ಸಿಡ್ನಿ: ಆಸೀಸ್ ಆಟಗಾರರು ಚೆಂಡು ವಿರೂಪಗೊಳಿಸಿ ಸಿಕ್ಕಿ ಬಿದ್ದ ಸಮಯದಲ್ಲಿ ಕೋಚ್ ಡ್ಯಾರೆನ್ ಲೆಹ್ಮನ್ ಆಡಿದ ಆರು ಪದಗಳು ಅವರನ್ನು ಈಗ ಉಳಿಸಿದೆ.
ಹೌದು, ದಕ್ಷಿಣ ಆಫ್ರಿಕಾ ವಿರುದ್ಧ ಮೂರನೇ ಟೆಸ್ಟ್ ಪಂದ್ಯದ ವೇಳೆ ಆಸೀಸ್ ಆರಂಭಿಕ ಆಟಗಾರ ಬ್ಯಾನ್ ಕ್ರಾಫ್ಟ್ ಚೆಂಡು ವಿರೂಪಗೊಳಿಸುತ್ತಿರುವ ವೇಳೆ ಕ್ಯಾಮೆರಾದ ಕಣ್ಣಿಗೆ ಸಿಕ್ಕಿ ಬಿದ್ದಿದ್ದರು. ಇದನ್ನು ನೋಡಿದ ಡ್ಯಾರೆನ್ ಲೆಹ್ಮನ್ ವಾಕಿಟಾಕಿಯಲ್ಲಿ ‘What the f*** is going on?’ ಎಂದು ಮೈದಾನದಲ್ಲಿದ್ದ 12ನೇ ಆಟಗಾರರನ್ನು ಪ್ರಶ್ನಿಸಿದ್ದರು.
Advertisement
Advertisement
ಈ ಕುರಿತು ಪ್ರತಿಕ್ರಿಯೆ ನೀಡಿರುವ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಮುಖ್ಯಸ್ಥ ಜೇಮ್ಸ್ ಸುಂದರ್ಲ್ಯಾಂಡ್ ಪ್ರಕರಣದಲ್ಲಿ ಕೋಚ್ ಲೆಹ್ಮನ್ ಅವರ ಪಾತ್ರದ ಕುರಿತು ಘಟನೆ ವೇಳೆ ಅವರು ವಾಕಿಟಾಕಿ ನಡೆಸಿದ್ದ ಸಂಭಾಷಣೆ ಪ್ರಮುಖ ಸಾಕ್ಷಿಯಾಗಿದೆ. ಇದು ಅವರನ್ನು ಪ್ರಕರಣದ ಶಿಕ್ಷೆಯಿಂದ ಕಾಪಾಡಿದೆ ಎಂದು ತಿಳಿಸಿದ್ದಾರೆ.
Advertisement
ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಬುಧವಾರ ನಾಯಕ ಸ್ಮಿತ್, ಉಪನಾಯಕ ವಾರ್ನರ್ ಗೆ ಒಂದು ವರ್ಷ ಹಾಗೂ ಆರಂಭಿಕ ಆಟಗಾರ ಬ್ಯಾನ್ ಕ್ರಾಫ್ಟ್ ಗೆ 9 ತಿಂಗಳು ಶಿಕ್ಷೆ ವಿಧಿಸಿತ್ತು. ಆದರೆ ಕೋಚ್ ಲೆಹ್ಮನ್ ಗೆ ತಮ್ಮ ಸ್ಥಾನದಲ್ಲಿ ಮುಂದುವರೆಲು ಸೂಚಿಸಿದೆ.
Advertisement
ಪ್ರಕರಣದ ತನಿಖೆ ನಡೆಸಿದ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ನೇಮಿಸಿದ್ದ ಸಮಿತಿಯ ಮುಖ್ಯಸ್ಥ ಇಯಾನ್ ರಾಯ್ ಸತ್ಯಾಂಶವನ್ನು ಹೊರ ತಂದಿದ್ದಾರೆ. ಪ್ರಕರಣದಲ್ಲಿ ಕೋಚ್ ಲೆಹ್ಮನ್ ಪಾತ್ರವಹಿಸಿಲ್ಲ ಹಾಗೂ ಈ ಕುರಿತು ತಿಳಿದಿಲ್ಲ ಎಂಬುದು ತಮಗೆ ತೃಪ್ತಿ ತಂದಿದೆ ಎಂದು ಸುಂದರ್ಲ್ಯಾಂಡ್ ಹೇಳಿದ್ದಾರೆ.
ಇದೇ ವೇಳೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆಟಗಾರರೊಂದಿಗೆ ಪ್ರತ್ಯೇಕವಾಗಿ ಮಾತನಾಡಿದ್ದಾಗಿ ತಿಳಿಸಿದ ಅವರು, ತಮ್ಮ ಕೃತ್ಯದ ಕುರಿತು ಪಶ್ಚಾತ್ತಾಪ ಪಡುತ್ತಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಚೆಂಡು ವಿರೂಪಗೊಳಿಸಿದ ಆಸೀಸ್ ಕಳ್ಳಾಟ ಸೆರೆಹಿಡಿದ ಕ್ಯಾಮೆರಾಮೆನ್ ಈಗ ಹೀರೋ!
ಬಿಸಿಸಿಐ ಸ್ಮಿತ್ ಹಾಗೂ ವಾರ್ನರ್ ಐಪಿಎಲ್ ನಲ್ಲಿ ಭಾಗವಹಿಸಿದಂತೆ ಒಂದು ವರ್ಷ ನಿಷೇಧ ವಿಧಿಸಿದೆ. ಇದರೊಂದಿಗೆ ಕಳ್ಳಾಟದ ನಡೆಸಿದ ಪರಿಣಾಮವಾಗಿ ಇಬ್ಬರು ಆಟಗಾರರು ಸುಮಾರು 13 ಕೋಟಿ ರೂ. ಮೊತ್ತದ ಒಪ್ಪಂದಗಳನ್ನು ಕಳೆದು ಕೊಂಡಿದ್ದಾರೆ. ಇದನ್ನೂ ಓದಿ: ಆಟಗಾರರ ಕಳ್ಳಾಟಕ್ಕೆ ಭಾರೀ ಮೊತ್ತದ ಪ್ರಾಯೋಜಕತ್ವವನ್ನು ಕಳೆದುಕೊಂಡಿತು ಆಸ್ಟ್ರೇಲಿಯಾ!