ಇಂದು ಬೆಂಗಳೂರಿನ ಜೆಪಿ ನಗರದ ವೆಂಕಟೇಶ್ವರ ದೇವಸ್ಥಾನದಲ್ಲಿ ನಟ, ಯುವರಾಜಕಾರಣಿ ನಿಖಿಲ್ ಕುಮಾರ್ ಸ್ವಾಮಿ ಪುತ್ರನಿಗೆ ಶಾಸ್ತ್ರೋಕ್ತವಾಗಿ ನಾಮಕರಣ ಶಾಸ್ತ್ರ ನಡೆಯುತ್ತಿದೆ. ಬೆಳಗ್ಗೆ 10.30 ರಿಂದ 12.20ರವರೆಗೂ ನಡೆಯುವ ಶುಭ ಲಗ್ನದಲ್ಲಿ ಮಗುವಿಗೆ ನಾಮಕರಣ ಮಾಡುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ಇದನ್ನೂ ಓದಿ: ಹೇಗಿದ್ದೀರಾ, ಚೆನ್ನಾಗಿದ್ದೀರಾ? ಎಂದು ಕೇಳುವುದನ್ನೇ ನಿಲ್ಲಿಸಿ ಬಿಟ್ಟಿದ್ದೆ : ಧ್ರುವ ಸರ್ಜಾ
Advertisement
ಪ್ರಪೌತ್ರ ಜನನ ಶಾಂತಿ, ನಾಮಕರಣ ಹಾಗೂ ಕನಕಾಭಿಷೇಕ ಕಾರ್ಯಕ್ರಮವನ್ನು ಇದೇ ಸಂದರ್ಭದಲ್ಲಿ ನಡೆಯುತ್ತಿದ್ದು, ದೊಡ್ಡ ಗೌಡರ ಕುಟುಂಬವು ಮೊಮ್ಮಗನಿಗೆ ಆವ್ಯನ್ ದೇವ್ ಎಂದು ಹೆಸರಿಡಲು ನಿರ್ಧರಿಸಿದ್ದಾರಂತೆ. ನಿಖಿಲ್ ಮತ್ತು ರೇವತಿ ದಂಪತಿಯ ಈ ಮಗುವಿಗೆ ಈಗ ಒಂಬತ್ತು ತಿಂಗಳು. ಇದನ್ನೂ ಓದಿ: ಚಿರು ಮಗನನ್ನು ನಾನೇ ಲಾಂಚ್ ಮಾಡುತ್ತೇನೆ : ಅರ್ಜುನ್ ಸರ್ಜಾ
Advertisement
Advertisement
ಈ ಕಾರ್ಯಕ್ರಮಕ್ಕೆ ಕೇವಲ ಕುಟುಂಬಸ್ಥರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಹಾಗಾಗಿ ದೇವೇಗೌಡರ ಕುಟುಂಬ ಮತ್ತು ಅವರ ಆಪ್ತರು ಮಾತ್ರ ಭಾಗಿಯಾಗಿದ್ದಾರೆ. ಮಗು ನಾಮಕರಣಕ್ಕೆ ವಿವಿಧ ಹೂಗಳಿಂದ ಸಿಂಗಾರ ಗೊಂಡಿದ್ದು, ಬೆಳ್ಳಿ ತೊಟ್ಟಿಲಲ್ಲಿ ಮಗುವಿನ ನಾಮಕರಣ ಶಾಸ್ತ್ರ ನಡೆಯಲಿದೆ.