ದಶಕಗಳ ಕಾಲ ಮಾಡುವ ಕೆಲಸವನ್ನು 5 ವರ್ಷದಲ್ಲೇ ಮಾಡಲಾಗಿದೆ: ಯೋಗಿ ಆದಿತ್ಯನಾಥ್

Public TV
1 Min Read
yogi adityanath

ಲಕ್ನೋ: ಉತ್ತರ ಪ್ರದೇಶವು 1947 ಮತ್ತು 2017ರ ನಡುವೆ ದೇಶದಲ್ಲಿ ಆರು ಅಥವಾ ಏಳನೇ ಸ್ಥಾನದಲ್ಲಿತ್ತು. ಆದರೆ ಬಿಜೆಪಿ ಸರ್ಕಾರವು ಆರ್ಥಿಕತೆಯನ್ನು ಎರಡನೇ ಸ್ಥಾನವನ್ನು ತಲುಪಲು ಸಹಾಯ ಮಾಡಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

ದಶಕಗಳ ಕಾಲ ಮಾಡಲಾಗುವ ಕೆಲಸಗಳನ್ನು ಕೇವಲ 5 ವರ್ಷಗಳಲ್ಲಿ ಮಾಡಲಾಗಿದೆ. ಇಂದು ಉತ್ತರ ಪ್ರದೇಶ ಭಾರತದಲ್ಲಿ 2ನೇ ಸ್ಥಾನದಲ್ಲಿದೆ ಅಂತ ಹೇಳಲು ಬಯಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಗೃಹ ಸಚಿವರು ಚಪ್ಪಲಿ ಧರಿಸಬಹುದು, ಅವರ ಭೇಟಿಗೆ ಹೋದವ್ರು ಧರಿಸುವಂತಿಲ್ಲ: ರಾಗಾ ಆರೋಪಕ್ಕೆ BJP ವಿರೋಧ

corona 1 3

ಕಳೆದ ಎರಡು ವರ್ಷಗಳಿಂದ ಕೋವಿಡ್ ಸಾಂಕ್ರಾಮಿಕ ರೋಗ ಉತ್ತರ ಪ್ರದೇಶಕ್ಕೆ ಮಾತ್ರವಲ್ಲ. ಇಡೀ ಜಗತ್ತಿಗೆ ಸವಾಲಾಗಿತ್ತು. ಇದು ಕೇವಲ ಜೀವನದ ಮೇಲೆ ಮಾತ್ರವಲ್ಲ. ಜೀವನೋಪಾಯದ ಮೇಲೂ ಪರಿಣಾಮ ಬೀರಿತ್ತು. ಆದರೆ ರಾಷ್ಟ್ರವನ್ನು ಮುನ್ನಡೆಸಲು ಮತ್ತು ಸವಾಲುಗಳನ್ನು ಎದುರಿಸಿ ಮೇಲೇರಲು ಸಹಾಯ ಮಾಡಿದ್ದಕ್ಕೆ ನಾನು ಪ್ರಧಾನ ಮಂತ್ರಿ ಅವರಿಗೆಗೆ ಧನ್ಯವಾದ ತಿಳಿಸುತ್ತೇನೆ ಎಂದು ಹೇಳಿದ್ದಾರೆ.

ನಾವು ಮುಂದೆ ಸಾಗಲು ಮತ್ತು ಬಲವಾಗಿ ಹೊರಹೊಮ್ಮಲು ಪ್ರಮುಖವಾಗಿ ಲಸಿಕೆ ಸ್ವೀಕರಿಸಿದ ಭಾರತದ ಜನರಿಗೆ, ವಿಶೇಷವಾಗಿ ಉತ್ತರ ಪ್ರದೇಶದ ಜನರಿಗೆ ಅಭಿನಂದಿಸುತ್ತೇನೆ. ಉತ್ತರ ಪ್ರದೇಶದ ಜನಸಂಖ್ಯೆಯ ಶೇ.70ರಷ್ಟು ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಉತ್ತರ ಪ್ರದೇಶ ಭಾರತದ ಎಲ್ಲಾ ರಾಜ್ಯಗಳಲ್ಲಿ ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ನಡೆಸಿದ ರಾಜ್ಯವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಯುಪಿ ಚುನಾವಣೆಯಲ್ಲಿ ಅಖಿಲೇಶ್ ಯಾದವ್‍ರನ್ನು ನಾವು ಬೆಂಬಲಿಸುತ್ತೇವೆ: ಮಮತಾ ಬ್ಯಾನರ್ಜಿ

vaccine 2

 

ಉತ್ತರ ಪ್ರದೇಶದಲ್ಲಿ ಸರ್ಕಾರವು ರಾಜ್ಯವನ್ನು ಮುಂದಕ್ಕೆ ಕೊಂಡೊಯ್ಯಲು ಮತ್ತು ಉತ್ತರ ಪ್ರದೇಶವನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುವ ಜೊತೆಗೆ ಜನರ ಅಗತ್ಯತೆಗಳು ಮತ್ತು ಆಕಾಂಕ್ಷೆಗಳನ್ನು ಪೂರೈಸಲು ಶ್ರದ್ಧೆಯಿಂದ ಮತ್ತು ಸಂಪೂರ್ಣ ಪ್ರಾಮಾಣಿಕತೆಯಿಂದ ಕೆಲಸ ಮಾಡಿದೆ ಎಂದು ಹೇಳಿದ್ದಾರೆ.

2017ರ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ನಂತರ ಯೋಗಿ ಆದಿತ್ಯನಾಥ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಈಗ ಅಧಿಕಾರವನ್ನು ಉಳಿಸಿಕೊಳ್ಳಲು ನಿರ್ಣಾಯಕ ಚುನಾವಣೆಯನ್ನು ಎದುರಿಸುತ್ತಿದ್ದಾರೆ. ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ ಪ್ರಬಲ ಸ್ಪರ್ಧೆ ನೀಡುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *