ಆರ್ಥಿಕ ಲಾಭಕ್ಕಾಗಿ ಮದ್ಯ ಮಾರಾಟಕ್ಕೆ ಆದ್ಯತೆ ನೀಡುತ್ತಿರುವುದು ದುರದೃಷ್ಟಕರ: ಅಣ್ಣಾ ಹಜಾರೆ

Public TV
2 Min Read
ANNA HAZARE

ಮುಂಬೈ: ಆರ್ಥಿಕ ಲಾಭಕ್ಕಾಗಿ ಮದ್ಯ ಮಾರಾಟಕ್ಕೆ ಆದ್ಯತೆ ನೀಡುತ್ತಿರುವುದು ದುರದೃಷ್ಟಕರ ಸಂಗತಿ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಬೇಸರ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರ ಸೂಪರ್ ಮಾರ್ಕೆಟ್ ಮತ್ತು ಕಿರಾಣಿ ಅಂಗಡಿಗಳಲ್ಲಿ ವೈನ್ ಮಾರಾಟಕ್ಕೆ ಅವಕಾಶ ನೀಡಿರುವ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ಸರ್ಕಾರವು ಆರ್ಥಿಕ ಲಾಭಕ್ಕಾಗಿ ಮದ್ಯ ಮಾರಾಟಕ್ಕೆ ಆದ್ಯತೆ ನೀಡುತ್ತಿರುವುದು ದುರದೃಷ್ಟಕರವಾಗಿದೆ. ಮಾದಕ ದ್ರವ್ಯ, ಮದ್ಯವ್ಯಸನದಿಂದ ಜನರನ್ನು ದೂರವಿಡುವುದು ಸರ್ಕಾರದ ಕರ್ತವ್ಯ. ಆದಾಯಕ್ಕಾಗಿ ಮದ್ಯಪಾನ ಮತ್ತು ವ್ಯಸನಕ್ಕೆ ಉತ್ತೇಜನ ನೀಡುವ ನಿರ್ಧಾರ ತೆಗೆದುಕೊಳ್ಳುತ್ತಿರುವುದು ಬೇಸರದ ಸಂಗತಿ ಎಂದರು. ಇದನ್ನೂ ಓದಿ: ಡಿಕೆಶಿಯನ್ನು ಸಿಎಂ ಮಾಡಲು ಸಿದ್ದರಾಮಯ್ಯ ಬಿಡುತ್ತಾರೆಯೇ: ನಲಪಾಡ್‍ಗೆ ಬಿಜೆಪಿ ಗುದ್ದು

spurious liquorರಾಜ್ಯ ಸರ್ಕಾರ ಇತ್ತೀಚೆಗೆ ಸೂಪರ್ ಮಾರ್ಕೆಟ್ ಮತ್ತು ಕಿರಾಣಿ ಅಂಗಡಿಗಳಲ್ಲಿ ವೈನ್ ಮಾರಾಟಕ್ಕೆ ಅವಕಾಶ ನೀಡಲು ನಿರ್ಧರಿಸಿದೆ. ರೈತರ ಹಿತದೃಷ್ಟಿಯಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಇಂತಹ ನಿರ್ಧಾರ ರಾಜ್ಯವನ್ನು ಎಲ್ಲಿಗೆ ಕೊಂಡೊಯ್ಯುತ್ತದೆ ಎಂಬುದು ನಿಜವಾದ ಪ್ರಶ್ನೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರದ ಈ ನಿರ್ಧಾರದ ವಿರುದ್ಧ ರಾಜ್ಯದ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬಗ್ಗೆ ಸರ್ಕಾರದಲ್ಲಿರುವವರು ಬೆಂಬಲಿಸುತ್ತಿದ್ದಾರೆ ಎಂದರು. ರೈತರ ಹಿತರಕ್ಷಣೆ ಕುರಿತು ಮಾತನಾಡಿದ ಅವರು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರಿಗೆ ತಮ್ಮ ಹೊಲಗಳಲ್ಲಿ ಬೆಳೆದ ಬೆಳೆಗೆ ನ್ಯಾಯಯುತ ಬೆಲೆ ನೀಡಬೇಕು. ಆದರೆ, ವರ್ಷಕ್ಕೆ 1,000 ಕೋಟಿ ಲೀಟರ್ ವೈನ್ ಮಾರಾಟ ಮಾಡುವ ಗುರಿಯನ್ನು ನಿಗದಿಪಡಿಸುವ ಮೂಲಕ ಸರ್ಕಾರ ಏನನ್ನು ಸಾಧಿಸಲು ಬಯಸುತ್ತಿದೆ? ಇದರರ್ಥ ಸರ್ಕಾರಕ್ಕೆ ರಾಜ್ಯದ ಜನರು ವ್ಯಸನಿಯಾಗಿದ್ದರೂ ಪರವಾಗಿಲ್ಲ, ಸರ್ಕಾರದ ಆದಾಯ ಹೆಚ್ಚಿಸಬೇಕು ಎಂದು ಕಿಡಿಕಾರಿದರು.

