ವಾಹಿನಿಗಳ ಕಾರ್ಯಕ್ರಮಗಳಲ್ಲಿ ಭಾಗಿ ಆಗುವುದು ತಪ್ಪೇನೂ ಇಲ್ಲ. ನಾನು ಬಿಗ್ ಬಾಸ್ ಮನೆಗೆ ಹೋಗಿದ್ದು ಕೇವಲ ಎರಡ್ಮೂರು ತಾಸು ಮಾತ್ರ. ಅಲ್ಲಿನ ಸ್ಪರ್ಧಿಗಳಿಗೆ ಉತ್ತೇಜಿಸಲು ಹೋಗಿದ್ದೆ. ಸ್ಫೂರ್ತಿದಾಯಕ ಮಾತುಗಳನ್ನು ಆಡಿದ್ದೇನೆ. ಬಿಗ್ ಬಾಸ್ ಮನೆಯಲ್ಲಿ ಇರುವವರಿಗೆ ಧೈರ್ಯ ತುಂಬಿದ್ದೇನೆ. ಇದನ್ನು ಯಾಕೆ ವಿವಾದ ಮಾಡಲಾಗುತ್ತಿದೆ ಗೊತ್ತಿಲ್ಲ. ನೂರು ದಿನ ಹೋಗಿದ್ದರೆ ಮಾತನಾಡಬಹುದಿತ್ತು. ಹೋಗಿದ್ದೆ ಮೂರು ತಾಸು ಎಂದು ಪ್ರದೀಪ್ ಈಶ್ವರ್ ಬಿಗ್ ಬಾಸ್ ಗೆ ಹೋಗಿದ್ದನ್ನು ಸಮರ್ಥಿಸಿಕೊಂಡರು.
ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ನಾನು ಡಾ.ರಾಜ್ ಕುಮಾರ್ ಅವರ ಅಭಿಮಾನಿ. ಅವರ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಹಾಡಿಗೆ ನೃತ್ಯ ಮಾಡಿದ್ದೇನೆ. ಡಾನ್ಸ್ ಮಾಡಿದ್ದರಲ್ಲಿ ತಪ್ಪಿಲ್ಲ ಅಂತ ನನಗೆ ಅನಿಸುತ್ತದೆ. ನನ್ನ ಬಗ್ಗೆ ನೆಗೆಟಿವ್ ಮಾತನಾಡುವವರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದಿದ್ದಾರೆ.
ನಿನ್ನೆಯಷ್ಟೇ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ದೊಡ್ಮನೆಯಿಂದ ಹೊರ ಬಂದಿದ್ದಾರೆ. ಮನೆಗೆ ಹೋದ ಮೊದಲ ದಿನವೇ ಸಾಕಷ್ಟು ಸುದ್ದಿ ಮಾಡಿದ್ದರು ಪ್ರದೀಪ್ ಈಶ್ವರ್. ಹಲವು ದಿನಗಳ ಕಾಲ ಸ್ಪರ್ಧಿಯಾಗಿಯೇ ಅವರು ಮನೆಯಲ್ಲಿ ಉಳಿಯಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅವರು ಹೋದದ್ದು ಅತಿಥಿಯಾಗಿ ಎನ್ನುವುದು ಈಗ ಗೊತ್ತಾಗಿದೆ.
ಸರ್ಕಾರಕ್ಕೆ ಪ್ರಶ್ನೆಗಳ ಸುರಿಮಳೆ: ಚಿಕ್ಕಬಳ್ಳಾಪುರ ಜನಪ್ರಿಯ ಮಾತನಾಡುವ ಶಾಸಕ ಎಂದೇ ಖ್ಯಾತರಾಗಿರುವ ಪ್ರದೀಪ್ ಈಶ್ವರ್ ಅಚ್ಚರಿ (Pradeep Eshwar) ಎನ್ನುವಂತೆ ಬಿಗ್ ಬಾಸ್ (Bigg Boss Kannada) ಮನೆ ಪ್ರವೇಶ ಮಾಡಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಇವರು ದೊಡ್ಮನೆಗೆ ಕಾಲಿಡಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ಎರಡು ದಿನ ಕಾಯಿರಿ ನೋಡೋಣ ಎಂದಷ್ಟೇ ಅವರು ಹೇಳಿ ಅಚ್ಚರಿ ಮೂಡಿಸಿದ್ದರು. ಕೊನೆಗೂ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದಾರೆ ಶಾಸಕರು.
ಅನಾಥ ಮಕ್ಕಳಿಗಾಗಿ ಬಿಗ್ ಬಾಸ್ ಮನೆಗೆ ಪ್ರವೇಶ ಮಾಡಿರುವುದಾಗಿ ಹೇಳಿದ್ದಾರೆ. ಬಿಗ್ ಬಾಸ್ ನಿಂದ ಬಂದ ಹಣವನ್ನ ಅಪ್ಪಅಮ್ಮನಿಲ್ಲದ ಮಕ್ಕಳಿಗೆ ನೀಡಲು ನಿರ್ಧಾರ ಮಾಡಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಆದರೆ, ಪ್ರದೀಪ್ ಈಶ್ವರ್ ಬಿಗ್ ಬಾಸ್ ಗೆ ಹೋಗಿರೋ ವಿಚಾರವನ್ನು ಹಲವರು ಪ್ರಶ್ನೆ ಮಾಡಿದ್ದಾರೆ. ಸರ್ಕಾರಕ್ಕೆ ಸಾಮಾನ್ಯರು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಜನಪ್ರತಿನಿಧಿಯಾಗಿ ಇಂತಹ ವೇಳೆಯಲ್ಲಿ ರಿಯಾಲಿಟಿ ಶೋಗೆ ಹೋಗಬಹುದಾ ಎಂದು ಹಲವರು ಸೋಷಿಯಲ್ ಮೀಡಿಯಾ ಮೂಲಕ ಪ್ರಶ್ನೆ ಮಾಡಿದ್ದಾರೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]