ದುಬೈ: ಏಷ್ಯಾಕಪ್ ಟೂರ್ನಿಯ ಸೂಪರ್ ಫೋರ್ ಲೀಗ್‌ನಲ್ಲಿ ನಿನ್ನೆ ಭಾರತ ಮತ್ತು ಪಾಕಿಸ್ತಾನ ಸೆಣಸಾಡಿದವು. ರಣರೋಚಕ ಪಂದ್ಯದಲ್ಲಿ ಕೊನೆಯವರೆಗೂ ತೀವ್ರ ಪೈಪೋಟಿ ನೀಡಿದ ಭಾರತ ಕೊನೆಗೂ ಪಾಕಿಸ್ತಾನದ ವಿರುದ್ಧ ಸೋಲನ್ನು ಒಪ್ಪಿಕೊಂಡಿತು.
ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಅರ್ಶ್‌ದೀಪ್ ಬೆಂಬಲಕ್ಕೆ ನಿಂತಿದ್ದಾರೆ. ಒತ್ತಡದಲ್ಲಿದ್ದಾಗ ತಪ್ಪುಗಳು ಸಂಭವಿಸುತ್ತವೆ. ಆದರೆ ಅದರಿಂದ ಕಲಿಯುವುದು ಮತ್ತು ಕಲಿತು ಮುಂದುವರಿಯುವುದು ಬಹಳ ಮುಖ್ಯ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬ್ಯಾಕ್ ಟು ಬ್ಯಾಕ್ ಅರ್ಧಶತಕ ಸಿಡಿಸಿ ಮಿಂಚಿದ ಕೊಹ್ಲಿ – THE KING IS BACK ಎಂದ ಅಭಿಮಾನಿಗಳು
Advertisement
Advertisement
ಪರಿಸ್ಥಿತಿ ಬಿಗಿಯಾಗಿದ್ದಾಗ, ಹೆಚ್ಚಿನ ಒತ್ತಡಗಳು ಇದ್ದಾಗ ತಪ್ಪು ಯಾರೂಬೇಕಾದರೂ ಮಾಡಬಹುದು. ನಿನ್ನೆಯೂ ಪರಿಸ್ಥಿತಿ ಬಿಗಿಯಾಗಿತ್ತು. ನಾನು ನನ್ನ ಮೊದಲ ಚಾಂಪಿಯನ್ ಟ್ರೋಫಿ ಆಡುತ್ತಿದ್ದಾಗ, ಶಾಹಿದ್ ಅಫ್ರಿದಿ ಅವರ ಬೌಲಿಂಗ್‌ಗೆ ಕೆಟ್ಟಹೊಡೆತ ಎದುರಿಸಿದ್ದೆ. ಈಗಲೂ ಅದು ನನಗೆ ನೆನಪಿದೆ. ಅಂದು ನನಗೆ ನಿದ್ರೆ ಮಾಡಲು ಸಾಧ್ಯವಾಗಲೇ ಇಲ್ಲ, ಬೆಳಿಗ್ಗೆ 5 ಗಂಟೆವರೆಗೂ ಅದೇ ಸೀಲಿಂಗ್ ಅನ್ನು ನೋಡುತ್ತಿದೆ. ನನ್ನ ವೃತ್ತಿ ಜೀವ ಮುಗಿದೇಹೋಯ್ತು ಎಂದು ಭಾವಿಸಿದ್ದೆ ಎಂದು ಹಳೆಯ ಘಟನೆಯೊಂದನ್ನು ನೆನಪಿಸಿಕೊಂಡಿದ್ದಾರೆ.
