ನವದೆಹಲಿ: ಮುಖ್ಯಮಂತ್ರಿ ಸ್ಥಾನದಿಂದ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಪದಚ್ಯುತಿಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court )ವಜಾಗೊಳಿಸಿದೆ.
ಈ ಪ್ರಕರಣದಲ್ಲಿ ಮಧ್ಯಪ್ರವೇಶ ಮಾಡಲು ಕಾನೂನಿನಲ್ಲಿ ನಮ್ಮಗೆ ಯಾವುದೇ ಹಕ್ಕು ಇಲ್ಲ ಎಂದು ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ. ಇದನ್ನೂ ಓದಿ: ದಕ್ಷಿಣ ಭಾರತದಲ್ಲಿ ಬಿಜೆಪಿಗೆ ದೊಡ್ಡ ಗೆಲುವು ಸಿಗಲಿದೆ – Mission South ಬಗ್ಗೆ ಅಮಿತ್ ಶಾ ಹೇಳಿದ್ದೇನು?
ಜಾರಿ ನಿರ್ದೇಶನಾಲಯ (ED) ಬಂಧನ ಹಿನ್ನೆಲೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಪದಚ್ಯುತಗೊಳಿಸುವಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ದ್ವಿಸದಸ್ಯ ಪೀಠ, ಅಗತ್ಯವಿದ್ದಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ಮಧ್ಯಪ್ರವೇಶ ಮಾಡಲಿ, ಇದನ್ನು ನಿರ್ಧರಿಸಲು ಕಾನೂನಿನಲ್ಲಿ ಯಾವುದೇ ಹಕ್ಕಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಭಾರತವನ್ನು ಅಭಿವೃದ್ಧಿಪಡಿಸಬೇಕಾದರೆ, ಪೂರ್ವ ಭಾರತವನ್ನು ಅಭಿವೃದ್ಧಿಪಡಿಸಬೇಕು – ಮೋದಿ
ಇಡಿಯಿಂದ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ ನಂತರ ದೆಹಲಿಯ ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಮನವಿಯನ್ನು ದೆಹಲಿ ಹೈಕೋರ್ಟ್ ಇತ್ತೀಚೆಗೆ ತಿರಸ್ಕರಿಸಿತ್ತು. ಅರ್ಜಿದಾರರು ನ್ಯಾಯಾಲಯವನ್ನು ರಾಜಕೀಯಕ್ಕೆ ಎಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಹೈಕೋರ್ಟ್ ಹೇಳಿತ್ತು ಮತ್ತು 50,000 ರೂ. ದಂಡವನ್ನು ವಿಧಿಸಲು ಮುಂದಾಯಿತು. ಈ ಹಿನ್ನೆಲೆ ಸುಪ್ರೀಂ ಕೋರ್ಟ್‌ಗೆ ತ್ವರಿತ ಮೇಲ್ಮನವಿ ಸಲ್ಲಿಸಲಾಗಿತ್ತು.