Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಸಗೊಬ್ಬರ ಪೂರೈಕೆಗೆ ರಾಜ್ಯದಿಂದ 6 ಬಾರಿ ಮನವಿ – ದಿಢೀರ್ ಕೊರತೆಗೆ ಕಾರಣವೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಸಗೊಬ್ಬರ ಪೂರೈಕೆಗೆ ರಾಜ್ಯದಿಂದ 6 ಬಾರಿ ಮನವಿ – ದಿಢೀರ್ ಕೊರತೆಗೆ ಕಾರಣವೇನು?

Bengaluru City

ರಸಗೊಬ್ಬರ ಪೂರೈಕೆಗೆ ರಾಜ್ಯದಿಂದ 6 ಬಾರಿ ಮನವಿ – ದಿಢೀರ್ ಕೊರತೆಗೆ ಕಾರಣವೇನು?

Public TV
Last updated: July 28, 2025 9:42 pm
Public TV
Share
3 Min Read
Urea
SHARE

ಬೆಂಗಳೂರು: ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕವನ್ನು ಪರಿಗಣಿಸದೇ ಯೂರಿಯಾ (Urea) ಸೇರಿದಂತೆ ಎಲ್ಲಾ ರಸಗೊಬ್ಬರಗಳನ್ನು ಬೇಡಿಕೆಗೆ ಅನುಗುಣವಾಗಿ ಹಂಚಿಕೆ ಮತ್ತು ಸರಬರಾಜು ಮಾಡಲಾಗಿರುತ್ತದೆ. ಇದರಿಂದಾಗಿ ರಾಜ್ಯದಲ್ಲಿ ಯಾವುದೇ ರೀತಿಯ ರಸಗೊಬ್ಬರದ ಕೊರತೆ (Urea Shortage) ಕಂಡು ಬಂದಿರುವುದಿಲ್ಲ ಎಂದು ಕೃಷಿ ಇಲಾಖೆ (Agriculture Department) ಪ್ರಕಟಣೆ ತಿಳಿಸಿದೆ.

ಕೊರತೆಗೆ ಮೂಲ ಕಾರಣವೇನು?
ಪ್ರಸಕ್ತ ಸಾಲಿನಲ್ಲಿ ಮಾತ್ರ ಆರಂಭಿಕ ಶುಲ್ಕ ಪರಿಗಣಿಸಿ, ಕೇಂದ್ರ ಸರ್ಕಾರದಿಂದ ರಸಗೊಬ್ಬರ ಹಂಚಿಕೆ ಮತ್ತು ಸರಬರಾಜು ಪ್ರಕ್ರಿಯೆ ಜರುಗಿಸಲಾಗುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ಯೂರಿಯಾ ರಸಗೊಬ್ಬರದ ಪ್ರಾರಂಬಿಕ ದಾಸ್ತಾನನ್ನು ಪರಿಗಣಿಸಿ, ಯೂರಿಯಾ ರಸಗೊಬ್ಬರದ ಕಡಿಮೆ ಹಂಚಿಕೆ ಮಾಡಿರುವುದು ಕೊರತೆಗೆ ಮೂಲ ಕಾರಣವಾಗಿದೆ.

ರಾಜ್ಯದ ಬೆಳೆ ಪದ್ಧತಿಯನ್ನು ಆಧರಿಸಿ ಮುಂಗಾರು ಹಂಗಾಮಿಗೆ ಮುಂಚಿತವಾಗಿ ಕೇಂದ್ರ ಸರ್ಕಾರಕ್ಕೆ 12.95 ಲಕ್ಷ ಮೆ.ಟನ್ ಯೂರಿಯಾ ರಸಗೊಬ್ಬರ ಬೇಡಿಕೆಯನ್ನು ಸಲ್ಲಿಸಲಾಗಿತ್ತು. ಆದರೆ, ಕೇಂದ್ರ ಸರ್ಕಾರದಿಂದ 11.17 ಲಕ್ಷ ಮೆ.ಟನ್ ಹಂಚಿಕೆ ನಿಗದಿಪಡಿಸಲಾಗಿರುತ್ತದೆ.

urea

ಏಪ್ರಿಲ್ ಮಾಹೆಯಿಂದ ಜುಲೈ ಮಾಹೆಯವರೆಗೆ 3.02ಲಕ್ಷ ಮೆ.ಟನ್ ಡಿ.ಎ.ಪಿ ರಸಗೊಬ್ಬರದ ಬೇಡಿಕೆ ಇದ್ದು ಕೇಂದ್ರ ಸರ್ಕಾರದಿಂದ ಇಲ್ಲಿಯವರೆಗೆ 2.21 ಲಕ್ಷ ಮೆ.ಟನ್ ಸರಬರಾಜಾಗಿದ್ದು, ಇನ್ನೂ 81,000 ಮೆ.ಟನ್ ಸರಬರಾಜು ಬಾಕಿ ಇರುತ್ತದೆ.

