ಮಡಿಕೇರಿ: ಒಂದು ದೇಶ ಒಂದೇ ಭಾಷೆ ಹಿಂದಿ ಆಗಿರಬೇಕು. ಹಿಂದೂ ರಾಷ್ಟ್ರವಾಗಿರಬೇಕು ಎಂದು ಸಾತ್ಯಕಿ ಸಾವರ್ಕರ್ (Satyaki Ashok Savarkar) ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (H.D Kumaraswamy), ಸಾವರ್ಕರ್ ಮೊಮ್ಮಗನ ಕಟ್ಟಿಕೊಂಡು ನನಗೆ ಏನಾಗಬೇಕು. ನನ್ನ ಜನ ಹೊಟ್ಟೆಗೆ ಹಿಟ್ಟಿಲ್ಲದೆ ಸಾಯುತ್ತಿದ್ದಾರೆ. ಅವರ ಉಪದೇಶ ಕಟ್ಟಿಕೊಂಡು ನನಗೆ ಏನೂ ಆಗಬೇಕಿಲ್ಲ ಎಂದು ತಿರುಗೇಟು ನೀಡಿದ್ದಾರೆ.
Advertisement
ಮಡಿಕೇರಿಯಲ್ಲಿ ಮಾತಾನಾಡಿದ ಅವರು, ಸಾವರ್ಕರ್ (VD Savarkar) ಮೊಮ್ಮಗ ಯಾರು ಅವರು, ಯಾರು ಆ ಮನುಷ್ಯ ಅವನಿಗೆ ಏನು ಗೊತ್ತಿದೆ ಎಂದು ಪ್ರಶ್ನಿಸಿದರು. ಮೊದಲು ಜನರ ಬದುಕನ್ನು ಕಟ್ಟಲು ನೋಡಿ. ಕೊಡಗಿ (Kodagu) ನಲ್ಲಿ ಮೂರು ವರ್ಷದಿಂದ ಭೂಕುಸಿತದಿಂದ ಮನೆ, ಬೆಳೆ ಹಾಳಾಗಿದೆ. ಅವರಿಗೆ ಏನು ಕೊಟ್ಟಿದ್ದೀರಿ ಮೊದಲು ಹೇಳಿ. ಆಮೇಲೆ ನಿಮ್ಮ ಹಿಂದಿ ಭಾಷೆ ಬಗ್ಗೆ ಚರ್ಚೆ ಮಾಡಿ. ಸಾವರ್ಕರ್ ಮಗನೋ, ಮೊಮ್ಮಗನೋ ಇಲ್ಲಿಗೆ ಬಂದು ನಮಗೆ ಬೋಧನೆ ಮಾಡುವುದು ಏನಿದೆ. ಮೊದಲು ಜನರ ಬದುಕನ್ನು ಕಟ್ಟಲು ನೋಡಿ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಹಿಂದೂಗಳು ಒಟ್ಟಾಗಿರಬೇಕೆಂಬುದು ಸಾವರ್ಕರ್ ಕನಸಾಗಿತ್ತು – ಮೊಮ್ಮಗ ಸಾತ್ಯಕಿ ಸಾವರ್ಕರ್
Advertisement
Advertisement
ಇದೇ ಸಂದರ್ಭ ವಿಧಾನಸಭಾ ಉಪ ಸಭಾಪತಿ ಆನಂದ ಮಾಮನಿ (Anand Mamani) ನಿಧನಕ್ಕೆ ಹೆಚ್‍ಡಿಕೆ ಸಂತಾಪ ಸೂಚಿಸಿದ್ದಾರೆ. ಆನಂದ ಮಾಮನಿ ಅವರು ಸರಳ ಸಜ್ಜನಿಕೆ, ಸೌಮ್ಯ ವ್ಯಕ್ತಿ, ಚಿಕ್ಕ ವಯಸ್ಸಿನಲ್ಲಿ ಈ ರೀತಿಯ ಸಾವು ಬರಬಾರದಿತ್ತು. ಅವರು ಬಿಜೆಪಿ ಪಕ್ಷಕ್ಕೆ ಸೇರುವುದಕ್ಕೆ ಮುನ್ನ ನಮ್ಮ ಪಕ್ಷದ ಕಾರ್ಯಕರ್ತರಾಗಿದ್ದರು. ಅವರ ತಂದೆ ನಮ್ಮ ಪಕ್ಷದ ವತಿಯಿಂದ 1997-98ರಲ್ಲಿ ವಿಧಾನಸಭೆ ಸಭಾಪತಿ ಆಗಿದ್ರು. ದೇವರು ಆ ಕುಟುಂಬಕ್ಕೆ ಮಾಮನಿ ಅಗಲಿಕೆಯ ನೋವನ್ನ ಭರಿಸುವ ಶಕ್ತಿ ನೀಡಲಿ ಎಂದು ತಿಳಿಸಿದರು.