80 ಸಾವಿರ ಪೊಲೀಸರು ಏನ್ ಮಾಡ್ತಿದ್ದಾರೆ – ಅಮೃತ್‌ಪಾಲ್ ಸಿಂಗ್ ಬಂಧಿಸದ ಸರ್ಕಾರದ ವಿರುದ್ಧ ಹೈಕೋರ್ಟ್ ಚಾಟಿ

Public TV
1 Min Read
Amritpal Singh 3

ಚಂಡೀಗಢ: ಪಂಜಾಬ್‌ನಲ್ಲಿ (Punjab) ಗುಪ್ತಚರ ಇಲಾಖೆ ವಿಫಲವಾಗಿದ್ದು, 80 ಸಾವಿರ ಪೊಲೀಸರಿಂದ ಓರ್ವ ವ್ಯಕ್ತಿಯನ್ನು ಬಂಧಿಸಲು ಸಾಧ್ಯವಾಗಿಲ್ಲ. ಅವರೆಲ್ಲಾ ಏನು ಮಾಡುತ್ತಿದ್ದಾರೆ? ಎಂದು ಪಂಜಾಬ್ ಹರಿಯಾಣ ಹೈಕೋರ್ಟ್ (High Court) ಪಂಜಾಬ್ ಪೊಲೀಸ್ ಇಲಾಖೆಯನ್ನು ತರಾಟೆ ತೆಗೆದುಕೊಂಡಿದೆ.

ಖಲಿಸ್ತಾನಿ (Khalistan) ಬೆಂಬಲಿಗ ಅಮೃತ್‌ಪಾಲ್ ಸಿಂಗ್ (Amritpal Singh) ನಾಪತ್ತೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್‌ಗೆ ಪೊಲೀಸ್ ಇಲಾಖೆಯ ಪರ ವಕೀಲರು ಮಾಹಿತಿ ನೀಡಿದ್ದಾರೆ. ಅಮೃತ್‌ಪಾಲ್ ಸಿಂಗ್ ಇನ್ನೂ ತಲೆಮರೆಸಿಕೊಂಡಿದ್ದಾನೆ. ಆತನ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (NSA) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

Amritpal Singh

ಈ ವಾದ ಆಲಿಸಿದ ಬಳಿಕ ಗರಂ ಆದ ಕೋರ್ಟ್, ಪಂಜಾಬ್ ಸರ್ಕಾರ ತನ್ನ ಜವಬ್ದಾರಿ ನಿಭಾಯಿಸುವಲ್ಲಿ ವಿಫಲವಾಗಿದೆ ಎಂದು ಟೀಕಿಸಿತು. ಅಮೃತ್ ಪಾಲ್ ಹೊರತುಪಡಿಸಿ ಎಲ್ಲರನ್ನೂ ಬಂಧಿಸಿದ್ದು ಹೇಗೆ? ನಾವು ಕಥೆಯನ್ನು ನಂಬಲು ಸಾಧ್ಯವಿಲ್ಲ ಎಂದು ತರಾಟೆಗೆ ತೆಗೆದುಕೊಂಡಿತು. ಇದನ್ನೂ ಓದಿ: ಮರಣದಂಡನೆಗೆ ಯಾವ ವಿಧಾನ ಸೂಕ್ತ?- ತಜ್ಞರ ವರದಿ ಕೇಳಿದ ಸುಪ್ರೀಂಕೋರ್ಟ್

Amritpal Singh 1

ಖಲಿಸ್ತಾನಿ ಬೆಂಬಲಿಗ ಅಮೃತ್ ಪಾಲ್ ಸಿಂಗ್ ಬಂಧನಕ್ಕಾಗಿ ಕಳೆದ 4 ದಿನಗಳಿಂದ ಬಹುದೊಡ್ಡ ಕಾರ್ಯಾಚರಣೆಯನ್ನು ಪಂಜಾಬ್ ಪೊಲೀಸರು ಆರಂಭಿಸಿದ್ದಾರೆ. ಸತತ ಹುಡುಕಾಟದ ಬಳಿಕ ಅಮೃತ್ ಪಾಲ್ ಸಿಂಗ್ ಬಂಧಿಸುವಲ್ಲಿ ವಿಫಲವಾದ ಇಲಾಖೆ ಆತನ ಆಪ್ತರನ್ನು ಬಂಧಿಸಿದೆ. ಅಮೃತ್‌ಪಾಲ್ ಸಿಂಗ್ ಬಂಧನಕ್ಕೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಹಿನ್ನೆಲೆ ರಾಜ್ಯದ ಹಲವು ಪ್ರದೇಶಗಳಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಇದನ್ನೂ ಓದಿ: ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು : ಮೋದಿ ಬಳಿ ಅಫ್ರಿದಿ ಮನವಿ

Share This Article
Leave a Comment

Leave a Reply

Your email address will not be published. Required fields are marked *