ರಾಜ್ಯದಲ್ಲಿ ಡಿ.ಎ.ಪಿ. ಕೊರತೆ ಕಂಡು ಬಂದಾಗ ಕೃಷಿ ಸಚಿವರ ನಿರ್ದೇಶನದಂತೆ ಪರ್ಯಾಯ ರಸಗೊಬ್ಬರಗಳ ಬಳಕೆ ಕುರಿತು ರೈತರಲ್ಲಿ ಅರಿವು ಮೂಡಿಸಿ, ಪ್ರಸ್ತುತ, ಡಿ.ಎ.ಪಿ. ರಸಗೊಬ್ಬರದ ಕೊರತೆಯನ್ನು ನೀಗಿಸಲಾಗಿದೆ.

ಏಪ್ರಿಲ್ ಮಾಹೆಯಿಂದ ಜುಲೈ ಮಾಹೆಯವರೆಗೆ 6.80ಲಕ್ಷ ಮೆ.ಟನ್ ಯೂರಿಯಾ ರಸಗೊಬ್ಬರದ ಬೇಡಿಕೆ ಇದ್ದು ಕೇಂದ್ರ ಸರ್ಕಾರದಿಂದ ಇಲ್ಲಿಯವರೆಗೆ 5.35 ಲಕ್ಷ ಮೆ.ಟನ್ ಸರಬರಾಜಾಗಿದ್ದು, ಇನ್ನೂ 1.45 ಲಕ್ಷ ಮೆ.ಟನ್ ಸರಬರಾಜು ಬಾಕಿ ಇರುತ್ತದೆ.

ಕೇಂದ್ರ ಸರ್ಕಾರದಿಂದ ಇಲ್ಲಿಯವರೆಗೆ ಸರಬರಾಜು ಮಾಡಿರುವ ರಸಗೊಬ್ಬರವನ್ನು ಸಮರ್ಪಕವಾಗಿ ಎಲ್ಲಾ ಜಿಲ್ಲೆಗಳಿಗೆ ಹಂಚಿಕೆ ಮಾಡಿ ರೈತರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನಿಭಾಯಿಸಲಾಗಿರುತ್ತದೆ.

ರಾಜ್ಯದಿಂದ ರಸಗೊಬ್ಬರ ಪೂರೈಕೆಗೆ 6 ಬಾರಿ ಮನವಿ
ಕೇಂದ್ರ ರಸಗೊಬ್ಬರ ಇಲಾಖೆಯ ಅಧಿಕಾರಿಗಳಿಗೆ ಕೃಷಿ ಇಲಾಖೆ ವತಿಯಿಂದ ಏಪ್ರಿಲ್ ಮಾಹೆಯಿಂದ ಇಲ್ಲಿಯವರೆಗೆ ಆರು ಬಾರಿ ಪತ್ರಗಳನ್ನು ಬರೆದು ಹಂಚಿಕೆಗೆ ಅನುಗುಣವಾಗಿ ಅವಶ್ಯವಿರುವ ಡಿ.ಎ.ಪಿ ಮತ್ತು ಯೂರಿಯಾ ರಸಗೊಬ್ಬರಗಳ ಪೂರೈಕೆ ಮಾಡಲು ಮನವಿ ಮಾಡಲಾಗಿರುತ್ತದೆ.

fertilizer urea e1551669147280

ರಾಜ್ಯದ ಕೃಷಿ ಸಚಿವರು ಕೇಂದ್ರ ಸರ್ಕಾರದ ರಸಗೊಬ್ಬರ ಖಾತೆ ಸಚಿವರಿಗೆ ಅಗತ್ಯವಿರುವ ಡಿ.ಎ.ಪಿ. ರಸಗೊಬ್ಬರದ ಪೂರೈಕೆಗೆ ಪತ್ರ ಮುಖೇನ ಮನವಿ ಸಲ್ಲಿಸಿದ್ದಾರೆ. ಅಲ್ಲದೇ, ಕೃಷಿ ಸಚಿವರೇ ಖುದ್ದಾಗಿ, ಕೇಂದ್ರ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವರನ್ನು ಇದೇ ಜುಲೈ 7 ರಂದು ಭೇಟಿ ಮಾಡಿ ಕೇಂದ್ರ ಸರ್ಕಾರದಿಂದ ಸಕಾಲದಲ್ಲಿ ಅಗತ್ಯವಿರುವ ರಸಗೊಬ್ಬರಗಳ ಪೂರೈಕೆ ಮಾಡಲು ಮನವಿ ಮಾಡಿರುತ್ತಾರೆ.

