ಬೆಂಗಳೂರು: ರಾಜ್ಯ ಬಜೆಟ್‍ನಲ್ಲಿ ಡಿಕೆ ಶಿವಕುಮಾರ್ ನೇತೃತ್ವ ವಹಿಸಿರುವ ಜಲಸಂಪನ್ಮೂಲ ಇಲಾಖೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಏನು ಕೊಡುಗೆ ನೀಡಿದ್ದಾರೆ ಎನ್ನುವುದನ್ನು ನೋಡುವುದಾದರೆ, ಮೇಕೆದಾಟು ಯೋಜನೆಗೆ ಚುರುಕು, ಯೋಜನೆ ಕಾರ್ಯಗತಗೊಳಿಸಲು ಕ್ರಮಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದೆ.
ಅಮೆರಿಕಾದ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಕೆ.ಆರ್.ಎಸ್ ಅಭಿವೃದ್ಧಿಗೆ ಕಾರ್ಯಯೋಜನೆ ಸಿದ್ಧಪಡಿಸಲು 5 ಕೋಟಿ ರೂ. ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಯೋಜನೆಗೆ ಬಂಡವಾಳ ಹೂಡಲು ವಿಶ್ವಮಟ್ಟದ ಉದ್ಯಮಿಗಳು ಉತ್ಸುಕರಾಗಿದ್ದಾರೆ.
ಮಹದಾಯಿ ನದಿ ವಿವಾದದ ತೀರ್ಪು ಇದೇ ಆಗಸ್ಟ್ ನಲ್ಲಿ ಬರಲಿದ್ದು ಇದಾದ ಬಳಿಕ ನ್ಯಾಯಾಧಿಕರಣ ತೀರ್ಪಿನಂತೆ ಕಾಮಗಾರಿ ಕೈಗೊಳ್ಳಲಾಗುವುದು. ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಪುನರ್ವಸತಿ ಹಾಗೂ ಪುನರ್ ನಿರ್ಮಾಣ ಕಾರ್ಯ ತ್ವರಿತಗತಿಯಲ್ಲಿ ನಡಸಲು ತೀರ್ಮಾನ. ಆಲಮಟ್ಟಿ ಜಲಾಶಯದಲ್ಲಿ ಹೆಚ್ಚುವರಿ ನೀರು ಸಂಗ್ರಹಕ್ಕೆ ಒತ್ತು. ಈಗ ಪ್ರಗತಿಯಲ್ಲಿರುವ ಎಲ್ಲಾ ನೀರಾವರಿ ಯೋಜನೆಗಳನ್ನು ಮುಂದಿನ 5 ವರ್ಷಗಳಲ್ಲಿ ರಾಜ್ಯ ಸರ್ಕಾರ ಪೂರ್ಣಗೊಳಿಸಲಿದೆ.
ಒಟ್ಟಾಗಿ ಜಲಸಂಪನ್ಮೂಲ ಕ್ಷೇತ್ರಕ್ಕೆ ಕುಮಾರಸ್ವಾಮಿಯವರು ಒಟ್ಟು 18,142 ಕೋಟಿ ರೂ. ಅನುದಾನ ಮೀಸಲಿಟ್ಟಿದ್ದಾರೆ.