LatestMain PostNational

ನನಗೆ ಹುದ್ದೆ ಮುಖ್ಯವಲ್ಲ – ಅಶೋಕ್ ಗೆಹ್ಲೋಟ್

ಜೈಪುರ: ರಾಜಸ್ಥಾನದಲ್ಲಿ ರಾಜಕೀಯ (Rajasthana Politics) ಬಿಕ್ಕಟ್ಟು ಎದುರಾದ್ದರಿಂದ ಎಐಸಿಸಿ (AICC) ಅಧ್ಯಕ್ಷೀಯ ರೇಸ್‌ನಿಂದ ಹೊರಗುಳಿದ ಸಿಎಂ ಅಶೋಕ್ ಗೆಹ್ಲೋಟ್ (Ashok Gehlot) ನನಗೆ ಹುದ್ದೆ ಮುಖ್ಯವಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ನನಗೆ ಹುದ್ದೆ ಮುಖ್ಯವಲ್ಲ, ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತದೆ, ಹಾಗೇ ನಾನು ಮಾಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ: ಅಶೋಕ್‌ ಗೆಹ್ಲೋಟ್‌ ಸ್ಪಷ್ಟನೆ

ಅಶೋಕ್ ಗೆಹ್ಲೋಟ್ (Ashok Gehlot) ಅವರು ಅಧ್ಯಕ್ಷೀಯ ರೇಸ್‌ನಿಂದ ಹೊರಗುಳಿದ ಬಳಿಕ ದಿಗ್ವಿಜಯ್ ಸಂಗ್ (Digvijaya Singh), ಶಶಿ ತರೂರ್ (Shashi Tharoor) ಅವರ ಎಂಟ್ರಿಯಾಗಿದ್ದಾರೆ. ಈ ನಡುವೆಯೇ ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಸಹ ನಾಮಪತ್ರ ಸಲ್ಲಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ರೇಸ್‍ನಲ್ಲಿ ಖರ್ಗೆ – ಕಡೆಯ ಹಂತದಲ್ಲಿ ಕಣಕ್ಕಿಳಿಯುವ ಸಾಧ್ಯತೆ

ಈ ಬಾರಿ ಗಾಂಧಿಯೇತರ ಕುಟುಂಬಸ್ಥರನ್ನು ಎಐಸಿಸಿ ಅಧ್ಯಕ್ಷರನ್ನಾಗಿ ಮಾಡಲು ರಾಹುಲ್ ಗಾಂಧಿ ಹಾಗೂ ಸೋನಿಯಾಗಾಂಧಿ ನಿರ್ಧರಿಸಿದ್ದಾರೆ. ಅಶೋಕ್ ಗೆಹ್ಲೋಟ್ ಎಐಸಿಸಿ ಅಧ್ಯಕ್ಷರಾದ ನಂತರ ಸಚಿನ್ ಪೈಲಟ್ ಅವರನ್ನ ಮುಖ್ಯಮಂತ್ರಿಯಾಗಿ ಮಾಡಲು ಗೆಹ್ಲೋಟ್ ನಿರ್ಧರಿಸಿದ್ದರು. ಆದರೆ ಅಶೋಕ್ ಗೆಹ್ಲೋಟ್ ಬಣದ ಶಾಸಕರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ರಾಜೀನಾಮೆ ಎಚ್ಚರಿಕೆ ನೀಡಿದ್ದರು. ಇದರಿಂದಾಗಿ ಅಶೋಕ್ ಗೆಹ್ಲೋಟ್ ಅಧ್ಯಕ್ಷೀಯ ರೇಸ್‌ನಿಂದ ಹೊರಗುಳಿಯಲು ನಿರ್ಧರಿಸಿದರು.

ಅಕ್ಟೋಬರ್ 17ರಂದು ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

Live Tv

Leave a Reply

Your email address will not be published. Required fields are marked *

Back to top button