ಲಕ್ನೋ: ಜ್ಞಾನವಾಪಿ (Gyanvapi) ಮಸೀದಿ ಮಸೀದಿಯಾಗಿದ್ದರೇ ಅದರ ಆವರಣದಲ್ಲಿ ತ್ರಿಶೂಲ ಏನು ಮಾಡುತ್ತಿದೆ ಎಂದು ಉತ್ತರ ಪ್ರದೇಶ (Uttar Pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adithyanath) ಪ್ರಶ್ನಿಸಿದ್ದಾರೆ.
ಖಾಸಗಿ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಜ್ಞಾನವಾಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಐತಿಹಾಸಿಕ ಪ್ರಮಾದವನ್ನು ಸರಿಪಡಿಸಲು ಮುಸ್ಲಿಂ ಅರ್ಜಿದಾರರು ಒಂದು ನಿರ್ಣಯಕ್ಕೆ ಮುಂದಾಗಬೇಕು. ಸರ್ಕಾರವು ದೀರ್ಘಕಾಲದ ಸಮಸ್ಯೆಯನ್ನು ಪರಿಹರಿಸಲು ಬಯಸುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಎಎಸ್‌ಐ ಸಮೀಕ್ಷೆ – ತೀರ್ಪು ಕಾಯ್ದಿರಿಸಿದ ಅಲಹಾಬಾದ್ ಹೈಕೋರ್ಟ್
“ज्ञानवापी को अगर मस्जिद कहेंगे, तो विवाद होगा. भगवान ने जिसको दृष्टि दी है, वह देखे न. त्रिशूल मस्जिद के अंदर क्या कर रहा है ? हमने तो नहीं रखे. वहां ज्योतिर्लिंग हैं, देवप्रतिमाएं हैं. दीवारें चिल्ला चिल्ला कर क्या कह रही हैं ?”#YogiAdityanath #YogiKaNayaUP #Gyanvapi pic.twitter.com/FOkUjGUuts
— BJYM Uttar Pradesh (@BJYM4UP) July 31, 2023
ನಾವು ಅದನ್ನು ಮಸೀದಿ ಎಂದು ಕರೆದರೆ ಅದು ಸಮಸ್ಯೆಯಾಗುತ್ತದೆ. ಹಾಗಿದ್ದರೆ ಮಸೀದಿಯಲ್ಲಿ ತ್ರಿಶೂಲ ಏನು ಮಾಡುತ್ತಿದೆ? ತ್ರಿಶೂಲವನ್ನು ನಾವು ಇಟ್ಟಿಲ್ಲ. ಮಸೀದಿಯ ಪಕ್ಕದಲ್ಲಿ ಜ್ಯೋತಿರ್ಲಿಂಗವಿದೆ, ದೇವತೆಗಳಿದ್ದಾರೆ. ಐತಿಹಾಸಿಕ ಪ್ರಮಾದವನ್ನು ಸರಿಪಡಿಸಲು ಮುಸ್ಲಿಂ ಕಡೆಯಿಂದ ಪ್ರಸ್ತಾವನೆ ಬರಬೇಕು ಎಂದು ನಾನು ಭಾವಿಸುತ್ತೇನೆ ಎಂದರು. ಇದನ್ನೂ ಓದಿ: ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ – ಪ್ರಧಾನಿ ಮೋದಿ ತಯಾರಿ ಏನು?
ಜ್ಞಾನವಾಪಿ ಮಸೀದಿ ಸರ್ವೆಗೆ ವಾರಣಾಸಿ ಜಿಲ್ಲಾ ನ್ಯಾಯಲಯ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಅಲಹಬಾದ್ ಹೈಕೋರ್ಟ್ ಅಗಸ್ಟ್ 3ಕ್ಕೆ ಆದೇಶ ಕಾಯ್ದಿರಿಸಿದೆ. ಇದನ್ನೂ ಓದಿ: ಇಡಿ ಮುಖ್ಯಸ್ಥ ಸಂಜಯ್ ಕುಮಾರ್ ಮಿಶ್ರಾ ಅಧಿಕಾರಾವಧಿ ವಿಸ್ತರಣೆಗೆ ಸುಪ್ರೀಂ ಸಮ್ಮತಿ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]