ಮೈಸೂರು ಏರ್‌ಪೋರ್ಟ್‌ ರನ್‌ವೇ ವಿಸ್ತರಣೆಗೆ ಅನುದಾನ ಘೋಷಣೆ – ತವರು ಜಿಲ್ಲೆಗೆ ಸಿಎಂ ಕೊಡುಗೆ ಏನು?

Public TV
1 Min Read
BUDGET 2024 1

ಬೆಂಗಳೂರು: ಮೈಸೂರು ವಿಮಾನ ನಿಲ್ದಾಣ ರನ್‌ವೇ (Mysuru Airport Runway) ವಿಸ್ತರಣೆ ಹಾಗೂ ವಿಜಯಪುರ ಹಾಗೂ ಹಾಸನ ವಿಮಾನ ನಿಲ್ದಾಣ ಕಾಮಗಾರಿ, ರಾಯಚೂರು ಮತ್ತು ಕಾರವಾರ ವಿಮಾನ ನಿಲ್ದಾಣಗಳ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ 1,600 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: Karnataka Budget 2024- ಸಿದ್ದರಾಮಯ್ಯ ಹಿಡಿದ ಬಜೆಟ್ ‘ಬ್ಯಾಗ್’ಗೆ ನಟ ಧನಂಜಯ್ ಮೆಚ್ಚುಗೆ

2024-25ನೇ ಸಾಲಿನ ತಮ್ಮ ಬಜೆಟ್‌ನಲ್ಲಿ (Karnataka Budget) ತವರು ಜಿಲ್ಲೆಗೆ ಹಲವು ಕೊಡುಗೆ ನೀಡಿದ್ದು, ಜನರು ಸಂತಸಗೊಂಡಿದ್ದಾರೆ. ಇದನ್ನೂ ಓದಿ: ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಣ – ಸಿಎಂಗೆ ಅಭಿನಂದನೆ ಸಲ್ಲಿಸಿದ ಡಾ.ಶರಣಪ್ರಕಾಶ್ ಪಾಟೀಲ್

ತವರು ಜಿಲ್ಲೆ ಮೈಸೂರಿಗೆ ಸಿಎಂ ಕೊಡುಗೆ ಏನು?
* ಮೈಸೂರಿನಲ್ಲಿರುವ 40 ಹಾಸಿಗೆ ಸಾಮರ್ಥ್ಯದ Nephro-Urology ಆಸ್ಪತ್ರೆಯ 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಉನ್ನತೀಕರಣ.
* ಮೈಸೂರು ವೈದ್ಯಕೀಯ ಮಹಾವಿದ್ಯಾಲಯ ಶತಮಾನೋತ್ಸವ ಸವಿನೆನಪಿಗಾಗಿ ಕೆ.ಆರ್‌ ಆಸ್ಪತ್ರೆ ಆವರಣದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಹೊರರೋಗಿ ವಿಭಾಗದ ಕಟ್ಟಡ ನಿರ್ಮಾಣಕ್ಕೆ ಕ್ರಮ.
* ಮೈಸೂರಿನ ಜೊತೆಗೆ ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ ತುಮಕೂರು, ದೊಡ್ಡಬಳ್ಳಾಪುರ, ಮಾಗಡಿ ಮತ್ತು ಬಿಡದಿ ರಸ್ತೆಯಲ್ಲಿ ಮತ್ತು ರೈಲು ಸಂಪರ್ಕದೊಂದಿಗೆ ಉಪನಗರ ಟೌನ್‌ಶಿಪ್‌ ಅಭಿವೃದ್ಧಿ.
* ಮೈಸೂರಿನಲ್ಲಿ ಪೆರಿಫೆರಲ್‌ ರಿಂಗ್‌ ರಸ್ತೆ ನಿರ್ಮಿಸಲು ಕಾರ್ಯ ಸಾಧ್ಯತಾ ವರದಿ.
* ಮೈಸೂರು ಸೇರಿದಂತೆ ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗಗಳಲ್ಲಿ ನೂತನ ಜವಳಿ ಪಾರ್ಕ್‌ಗಳ ಪ್ರಾರಂಭ, ಜೊತೆಗೆ 10,000 ಉದ್ಯೋಗ ಸೃಷ್ಟಿ
* ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಬದನವಾಳು ಗ್ರಾಮದಲ್ಲಿ ಖಾದಿ ಪ್ರೋತ್ಸಾಹಕ್ಕೆ ಕ್ರಮ.

Share This Article