ವಾಷಿಂಗ್ಟನ್: ಈಗಾಗಲೇ ಕಠಿಣ ವಲಸೆ ನೀತಿಯಿಂದ ಅಕ್ರಮ ವಲಸಿಗರನ್ನು ದೇಶದಿಂದಲೇ ಹೊರಹಾಕುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump), ಇದೀಗ ಶ್ರೀಮಂತ ವಲಸಿಗರ ಮನವೋಲಿಕೆಗೆ ಹೊಸ ಯೋಜನೆಯೊಂದನ್ನ ಜಾರಿಗೆ ತರಲು ಮುಂದಾಗಿದ್ದಾರೆ. ಶ್ರೀಮಂತ ವಲಸಿಗರಿಗೆ ʻಗೋಲ್ಡ್ ಕಾರ್ಡ್ʼಗಳ (Gold Card) ಮೂಲಕ, ಅಮೆರಿಕನ್ ಪೌರತ್ವ ಪಡೆಯುವುದನ್ನು ಸುಲಭಗೊಳಿಸಲು ಟ್ರಂಪ್ ಪ್ಲ್ಯಾನ್ ಮಾಡುತ್ತಿದ್ದಾರೆ.
You can now “buy” a route to US citizenship at $5 million. Trump’s New Plan.
Just watch thousands and thousands of Indian rich running away in next few months now. #goldcard #Trump #GreenCardPrivilegePlus #UScitizenship pic.twitter.com/L69zMO0Tbs
— Sandeep Manudhane (@sandeep_PT) February 26, 2025
Advertisement
ಈ ʻಗೋಲ್ಡ್ ಕಾರ್ಡ್ʼಗಳನ್ನು ಶ್ರೀಮಂತ ವಲಸಿಗರು 5 ಮಿಲಿಯನ್ ಡಾಲರ್ (43.54 ಕೋಟಿ) ರೂ. ಪಾವತಿಸಿ ಖರೀದಿಸಬಹುದಾಗಿದೆ.
Advertisement
ಅಮೆರಿಕದಲ್ಲಿ (USA) ಉದ್ಯೋಗಗಳನ್ನು ಸೃಷ್ಟಿಸುವ ಮತ್ತು ದೊಡ್ಡ ಮೊತ್ತದ ಹಣವನ್ನು ಹೂಡಿಕೆ ಮಅಡುವ ವಿದೇಶಿ ಹೂಡಿಕೆದಾರರಿಗೆ ಮಾತ್ರ ಅಮೆರಿಕದ ಶಾಶ್ವತ ನಿವಾಸಿಗಳಾಗಲು ಅನುವು ಮಾಡಿಕೊಡುವ EB-5 ವೀಸಾ ಯೋಜನೆಯನ್ನು ಗೋಲ್ಡ್ ಕಾರ್ಡ್‌ನೊಂದಿಗೆ ಬದಲಾಯಿಸಲಾಗುವುದು ಎಂದು ಟ್ರಂಪ್ ಹೇಳಿದ್ದಾರೆ. ಇದನ್ನೂ ಓದಿ: ವಿಳಂಬ ಸಾಕು, ಕಾರಣ ಬೇಡ, ಕಟಾಕಟ್ ಗ್ಯಾರಂಟಿ ಹಣ ವರ್ಗಾಯಿಸಿ: ಸರ್ಕಾರಕ್ಕೆ ನಿಖಿಲ್ ಆಗ್ರಹ
Advertisement
Advertisement
ಈ ಗೋಲ್ಡ್ ಕಾರ್ಡ್‌ಗಳು ಈಗಾಗಲೇ ಅಸ್ತಿತ್ವದಲ್ಲಿರುವ ಗ್ರೀನ್ ಕಾರ್ಡ್ ನಿವಾಸಿಗಳು ಮತ್ತು ಹೊಸ ವಿದೇಶಿಯರಿಗೆ ಅಮೆರಿಕನ್ ಪೌರತ್ವದ ಮಾರ್ಗವನ್ನು ಮತ್ತಷ್ಟು ಸುಲಭಗೊಳಿಸಲಿದೆ. ಸುಮಾರು 1 ಮಿಲಿಯನ್ ಗೋಲ್ಡ್ ಕಾರ್ಡ್‌ಗಳನ್ನು ಮಾರಾಟ ಮಾಡುವ ಉದ್ದೇಶವಿದ್ದು, ಈ ಉಪಕ್ರಮವು ರಾಷ್ಟ್ರೀಯ ಸಾಲವನ್ನು ತ್ವರಿತವಾಗಿ ತೀರಿಸಲು ಸಹಾಯ ಮಾಡಲಿದೆ ಎಂದು ಟ್ರಂಪ್ ವಿವರಿಸಿದ್ದಾರೆ. ಇದನ್ನೂ ಓದಿ: ಚಾಂಪಿಯನ್ಸ್ ಟ್ರೋಫಿ ಭದ್ರತಾ ಕಾರ್ಯ ನಿರ್ವಹಿಸಲು ನಿರಾಕರಣೆ – ಪಾಕ್‌ನ 100ಕ್ಕೂ ಹೆಚ್ಚು ಪೊಲೀಸರು ವಜಾ
EB-5 ಯೋಜನೆಯು ಅಮೆರಿಕದ ವ್ಯವಹಾರಗಳಲ್ಲಿ ಹೂಡಿಕೆ ಮಾಡುವ ಭರವಸೆ ನೀಡುವ ವಿದೇಶಿಯರಿಗೆ, ಗ್ರೀನ್ ಕಾರ್ಡ್‌ಗಳನ್ನು ನೀಡುತ್ತದೆ. ನಾವು ಈಗ ಸುಮಾರು 5 ಮಿಲಿಯನ್ ಅಮೆರಿಕನ್ ಡಾಲರ್ ಮೊತ್ತದ ಗೋಲ್ಡ್ ಕಾರ್ಡ್‌ಗಳನ್ನು ಮಾರಾಟ ಮಾಡಲಿದ್ದೇವೆ. ಇದು ನಿಮಗೆ ಗ್ರೀನ್ ಕಾರ್ಡ್ ಸವಲತ್ತುಗಳನ್ನು ನೀಡುವುದರ ಜೊತೆಗೆ, ಅಮೆರಿಕನ್ ಪೌರತ್ವ ಪಡೆಯುವ ಮಾರ್ಗವನ್ನು ಸುಲಭಗೊಳಿಸಲಿದೆ ಯುಎಸ್ ಅಧ್ಯಕ್ಷರು ಆಶ್ವಾಸನೆ ನೀಡಿದ್ದಾರೆ. ಇದನ್ನೂ ಓದಿ: ಡ್ರೈವಿಂಗ್ ಬಗ್ಗೆ ಚಾಲಕರಿಗೆ ಸರಿಯಾಗಿ ತರಬೇತಿ ಕೊಡಿ – ಸಾರ್ವಜನಿಕರಿಂದ ಬಿಎಂಟಿಸಿಗೆ ದೂರು