Advertisement
Advertisement
ಟೀಂ ಇಂಡಿಯಾದಲ್ಲಿ ಇದೀಗ ಉತ್ತಮ ವಾತಾವರಣವಿದ್ದು, ಹಿರಿಯ ಆಟಗಾರರು ನಿಮ್ಮ ಸುತ್ತಲೂ ಇದ್ದಾರೆ. ಇದರ ಕ್ರಿಡಿಟ್ ಅನ್ನು ನಾಯಕ ಮತ್ತು ಕೋಚ್‌ಗೆ ನೀಡುತ್ತೇನೆ. ಆಟಗಾರರು ತಮ್ಮ ತಪ್ಪುಗಳಿಂದ ಇನ್ನಷ್ಟು ಕಲಿಯುತ್ತಾರೆ. ಒಬ್ಬರು ತಪ್ಪನ್ನು ಒಪ್ಪಿಕೊಂಡು ಅದನ್ನು ಸರಿಪಸಿಡಿಕೊಳ್ಳಬೇಕು ಎಂದು ಹೇಳಿದ್ದಾರೆ.
ನಿನ್ನೆ ನಡೆದ ಏಷ್ಯಾಕಪ್ ಟೂರ್ನಿಯ ಸೂಪರ್ ಫೋರ್ ಲೀಗ್ ಪಂದ್ಯದಲ್ಲಿ ಪಾಕಿಸ್ತಾನ ಭಾರತದ ವಿರುದ್ಧ 5 ವಿಕೆಟ್‌ಗಳ ಜಯ ಸಾಧಿಸಿತು. ನಿಗದಿತ ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ ಭಾರತ 181 ರನ್ ಗಳಿಸಿತ್ತು. ಬೃಹತ್ ಮೊತ್ತದ ಗುರಿ ಬೆನ್ನತ್ತಿದ್ದ ಪಾಕಿಸ್ತಾನ 19.5 ಓವರ್‌ಗಳಲ್ಲೇ 182 ರನ್ ಗಳಿಸಿ ಜಯ ಸಾಧಿಸಿತು. ಇದನ್ನೂ ಓದಿ: ಪಾಕ್ ಕೈ ಹಿಡಿದ ರಿಜ್ವಾನ್ – ರೋಚಕ ಪಂದ್ಯದಲ್ಲಿ ಭಾರತ ವಿರುದ್ಧ ಪಾಕಿಸ್ತಾನಕ್ಕೆ ಜಯ
ಡೆತ್ ಓವರ್‌ನಲ್ಲಿ ಉತ್ತಮಪ್ರದರ್ಶನ ನೀಡುತ್ತಿದ್ದ ಟೀಂ ಇಂಡಿಯಾ ಗೆಲ್ಲುವ ನಿರೀಕ್ಷೆಯಲ್ಲಿತ್ತು. ಆದರೆ 18ನೇ ಓವರ್‌ನಲ್ಲಿ ರವಿ ಬಿಷ್ಣೋಯ್ ಅವರ ಬೌಲಿಂಗೆ ಸುಲಭವಾಗಿ ನೀಡಿದ ಆಸಿಫ್ ಅಲಿ ಕ್ಯಾಚ್ ಅನ್ನು ಅರ್ಶ್‌ದೀಪ್ ಸಿಂಗ್ ಕೈಚೆಲ್ಲಿದರು. ಇದು ಪಾಕ್ ಗೆಲುವಿಗೆ ತಿರುವು ನೀಡಿತು. ಕೊನೆಯ ಓವರ್‌ನಲ್ಲಿ ಬೌಲಿಂಗ್‌ಗಿಳಿದ ಅರ್ಶ್‌ದೀಪ್ ಅವರ ಮೊದಲ ಎಸೆತದಲ್ಲಿ ಯಾವುದೇ ರನ್ ಬರಲಿಲ್ಲ. ಆದರೆ 2ನೇ ಎಸೆತದಲ್ಲಿ ಫುಲ್‌ಟಾಸ್ ಬೌಲ್ ಮಾಡಿ 4 ರನ್ ಚಚ್ಚಿಸಿಕೊಂಡರು. ಅದರ ಮರು ಎಸೆತದಲ್ಲೇ ಅಸಿಫ್ ಅಲಿ ಅವರ ವಿಕೆಟ್ ಉರುಳಿಸಿದರೂ ಜಯ ಪಾಕಿಸ್ತಾನದ ಪಾಲಾಯಿತು. ಅಂತಿಮವಾಗಿ ಪಾಕಿಸ್ತಾನ 5 ವಿಕೆಟ್‌ಗಳ ಜಯ ಸಾಧಿಸಿತು.