ರಾಜ್ಯದಲ್ಲಿ ಡಿ.ಎ.ಪಿ ಮತ್ತು ಯೂರಿಯಾ ರಸಗೊಬ್ಬರದ ಕಡಿಮೆ ಪೂರೈಕೆಯನ್ನು ಮನಗಂಡು, ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರದ ರಸಗೊಬ್ಬರ ಖಾತೆ ಸಚಿವರಿಗೆ, ರಾಜ್ಯಕ್ಕೆ ಅಗತ್ಯವಿರುವ ರಸಗೊಬ್ಬರ ಪೂರೈಕೆಗೆ ಜುಲೈ 17 ಮತ್ತು 25ರಂದು ಪತ್ರ ಮುಖೇನ ಮನವಿ ಸಲ್ಲಿಸಿರುತ್ತಾರೆ. ಪ್ರಸ್ತುತ ಕೇಂದ್ರ ಸರ್ಕಾರದಿಂದ ಹಂಚಿಕೆಗನುಗುಣವಾಗಿ ಯೂರಿಯಾ ರಸಗೊಬ್ಬರವನ್ನು ಸರಬರಾಜು ಮಾಡದಿರುವುದರಿಂದ ರಾಜ್ಯದಲ್ಲಿ ಅಲ್ಲಲ್ಲಿ ಯೂರಿಯಾ ರಸಗೊಬ್ಬರದ ಕೊರತೆ ಕಂಡು ಬಂದಿರುತ್ತದೆ. ಈ ಸಂಬಂಧವಾಗಿ ರೈತರು ವಿವಿಧ ಜಿಲ್ಲೆಗಳಲ್ಲಿ ಯೂರಿಯಾ ರಸಗೊಬ್ಬರದ ಪೂರೈಕೆ ಬಗ್ಗೆ ಅಹವಾಲುಗಳನ್ನು ಸಲ್ಲಿಸಿರುತ್ತಾರೆ.

ಯೂರಿಯಾ ಬೇಡಿಕೆ ಪ್ರಮುಖ ಕಾರಣಗಳು
ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಮುಂಚಿತವಾಗಿ ಉತ್ತಮ ಮಳೆಯಾಗಿದ್ದು, ಸಾಮಾನ್ಯ ಅವಧಿಗಿಂತ ಮುಂಚೆ ಬಿತ್ತನೆ ಪ್ರಾರಂಭವಾಗಿದೆ. ಇಲ್ಲಿಯವರೆಗೆ ಬಿತ್ತನೆ ವಿಸ್ತೀರ್ಣ ಹಿಂದಿನ ಸಾಲಿಗೆ ಹೋಲಿಸಿದಲ್ಲಿ ಹೆಚ್ಚಾಗಿರುತ್ತದೆ. ಹೆಚ್ಚು ರಸಗೊಬ್ಬರ ಅವಶ್ಯವಿರುವ ಮುಸುಕಿನ ಜೋಳದ ವಿಸ್ತೀರ್ಣವು ಅಂದಾಜು 2.00ಲಕ್ಷ ಹೆಕ್ಟೇರ್ ಗಣನೀಯವಾಗಿ ಹೆಚ್ಚಳವಾಗಿದೆ. ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಅಂದಾಜು 13,000 ಹೆಕ್ಟೇರ್ ಪ್ರದೇಶದಲ್ಲಿ ಮರುಬಿತ್ತನೆ ಕೈಗೊಳ್ಳಲಾಗಿರುತ್ತದೆ. ತುಂಗಭದ್ರಾ, ಕೃಷ್ಣಾ, ಕಾವೇರಿ ಇತ್ಯಾದಿ ಪ್ರಮುಖ ಜಲಾಶಯಗಳಿಂದ ಅವಧಿಗಿಂತ ಮುಂಚಿತವಾಗಿ ಅಚ್ಚುಕಟ್ಟು ಪ್ರದೇಶಗಳಿಗೆ ನೀರನ್ನು ಬಿಟ್ಟಿರುವುದರಿಂದ ಮುಂಚಿತವಾಗಿ ನಾಟಿ ಕೈಗೊಳ್ಳಲಾಗಿರುವುದು ಯೂರಿಯಾ ಮತ್ತು ರಸಗೊಬ್ಬರ ಬೇಡಿಕೆ ಪ್ರಮುಖ ಕಾರಣವಾಗಿದೆ.

ಇಲಾಖೆಯ ಅಧಿಕಾರಿಗಳು ಪ್ರತಿ ಮಂಗಳವಾರ ಕೇಂದ್ರ ಸರ್ಕಾರದ ವಿಡಿಯೋ ಸಂವಾದದಲ್ಲಿ ರಾಜ್ಯಕ್ಕೆ ಅಗತ್ಯವಿರುವ ರಸಗೊಬ್ಬರಗಳ ಪೂರೈಕೆ ಮಾಡುವಂತೆ ಮನವಿ ಸಲ್ಲಿಸಿರುತ್ತಾರೆ. ಅಲ್ಲದೇ, ಕೇಂದ್ರ ಸರ್ಕಾರದ ರಸಗೊಬ್ಬರ ಇಲಾಖೆಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ರಾಜ್ಯದಲ್ಲಿ ಅವಶ್ಯವಿರುವ ರಸಗೊಬ್ಬರ ಪೂರೈಕೆಗೆ ಅವಶ್ಯ ಕ್ರಮ ವಹಿಸುತ್ತಿದ್ದಾರೆ.

ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ಪರಿಸರ ಸ್ನೇಹಿಯಾಗಿರುವ ನ್ಯಾನೋ ರಸಗೊಬ್ಬರ ಬಳಕೆಗೆ ಇಲಾಖೆಯಿಂದ ವ್ಯಾಪಕ ಪ್ರಚಾರ ನೀಡಿ ಅರಿವು ಮೂಡಿಸಲಾಗುತ್ತಿದೆ. ಬೆಳೆ, ಮಣ್ಣು, ಮಾನವ, ಜಾನುವಾರು ಮತ್ತು ಪರಿಸರದ ಆರೋಗ್ಯದ ದೃಷ್ಟಿಯಿಂದ ಯೂರಿಯಾ ಬಳಕೆಯನ್ನು ಕಡಿತಗೊಳಿಸಲು ರೈತರಲ್ಲಿ ಮನವಿ ಮಾಡಲಾಗಿದೆ.

ಆರಂಭಿಕ ಶುಲ್ಕ ಪರಿಗಣಿಸದೆ ಕೊರತೆಯಾಗಿರುವ 81,000 ಮೆ.ಟನ್ ಡಿ.ಎ.ಪಿ. ಮತ್ತು 1,45,000 ಮೆ.ಟನ್. ಯೂರಿಯಾ ರಸಗೊಬ್ಬರವನ್ನು ಕೇಂದ್ರ ಸರ್ಕಾರವು ಪೂರೈಸಿದಲ್ಲಿ ರೈತರ ಬವಣೆ ನೀಗಿಸಬಹುದಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಸಹ ಅಗತ್ಯ ಕ್ರಮ ಜರುಗಿಸಬೇಕಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

MS Dhoni
Cricket

CSK ಫ್ಯಾನ್ಸ್‌ಗೆ ಶಾಕ್‌ – ಐಪಿಎಲ್ 2026ರ ಮೊದಲೆರಡು ವಾರಗಳಲ್ಲಿ ಧೋನಿ ಆಡೋದು ಡೌಟ್

Public TV
By Public TV
6 minutes ago
NAMMA METRO 4
Bengaluru City

IPL ಪಂದ್ಯದ ದಿನ ತಡರಾತ್ರಿ 2ರವರೆಗೆ ಸಂಚಾರ ಅವಧಿ ವಿಸ್ತರಿಸಿದ ʻನಮ್ಮ ಮೆಟ್ರೋʼ

Public TV
By Public TV
1 hour ago
Bengaluru Police
Bengaluru City

ಬೆಂಗಳೂರಿಂದ ತಿರುಪತಿಗೆ ಹೋರಟಿದ್ದ ಕಾರು ಅಪಘಾತ; ಅಪ್ಪ-ಅಮ್ಮ, 4 ವರ್ಷದ ಮಗು ಸ್ಥಳದಲ್ಲೇ ಸಾವು

Public TV
By Public TV
1 hour ago
Udupi Fishing 2
Districts

ಮೀನುಗಾರಿಕೆಗೂ ತಟ್ಟಿದ ಮಧ್ಯಪ್ರಾಚ್ಯ ಯುದ್ಧದ ಬಿಸಿ; ಇಂಧನ ಸಂಕಷ್ಟ, ಆಳ ಸಮುದ್ರ ಮೀನುಗಾರಿಕೆಗೆ ಆತಂಕ

Public TV
By Public TV
1 hour ago
Petrol Bunk 4
Bengaluru City

ಬೆಂಗಳೂರಿನಲ್ಲಿ ಪೆಟ್ರೋಲ್ ಅಭಾವ ವದಂತಿ – ಬಾಟಲ್‌, ಕ್ಯಾನ್‌ ಹಿಡಿದು ಬಂಕ್‌ಗಳಿಗೆ ಮುಗಿಬಿದ್ದ ಜನ

Public TV
By Public TV
2 hours ago
Gangavathi Inscription
Districts

ಗಂಗಾವತಿಯಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ಶಿಲಾಶಾಸನ ಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?