– ಚಿತ್ರದುರ್ಗ ಉಸ್ತುವಾರಿ ಸಚಿವ ಸುಧಾಕರ್ ನಡೆಯನ್ನು ಖಂಡಿಸುತ್ತೇನೆ ಎಂದ ಸಂಸದ
ಚಿತ್ರದುರ್ಗ: ರೇಣುಕಾಸ್ವಾಮಿಯನ್ನು (Renukaswamy Murder Case) ಕಿಡ್ನಾಪ್ ಮಾಡಿ ಕೊಲ್ಲುವಾಗ ಸರ್ಕಾರ ಏನು ಮಾಡುತ್ತಿತ್ತು? ಸರ್ಕಾರ ಜೀವಂತವಿದೆಯೋ ಇಲ್ಲವೋ ಎಂದು ಅನುಮಾನ ಮೂಡಿಸಿದೆ ಎಂದು ಸಂಸದ ಗೋವಿಂದ ಕಾರಜೋಳ (Govinda Karajola) ಕಾಂಗ್ರೆಸ್ (Congress) ವಿರುದ್ಧ ಕಿಡಿಕಾರಿದ್ದಾರೆ.
ದರ್ಶನ್ ಮತ್ತು ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಕೇಸ್ ಬಗ್ಗೆ ಚಿತ್ರದುರ್ಗದಲ್ಲಿ (Chitradurga) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಇಂಟೆಲಿಜೆನ್ಸ್ ಇಲಾಖೆ ಏನು ಮಾಡುತ್ತಿತ್ತು? ಈ ಕೇಸಲ್ಲಿ ಪೊಲೀಸ್ ಅಧಿಕಾರಿಗಳು ನಿಷ್ಕ್ರಿಯಗೊಂಡಿದ್ದು ಯಾಕೆ? ಈ ಸ್ಥಿತಿ ನೋಡಿದಾಗ ಸರ್ಕಾರ ಜೀವಂತ ಇಲ್ಲ ಎನ್ನಿಸಿದೆ ಎಂದರು. ಇದನ್ನೂ ಓದಿ: ಈಜಾಡಲು ಹೋಗಿ ಬಳ್ಳೂರು ಕೆರೆಯಲ್ಲಿ ಮೃತಪಟ್ಟ ವಿದ್ಯಾರ್ಥಿಯ ಶವ ಪತ್ತೆ
ಸ್ಥಳೀಯ ಶಾಸಕ 24 ಗಂಟೆಯೊಳಗೆ ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿಲ್ಲ ಎಂದು ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ಹೆಸರು ಹೇಳದೆ ವಾಗ್ದಾಳಿ ನಡೆಸಿದರು. ಜಿಲ್ಲಾ ಉಸ್ತುವಾರಿ ಸಚಿವ ಈವರೆಗೆ ತಿರುಗಿ ನೋಡಿಲ್ಲ, ಚಿತ್ರದುರ್ಗ ಉಸ್ತುವಾರಿ ಸಚಿವ ಸುಧಾಕರ್ ನಡೆಯನ್ನು ಖಂಡಿಸುತ್ತೇನೆ ಎಂದು ಹರಿಹಾಯ್ದರು. ಇದನ್ನೂ ಓದಿ: ಕೊಲೆಯಾಗಿ 10 ದಿನ ಕಳೆದರೂ ಪತ್ತೆಯಾಗಿಲ್ಲ ರೇಣುಕಾಸ್ವಾಮಿ ಮೊಬೈಲ್