎಂದು ರಾಷ್ಟ್ರೀಯ ಪಕ್ಷಗಳ ವಿರುದ್ಧ ಮಾಜಿ ಸಚಿವ ಎಚ್.ಡಿ.ರೇವಣ್ಣ ಕಿಡಿಕಾರಿದರು.
ರಾಷ್ಟ್ರೀಯ ಪಕ್ಷಗಳ ಹೇಳಿಕೆ ಕುರಿತು ಮಾತನಾಡಿದ ಅವರು, ಎರಡು ರಾಷ್ಟ್ರೀಯ ಪಕ್ಷಗಳು ಬೆಳಗ್ಗೆ ಎದ್ದರೆ ಪ್ರಾದೇಶಿಕ ಪಕ್ಷದ ಅಭ್ಯರ್ಥಿಗಳನ್ನು ಕುಟುಂಬ ರಾಜಕಾರಣ ಎಂದು ಟೀಕಿಸುತ್ತಿದ್ದಾರೆ. ಕಾಂಗ್ರೆಸ್ ನಲ್ಲಿ ಕುಟುಂಬ ರಾಜಕಾರಣ ಇಲ್ವಾ? ಕಾಂಗ್ರೆಸ್ ನಲ್ಲಿ ಒಂದೇ ಕುಟುಂಬದ ನಾಲ್ಕು ಜನ ಎಂಎಲ್‍ಎ, ಎಂಎಲ್‍ಸಿ ಇನ್ನೂ ಬೇರೆ-ಬೇರೆ ಹುದ್ದೆಗಳಲ್ಲಿ ಇದ್ದಾರೆ. ಇವರಿಗೆ ಕುಟುಂಬ ರಾಜಕಾರಣ ಎಂದು ಮಾತನಾಡಲು ಯಾವ ನೈತಿಕತೆ ಇದೆ? ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಅರಬ್ಬಿ ಸಮುದ್ರದಲ್ಲಿ ಹತ್ತು ಮೀಟರ್ ಆಳದಲ್ಲಿ ಸ್ಕೂಬಾ ಡೈವ್ ಮಾಡಿದ್ರು ಅಪ್ಪು
Advertisement
Advertisement
ಬೆಳಗ್ಗೆ ಎದ್ದು ಜೆಡಿಎಸ್ ಕುಟುಂಬ ರಾಜಕಾರಣ ಅನ್ನೋದು ಬಿಟ್ಟರೆ ಜಿಲ್ಲೆಗೆ ಅವರ ಕೊಡುಗೆ ಏನು? ಹತ್ತು ವರ್ಷ ಹಾಸನ ಜಿಲ್ಲೆಗೆ ಎರಡು ಪಕ್ಷಗಳ ಕೊಡುಗೆ ಏನು? ಕಾಂಗ್ರೆಸ್ ನಲ್ಲಿ ಎಷ್ಟು ಕುಟುಂಬದವರು ರಾಜಕೀಯ ಹುದ್ದೆಯಲ್ಲಿದ್ದಾರೆ ಎಂದು ಬಹಿರಂಗಪಡಿಸಲಿ. ಪ್ರಧಾನಿ ಮೋದಿ ಅವರು ಬಿಜೆಪಿಯಲ್ಲಿ 75 ವರ್ಷ ಆದವರು ಅಧಿಕಾರದಲ್ಲಿ ಇರೋ ಹಾಗಿಲ್ಲ ಎಂಬ ಕಾನೂನು ಮಾಡಿದ್ದಾರೆ. ಅದೇ ರೀತಿ ಕುಟುಂಬದಲ್ಲಿ ಒಬ್ಬರು ರಾಜಕೀಯಕ್ಕೆ ನಿಲ್ಲಲಿ ಎಂದು ಬಿಲ್ ತರಲಿ ಎಂದು ಸವಾಲು ಹಾಕಿದರು.
Advertisement
ದುಡ್ಡಿನಿಂದ ರಾಜಕೀಯ ಮಾಡಲು ಆಗಲ್ಲ. ಜನತೆ, ದೇವರ ಆಶೀರ್ವಾದ ಇರುವವರೆಗೂ ರಾಜಕೀಯ ಮಾಡಬಹುದು. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಹೇಳ ಹೆಸರಿಲ್ಲದಂತಾಗುತ್ತದೆ. ಕಾಂಗ್ರೆಸ್ ಮುಖಂಡರೇ ಕಾಂಗ್ರೆಸ್ ಪಕ್ಷ ಮುಗಿಸುತ್ತಾರೆ. ನೆಹರು ಕಾಲದ ಕಾಂಗ್ರೆಸ್ ಈಗ ಇಲ್ಲ. ಕೇಂದ್ರದಲ್ಲಿ ಬಿಜೆಪಿ, ರಾಜ್ಯದಲ್ಲಿ ಕಾಂಗ್ರೆಸ್ ಡಬಲ್ ಇಂಜಿನ್ ಸರ್ಕಾರ ಇತ್ತು. ಆಗ ಕಾಡಾನೆ ಸಮಸ್ಯೆ ಏಕೆ ಪರಿಹರಿಸಲಿಲ್ಲಾ ಎಂದು ಟೀಕಿಸಿದರು.
Advertisement
ಸೂರಜ್ ರೇವಣ್ಣ ವಿರುದ್ಧ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಕೆ ವಿಚಾರವಾಗಿ ಮಾತನಾಡಿದ ಅವರು, ನ್ಯಾಯಾಲಯದಲ್ಲಿರುವ ವಿಚಾರದ ಬಗ್ಗೆ ನಾನು ಮಾತನಾಡಲ್ಲ. ಯಾರು ಅರ್ಜಿ ಹಾಕಿಕೊಂಡಿದ್ದಾರೆ ಗೊತ್ತಿಲ್ಲ. ನಾವು ನ್ಯಾಯಾಲಯದ ತೀರ್ಪಿಗೆ ತಲೆ ಬಾಗುತ್ತೇವೆ. ನ್ಯಾಯಾಲಯದ ಬಗ್ಗೆ ನಮಗೆ ಗೌರವವಿದೆ. ನ್ಯಾಯಾಲಯ ಏನು ತೀರ್ಪು ಕೊಡುತ್ತೋ ಅದಕ್ಕೆ ನಾವು ಬದ್ಧರಾಗಿರುತ್ತೇವೆ ಎಂದರು. ಇದನ್ನೂ ಓದಿ: ಗರ್ಭಿಣಿ ಮಗಳ ತಲೆಯನ್ನು ಕತ್ತರಿಸಿ ಸೆಲ್ಫಿ ಕ್ಲಿಕ್ಕಿಸಿಕೊಂಡ ಪಾಪಿ ಅಮ್ಮ-ಮಗ
ರಾಜ್ಯದಲ್ಲಿ ಬಿಸಿ ಟೀಂ ಇದೆ. ಬಿ ಅಂದರೆ ಬಿಜೆಪಿ, ಸಿ ಅಂದರೆ ಕಾಂಗ್ರೆಸ್. ನಮಗೆ ಬಿಸಿ ಟೀಂ ಬೇಡ. ಬಿಸಿ ಟೀಂ ನಿಂದ ಏನು ಸಿಕ್ಕಲ್ಲ. ನಮ್ಮದು ಜೆಡಿಎಸ್, ಭತ್ತದ ತೆನೆ ಹೊತ್ತ ಮಹಿಳೆ ಗುರುತು. ಮಹಿಳೆ ಹೊಟ್ಟೆ ಹಸಿದವರಿಗೆ ಅನ್ನ ನೀಡುತ್ತಾಳೆ. ಬಡವರ ಕಷ್ಟಕ್ಕೆ ನೆರವಾಗುತ್ತಾಳೆ. ಭತ್ತದಿಂದ ಅನ್ನ, ರೈತರಿಗೆ ಅನ್ನ ನೀಡುತ್ತೇವೆ. ನಮ್ಮದು ಜೆಡಿಎಸ್, 2023ಕ್ಕೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತೆ ಎಂದು ವಿಶ್ವಾಸದ ಮಾತುಗಳನ್ನು ಆಡಿದರು.
ಕಾಂಗ್ರೆಸ್ ನ ಹಿರಿಯ ಮುಖಂಡ ಗುಲಾಬ್ ನಬಿ ಅಜಾದ್ ಅವರು ಅಲ್ಪಸಂಖ್ಯಾತರ ಮಹಾನ್ ನಾಯಕ. ಕಾಂಗ್ರೆಸ್ ನ ಸ್ತಂಭ ಅವರು. ಅಂತಹವರನ್ನೆ ಬುಡಸಮೇತ ಕಿತ್ತು ಹಾಕಿದ್ದಾರೆ. ಇಲ್ಲಿ ಒಬ್ಬ ಮುಖಂಡನನ್ನು ಇಟ್ಟುಕೊಂಡಿದ್ದಾರೆ. ಅವರಿಂದ ಮಾಜಿ ಪ್ರಧಾನಿ ದೇವೇಗೌಡರನ್ನು, ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಬೈಯುತ್ತಿದ್ದಾರೆ. ದೇವೇಗೌಡರ ಕುಟುಂಬವನ್ನು ಬೈಯ್ಯದಿದ್ದರೆ ಅವರಿಗೆ ಊಟ ಸೇರಲ್ಲ. ಕಾಂಗ್ರೆಸ್ ನನ್ನು ನಾವ್ಯಾರು ತೆಗೆಯಬೇಕಿಲ್ಲ. 26 ರಾಜ್ಯಗಳಲ್ಲಿ ಕಾಂಗ್ರೆಸ್ ಅನ್ನು ಮನೆಗೆ ಕಳುಹಿಸಿದ್ದಾರೆ. 27ನೇಯದು ಇಲ್ಲಿ, ಮನೆಗೆ ಕಳುಹಿಸುತ್ತಾರೆ ಎಂದು ವ್ಯಂಗ್ಯವಾಡಿದರು.