ಬೆಂಗಳೂರು: ಕಾಂಗ್ರೆಸ್‌ನಲ್ಲಿ (Congress) ಏನೇ ತೀರ್ಮಾನ ಆಗಬೇಕಾದರೂ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ (HC Mahadevappa) ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಭೇಟಿ ಬಳಿಕ ಮಾತನಾಡಿದ ಅವರು ಸತೀಶ್ ಜಾರಕಿಹೊಳಿ ಹಾಗೂ ನಮ್ಮ ಸಂಬಂಧ ಮೂವತ್ತು ವರ್ಷಕ್ಕಿಂತ ಹೆಚ್ಚಿನದು. ಸತೀಶ್ ಜಾರಕಿಹೊಳಿ ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಅವರನ್ನು ಭೇಟಿ ಮಾಡಿ ಟನಲ್ ಬಗ್ಗೆ ಎಲ್ಲಾ ಚರ್ಚೆ ಮಾಡಿದರು. ದೆಹಲಿಗೆ ಹೋದಾಗ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡುವುದು ಎಲ್ಲಾ ಸಹಜ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಪವರ್ ಶೇರಿಂಗ್ ಏನೇ ಅಂದರು ಹೈಕಮಾಂಡ್ ಏನು ಅಭಿಪ್ರಾಯ ಹೇಳುತ್ತೋ ಅದೇ ಅಂತಿಮ. ನಮ್ಮಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದರು. ಇದನ್ನೂ ಓದಿ: ಸಿಎಸ್‌ಕೆ ಸೋಲಿಸಿ ಬೆಂಗಳೂರಿಗೆ ಆರ್‌ಸಿಬಿ ಟೀಂ ಗ್ರ್ಯಾಂಡ್ ಎಂಟ್ರಿ – ಏರ್‌ಪೋರ್ಟ್‌ನಲ್ಲಿ ಫ್ಯಾನ್ಸ್ ಜಯಘೋಷ
ರಾಜೇಂದ್ರ ಅವರು ಕಂಪ್ಲೆಂಟ್ ಕೊಟ್ಟಿದ್ದಾರೆ. ಪ್ರಭಾವಿ ಯಾರೂ ಎಂದು ನಾನು ಹೇಗೆ ಹೇಳೋಕಾಗುತ್ತದೆ. ತನಿಖೆ ಆಗಲಿ, ಸತ್ಯಾಸತ್ಯತೆ ಗೊತ್ತಾಗುತ್ತದೆ. ಸಂಪುಟ ಪುನರ್ ರಚನೆ ಹೈಕಮಾಂಡ್‌ಗೆ ಬಿಟ್ಟಿದ್ದು. ಶುಕ್ರವಾರ ಸಿಎಂ ಭೇಟಿ ಮಾಡಿದ್ದೆ. ದಲಿತ ಸಮಾವೇಶದ ಬಗ್ಗೆ ಚರ್ಚೆ ಆಗಿಲ್ಲ, ಅಂಬೇಡ್ಕರ್ ಜಯಂತಿ ಆಚರಣೆ ಬಗ್ಗೆ ಮಾತನಾಡಿದೆ ಅಷ್ಟೇ ಎಂದು ತಿಳಿಸಿದರು. ಇದನ್ನೂ ಓದಿ: ಯುಗಾದಿ, ರಾಮನವಮಿ ಹಲಾಲ್ ಮುಕ್ತ ಆಗಲಿ: ಪ್ರಮೋದ್ ಮುತಾಲಿಕ್