anna hazare 2

ಕಳೆದ ವರ್ಷ ನವೆಂಬರ್‌ನಲ್ಲಿ ಮಹಾರಾಷ್ಟ್ರ ಸರ್ಕಾರವು ಆಮದು ಮಾಡಿಕೊಂಡ ಸ್ಕಾಚ್ ವಿಸ್ಕಿಯ ಮೇಲಿನ ಅಬಕಾರಿ ಸುಂಕವನ್ನು ಶೇ.50 ರಷ್ಟು ಕಡಿಮೆ ಮಾಡಿದೆ. ಈ ರೀತಿಯ ಮದ್ಯದ ಮಾರಾಟವನ್ನು ಹೆಚ್ಚಿಸಲು ಅದರ ಆದಾಯವನ್ನು 100 ಕೋಟಿಯಿಂದ 250 ಕೋಟಿಗೆ ಹೆಚ್ಚಿಸಲು ಸರ್ಕಾರ ಯೋಜಿಸಿದೆ ಎಂದು ತಿಳಿಸಿದರು. ಇದನ್ನೂ ಓದಿ: ನಾನು ಹಿಂದೂತ್ವವಾದಿ, ನನ್ನ ಏಳಿಗೆ ಸಹಿಸದೇ ಕೆಲವರು ಈ ರೀತಿ ಮಾಡಿದ್ದಾರೆ: ಶಾಸಕ ಬೆಲ್ಲದ

ವೈನ್ ಮತ್ತು ಮದ್ಯಗೆ ಉಪಯೋಗಿಸುವ ಹಣ್ಣನ್ನು ಬೆಳೆಯುವ ರೈತರಿಗೆ ಹೆಚ್ಚು ಉತ್ತೇಜನ ಕೊಡುವ ಸಲುವಾಗಿ ರಾಜ್ಯ ಸರ್ಕಾರವು ಸೂಪರ್ ಮಾರ್ಕೆಟ್ ಮತ್ತು ವಾಕ್-ಇನ್ ಶಾಪ್‍ಗಳಲ್ಲಿ ವೈನ್ ಮಾರಾಟಕ್ಕೆ ಅನುಮತಿ ನೀಡಿದೆ ಎಂದು ರಾಜ್ಯ ಸಚಿವ ಸಂಪುಟ ನಿರ್ಧಾರ ಕೈಗೊಂಡಿತ್ತು. ಈ ಕುರಿತು ಮಹಾರಾಷ್ಟ್ರ ಕೌಶಲ್ಯಾಭಿವೃದ್ಧಿ ಸಚಿವ ನವಾಬ್ ಮಲಿಕ್ ಕಳೆದ ಗುರುವಾರ ತಿಳಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *