ನಟಿ, ಗಾಯಕ ಚಂದನ್ ಶೆಟ್ಟಿ ಅವರ ಪತ್ನಿ ನಟಿ ನಿವೇದಿತಾ ಗೌಡ ಸದ್ಯ ಬಾಲಿಯಲ್ಲಿ ಬೀಡು ಬಿಟ್ಟಿದ್ದಾರೆ. ತಾವು ಒಬ್ಬರೇ ಬಾಲಿಗೆ ಹೋದ ವಿಷಯವನ್ನು ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದರು ನಿವಿ. ಬಾಲಿಯಲ್ಲಿ ಕಳೆದ ದಿನಗಳನ್ನು ಫೋಟೋಗಳ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ಒಂದೊಂದೇ ಪೋಸ್ಟ್ ಮಾಡುತ್ತಿದ್ದಾರೆ. ಈ ಫೋಟೋ ಕಂಡು ಕೆಲವರು ಕೆಟ್ಟದ್ದಾಗಿ ನಿವೇದಿತಾಗೆ ಕಾಮೆಂಟ್ ಮಾಡಿದ್ದಾರೆ. ಇದರಿಂದಾಗಿ ನಿವಿ ಸಹಜವಾಗಿಯೇ ಗರಂ ಆಗಿದ್ದಾರೆ.
Advertisement
ಗಂಡ ದುಡಿದ ದುಡ್ಡಿನಲ್ಲಿ ಒಬ್ಬಳೇ ಎಂಜಾಯ್ ಮಾಡುತ್ತಿದ್ದೀಯಾ? ಎಂದು ಕೆಲವರು ಕೆಟ್ಟದ್ದಾಗಿಯೇ ಕಾಮೆಂಟ್ ಮಾಡಿದ್ದು, ಅದಕ್ಕೆ ನಿವಿ ಅಷ್ಟೇ ತೀಕ್ಷ್ಣವಾಗಿ ಉತ್ತರ ನೀಡಿದ್ದಾರೆ. ‘ನಾನು ನನ್ನ ದುಡ್ಡಿನಲ್ಲಿ ಪ್ರವಾಸ ಮಾಡುತ್ತಿರುವುದು. ನನಗೂ ದುಡಿಯುವ ಶಕ್ತಿ ಇದೆ. ಹುಡುಗರು ಸೋಲೋ ಟ್ರಿಪ್ ಹೋದರೆ, ಯಾರಿಗೂ ಏನೂ ಅನಿಸುವುದಿಲ್ಲ. ಹುಡುಗಿಯರು ಹೋದರೆ, ಈ ರೀತಿ ಕೆಟ್ಟ ಕಾಮೆಂಟ್ ಮಾಡುತ್ತೀರಿ. ಅಷ್ಟಕ್ಕೂ ನಾನು ನನ್ನ ಗಂಡನ ದುಡ್ಡಿನಲ್ಲಿ ಹೋದರೆ ನಿಮಗೇನು ಸಮಸ್ಯೆ? ಎಂದು ಹೇಳುವ ಮೂಲಕ ಚಳಿ ಬಿಡಿಸಿದ್ದಾರೆ.. ಇದನ್ನೂ ಓದಿ: ಮದುವೆ ಬಗ್ಗೆ ವೈಷ್ಣವಿ ತುಂಬಾ ಕನಸು ಕಂಡಿದ್ದಳು: ತಂದೆ ರವಿಕುಮಾರ್
Advertisement
Advertisement
ಕಿರುತೆಯ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ನಲ್ಲಿ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದ ನಿವೇದಿತಾ ಗೌಡ ಬಳಿಕ ನಟನೆ, ಮಾಡೆಲಿಂಗ್, ಮದುವೆ, ಸಂಸಾರ ಅಂತಾ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ತಮ್ಮ ಎಲ್ಲಾ ಕೆಲಸಕ್ಕೂ ಬ್ರೇಕ್ ಹಾಕಿ, ಬಾಲಿಯಲ್ಲಿ ನಟಿ ಕಾಲ ಕಳೆಯುತ್ತಿದ್ದಾರೆ. ಪತಿ ಚಂದನ್ನ ಬಿಟ್ಟು ಸೋಲೋ ಟ್ರಿಪ್ನ ಎಂಜಾಯ್ ಮಾಡ್ತಿದ್ದಾರೆ. ಸದ್ಯ ಟ್ರಿಪ್ ಫೋಟೋ, ವೀಡಿಯೋಗಳು ನೆಟ್ಟಿಗರ ಗಮನ ಸೆಳೆಯುತ್ತಿದೆ.
Advertisement
ಬಾಲಿಗೆ ತಾವು ಸೋಲೋ ಟ್ರಿಪ್ ಹೊರಟಿರುವುದಾಗಿ ಈ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ತಿಳಿಸಿದ್ದರು. ಸದ್ಯ ತಮ್ಮ ಸೋಲೋ ಟ್ರಿಪ್ನ್ನ ನಿವೇದಿತಾ ಸಖತ್ ಆಗಿ ಏಂಜಾಯ್ ಮಾಡ್ತಿದಾರೆ. ಇನ್ನೂ ಸದ್ಯದಲ್ಲೇ ನಿವೇದಿತಾ ಗೌಡ, ನಾಯಕಿಯಾಗಿ ಬೆಳ್ಳಿಪರದೆಯಲ್ಲಿ ಮಿಂಚಲು ರೆಡಿಯಾಗಿದ್ದಾರೆ. ತೆರೆಮರೆಯಲ್ಲಿ ಅದಕ್ಕಾಗಿ ಭರ್ಜರಿ ತಯಾರಿ ಕೂಡ ನಡೆಯುತ್ತಿದೆ.