ಲಸಿಕೆ ಪ್ರಮಾಣ ಪತ್ರದಲ್ಲಿ ಮೋದಿ ಫೋಟೋಗೆ ಪ್ರಶ್ನೆ ಯಾಕೆ? ಹೆಮ್ಮೆ ಪಡಿ – ಕೇರಳ ಹೈಕೋರ್ಟ್

Public TV
2 Min Read
modi corona vaccine certifacate

ತಿರುವನಂತಪುರ: ಕೋವಿಡ್-19 ಲಸಿಕೆ ಪ್ರಮಾಣ ಪತ್ರದಲ್ಲಿ ನರೇಂದ್ರ ಮೋದಿ ಭಾವಚಿತ್ರ ಇರುವ ಬಗ್ಗೆ ಪ್ರಶ್ನಿಸಿ ಕೇರಳದ ವ್ಯಕ್ತಿಯೊಬ್ಬರು ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಕುರಿತಂತೆ ಲಸಿಕೆ ಪ್ರಮಾಣ ಪತ್ರದಲ್ಲಿ ಮೋದಿ ಫೋಟೋದ ಬಗ್ಗೆ ಯಾಕೆ ಪ್ರಶ್ನಿಸುತ್ತೀರಿ? ಈ ಬಗ್ಗೆ ನೀವು ಹೆಮ್ಮೆ ಪಡಬೇಕು ಎಂದು ಕೇರಳ ಹೈಕೋರ್ಟ್ ಚಾಟಿ ಬೀಸಿದೆ.

Kerala High Court

ಕೋವಿಡ್-19 ಲಸಿಕೆ ಪ್ರಮಾಣ ಪತ್ರದಲ್ಲಿ ನರೇಂದ್ರ ಮೋದಿ ಫೋಟೋ ಹಾಕಿರುವ ಬಗ್ಗೆ ಮಾಹಿತಿ ಹಕ್ಕು ಕಾರ್ಯಕರ್ತರು ಪ್ರಶ್ನೆ ಮಾಡಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಕೃಷ್ಣನ್ ಲಸಿಕೆ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿ ಅವರ ಭಾವಚಿತ್ರ ಇರುವುದರಲ್ಲಿ ಏನು ಸಮಸ್ಯೆ ಇದೆ? ನೀವು ಮಾಜಿ ಪ್ರಧಾನಿ ಜವಾಹರ‌ಲಾಲ್ ನೆಹರು ಎಂಬ ಹೆಸರಿನ ಹಲವು ವಿಶ್ವವಿದ್ಯಾನಿಲಯಗಳನ್ನು ನೋಡಿದ್ದೀರಿ ಆ ಹೆಸರನ್ನು ಯಾಕೆ ಬದಲಾಯಿಸಲು ಹೇಳುತ್ತಿಲ್ಲ ಎಂದು ಮರು ಪ್ರಶ್ನೆ ಹಾಕಿದ್ದಾರೆ. ಇದನ್ನೂ ಓದಿ: ಕೊರೊನಾ ವ್ಯಾಕ್ಸಿನ್ ಸರ್ಟಿಫಿಕೇಟ್‍ನಿಂದ ಮೋದಿ ಫೋಟೋ ತೆಗೆಯಲು ಸೂಚನೆ

cowin 2

ನೀವು ತಿಳಿಸಿರುವಂತೆ ಭಾರತವನ್ನು ಹೊರತು ಪಡಿಸಿ ಉಳಿದ ದೇಶಗಳಲ್ಲಿ ಅವರ ದೇಶದ ಪ್ರಧಾನಿ ಅಥವಾ ಅಧ್ಯಕ್ಷರ ಫೋಟೋ, ಲಸಿಕೆ ಪ್ರಮಾಣ ಪತ್ರದಲ್ಲಿ ಇಲ್ಲ. ಆದರೆ ಭಾರತದ ಲಸಿಕೆ ಪ್ರಮಾಣ ಪತ್ರದಲ್ಲಿ ಪ್ರಧಾನಿಯ ಫೋಟೋ ಇದೆ. ಇದರಲ್ಲಿ ತಪ್ಪೇನಿಲ್ಲ. ಬೇರೆ ದೇಶದವರು ಅವರ ಪ್ರಧಾನಿಗಳ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿಲ್ಲ. ಆದರೆ ಭಾರತೀಯರು ಪ್ರಧಾನಿಗಳ ಬಗ್ಗೆ ಹೆಮ್ಮೆ ಪಡುತ್ತಾರೆ. ಈ ಬಗ್ಗೆ ಬೇರೆ ಬೇರೆ ಅಭಿಪ್ರಾಯಗಳಿರಬಹುದು ಆದರೆ ಅವರು ನಮ್ಮ ದೇಶದ ಪ್ರಧಾನಿ. ದೇಶದಲ್ಲಿರುವ 100 ಕೋಟಿ ಜನ ಈ ಬಗ್ಗೆ ಪ್ರಶ್ನೆ ಮಾಡಿಲ್ಲ. ನೀವು ಯಾಕೆ ಪ್ರಶ್ನಿಸಿದ್ದೀರಿ ಎಂದು ಕೇಳಿದ್ದಾರೆ. ಇದನ್ನೂ ಓದಿ: ತಾಯಿ ಗಂಗೆ, ಕಾಶಿ ವಿಶ್ವನಾಥ ಎಲ್ಲರಿಗೂ ಸೇರಿದವರು: ಮೋದಿ

COWIN PORTAL 1

ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ವಕೀಲರು ಪ್ರಧಾನಿ ಮೋದಿಯವರ ಹೇಳಿಕೆಯ ಜೊತೆ ಮೋದಿ ಭಾವಚಿತ್ರವನ್ನು ಜನರಲ್ಲಿ ಲಸಿಕೆಯ ಬಗ್ಗೆ ಜಾಗೃತಿ ಮೂಡಿಸಲು ಬಳಸಲಾಗಿದೆ ಎಂದು ಸಮರ್ಥಿಸಿಕೊಂಡರು. ದೀರ್ಘವಾದ ವಿಚಾರಣೆ ಮಾಡಲು ಮುಂದಾಗಿರುವ ಕೋರ್ಟ್ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

ಈ ಹಿಂದೆ ಪಂಚ ರಾಜ್ಯಗಳಾದ ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು ಮತ್ತು ಪುದುಚೇರಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೊರೊನಾ ವ್ಯಾಕ್ಸಿನ್ ಸರ್ಟಿಫಿಕೇಟ್ ನಿಂದ ಪ್ರಧಾನಿ ಮೋದಿಯವರ ಫೋಟೋವನ್ನು ತೆಗೆದು ಹಾಕುವಂತೆ ಚುನಾವಣಾ ಆಯೋಗ ಕೇಂದ್ರಕ್ಕೆ ಸೂಚನೆ ನೀಡಿತ್ತು. ಇದನ್ನೂ ಓದಿ: ಮೋದಿ ಕನಸಿನ ಯೋಜನೆ ಕಾಶಿ ವಿಶ್ವನಾಥ ಕಾರಿಡಾರ್ ವಿಶೇಷತೆ ಏನು?

Share This Article
Leave a Comment

Leave a Reply

Your email address will not be published. Required fields are marked *